Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

ವೀಕ್ಷಣೆ ಜತೆಗೆ ಬೇರೆಯವರಿಗೆ ವರ್ಗಾಯಿಸುತ್ತಿದ್ದ ಆರೋಪಿ

Team Udayavani, Apr 18, 2024, 1:11 PM IST

10-bengaluru’

ಬೆಂಗಳೂರು: ಅಂತರ್ಜಾಲದಲ್ಲಿ ಮಕ್ಕಳ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಡೌನ್‌ಲೋಡ್‌ ಮಾಡಿಕೊಂಡು ವೀಕ್ಷಣೆ ಮಾಡುವ ಜತೆಗೆ ಬೇರೆಯವರಿಗೆ ವರ್ಗಾವಣೆ ಮಾಡಿದ್ದ ಸೆಕ್ಯೂರಿಟಿ ಗಾರ್ಡ್‌ನನ್ನು ಪೂರ್ವ ವಿಭಾಗದ ಸೆನ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಸ್ಸಾಂ ಮೂಲದ ಸುನೈ ಗ್ರಾಮದ ನಿವಾಸಿ ನೂರ್‌ ಇಸ್ಲಾಂ ಚೌದ್ರಿ(37) ಬಂಧಿತ.

ಸಿಐಡಿಯ ಸೈಬರ್‌ ಕ್ರೈಂ ವಿಭಾಗದ ಪೊಲೀಸರ ಸೂಚನೆ ಮೇರೆಗೆ ಎಫ್ ಐಆರ್‌ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಈತನಿಂದ ಒಂದು ಮೊಬೈಲ್‌ ಜಪ್ತಿ ಮಾಡಲಾಗಿದೆ ಎಂದು ಪೂರ್ವ ವಿಭಾಗ ಸೆನ್‌ ಠಾಣೆ ಪೊಲೀಸರು ಹೇಳಿದರು.

ಆರೋಪಿ ನೂರ್‌ ಇಸ್ಲಾಂ ಚೌದ್ರಿ 2 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ಫ್ರೆಜರ್‌ ಟೌನ್‌ನಲ್ಲಿ ವಾಸವಾಗಿದ್ದ. ನಗರದ ಹೈನ್ಸ್‌ ರಸ್ತೆಯಲ್ಲಿರುವ ಎಟಿಎಂ ಕೇಂದ್ರಕ್ಕೆ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಆರೋಪಿ ತನ್ನ ಮೊಬೈಲ್‌ ನಲ್ಲಿ ಆನ್‌ಲೈನ್‌ ಮೂಲಕ ಮಕ್ಕಳ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಡೌನ್‌ಲೋಡ್‌ ಮಾಡಿಕೊಂಡು ವೀಕ್ಷಿಸುತ್ತಿದ್ದ. ಜತೆಗೆ ಅದನ್ನು ಬೇರೆಯವರಿಗೆ ವರ್ಗಾವಣೆ ಮಾಡಿದ್ದ.

ಈ ಮಾಹಿತಿ ಸಂಗ್ರಹಿಸಿದ್ದ ಕೇಂದ್ರ ಗೃಹ ಇಲಾಖೆ ಅಧೀನದಲ್ಲಿರುವ ಎನ್‌ಸಿಆರ್‌ಬಿ ಪೋರ್ಟಲ್‌ ವಿಭಾಗ ರಾಜ್ಯದ ಸಿಐಡಿ ಸೈಬರ್‌ ಅಧಿಕಾರಿಗಳಿಗೆ ಸೈಬರ್‌ ಟಿಪ್‌ಲೈನ್‌ ನಂಬರ್‌ ಸಹಿತ ಮಾಹಿತಿ ನೀಡಿತ್ತು. ಇಲ್ಲಿನ ಸಿಐಡಿ ಅಧಿಕಾರಿಗಳು ಆರೋಪಿ ಮೊಬೈಲ್‌ನ ಐಪಿ ವಿಳಾಸ ಮತ್ತು ಇತರೆ ಮಾಹಿತಿ ಸಂಗ್ರಹಿಸಿ ಪೂರ್ವ ವಿಭಾಗದ ಸೆನ್‌ ಠಾಣೆ ಪೊಲೀಸರಿಗೆ ದೂರು ದಾಖಲಿಸಿ ಕಾನೂನು ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸೆನ್‌ ಠಾಣೆ ಪೊಲೀಸರು ಹೇಳಿದರು. ಪೂರ್ವ ವಿಭಾಗದ ಸಿಇಎನ್‌ ಠಾಣೆಯ ಇನ್‌ಸ್ಪೆಕ್ಟರ್‌ ಉಮೇಶ್‌ ಕುಮಾರ್‌ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದೆ.

ಇಂತಹ ಕೃತ್ಯಗಳ ಪತ್ತ ಹೇಗೆ?

ಇಂತಹ ಕೃತ್ಯಗಳ ಪತ್ತೆಗಾಗಿ ಕೇಂದ್ರ ಗೃಹ ಇಲಾಖೆಯ ಅಡಿಯಲ್ಲಿರುವ ಸೈಬರ್‌ ಕ್ರೈಂ ಪ್ರಿವೇಷನ್‌ ಎಗೆನೆಷ್ಟ್ ವುಮೆನ್‌ ಆ್ಯಂಡ್‌ ಚಿಲ್ಡ್ರನ್‌, ನ್ಯಾಷನಲ್‌ ಸೈಬರ್‌ ಕ್ರೈಂ ರಿಪೋರ್ಟ್‌ ಪೋರ್ಟಲ್‌, ನ್ಯಾಷನಲ್‌ ಸೆಂಟರ್‌ ಮಿಸ್ಸಿಂಗ್‌ ಆ್ಯಂಡ್‌ ಎಕ್ಸ್‌ಪ್ಲೆ„ಟೆಡ್‌ ಚಿಲ್ಡರ್ನ್(ಎನ್‌ ಸಿಎಂಇಸಿ) ಎಂಬ ಪೋರ್ಟಲ್‌ ತೆರೆಯಲಾಗಿದೆ.

ಈ ಸಾಫ್ಟ್ವೇರ್‌ಗಳ ಮೂಲಕ ಮಕ್ಕಳ ಅಶ್ಲೀಲ ವಿಡಿಯೋ ಮತ್ತು ಫೋಟೋವನ್ನು ಆನ್‌ಲೈನ್‌ ಮೂಲಕ ಡೌನ್‌ಲೋಡ್‌ ಮಾಡುವುದು, ವೀಕ್ಷಿಸುವುದು, ವರ್ಗಾಯಿ ಸುವ ವ್ಯಕ್ತಿಗಳ ಚಲನವಲನಗಳನ್ನು ಎಲೆಕ್ಟ್ರಾನಿಕ್ಸ್‌ ಸರ್ವಿಸ್‌ ಪ್ರೋವೈಡರ್‌ಗಳ ಮೂಲಕ ಮಾಹಿತಿ ಪಡೆದುಕೊಂಡು, ಸೈಬರ್‌ ಟಿಪ್‌ ಲೈನ್‌ ವರದಿ ನಂಬರ್‌ ಸಮೇತ ರಾಜ್ಯದ ಸಿಐಡಿಗೆ ಮಾಹಿತಿ ನೀಡಲಾಗುತ್ತದೆ. ಸಿಐಡಿ ಅಧಿಕಾರಿಗಳು ಆರೋಪಿಯ ಐಪಿ ವಿಳಾಸ ಹಾಗೂ ಇತರೆ ಮಾಹಿತಿ ಸಂಗ್ರಹಿಸಿ ಸಂಬಂಧಿಸಿದ ಪೊಲೀಸ್‌ ಠಾಣೆ ಮಾಹಿತಿ ನೀಡುತ್ತಾರೆ.

ಟಾಪ್ ನ್ಯೂಸ್

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ!

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!

22-bantwala-5

Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ

7

BBK11: ತಾಯಿಯನ್ನು ನೆನೆದು ಬಿಗ್‌ ಬಾಸ್‌ ವೇದಿಕೆಯಲ್ಲೇ ಕಣ್ಣೀರಿಟ್ಟ ಕಿಚ್ಚ ಸುದೀಪ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-cm

Waqf: ರೈತರಿಗೆ ನೀಡಿರುವ ನೋಟಿಸ್‌ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Kannada Rajyotsava: ಪಾಲಿಕೆ ಆಡಳಿತದಲ್ಲಿ  ಸಂಪೂರ್ಣ ಕನ್ನಡ: ತುಷಾರ್‌

Kannada Rajyotsava: ಪಾಲಿಕೆ ಆಡಳಿತದಲ್ಲಿ  ಸಂಪೂರ್ಣ ಕನ್ನಡ: ತುಷಾರ್‌

Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು

Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು

Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು

Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು

Bengaluru: ಬ್ಯಾಗ್‌ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್‌

Bengaluru: ಬ್ಯಾಗ್‌ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

25-kota

Kota: ಮರೆಯಾಗುತ್ತಿವೆ ಮೇಟಿ ಪೂಜೆ, ರಾಶಿ ಪೂಜೆ

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.