ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ
Team Udayavani, Apr 16, 2024, 2:30 PM IST
ಬೆಂಗಳೂರು: ವೃದ್ಧಾಶ್ರಮ ಹಾಗೂ ಪುನವರ್ಸತಿ ಕೇಂದ್ರ ಸ್ವಚ್ಛಗೊಳಿಸಲು ಬಂದ ಅಪ್ಪ-ಮಗ ಮಾಲೀಕರ ಮನೆಯಲ್ಲಿದ್ದ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.
ಈ ಸಂಬಂಧ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಳ್ಳಾರಿಯ ಕಂಪ್ಲಿ ತಾಲೂಕಿನ ಮಿರ್ಜಾ ದಾದಾ ನೂರುದ್ದಿನ್ (50) ಮತ್ತು ಆತನ ಪುತ್ರ ಸೈಯದ್ ಬೇಗ್(19) ಎಂಬವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 1.25 ಕೆ.ಜಿ. ಚಿನ್ನಾಭರಣ, 2 ಕೆ.ಜಿ.ಬೆಳ್ಳಿ ಸಾಮಾಗ್ರಿ ಹಾಗೂ 21.5 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಕಡಬಗೆರೆಯ ಕಮಲಾ ಎಂಬವರ ಮನೆಯಲ್ಲಿ ಕಳ್ಳತನ ಮಾಡಿದ್ದರು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ದೂರುದಾರೆ ಕಮಲಾ ಕಡಬಗೆರೆಯಲ್ಲಿನ ಬಹುಮಹಡಿ ಕಟ್ಟಡದಲ್ಲಿ ವೃದ್ಧಾಶ್ರಮ ಹಾಗೂ ಪುನವರ್ಸತಿ ಕೇಂದ್ರ ನಡೆಸುತ್ತಿದ್ದಾರೆ. ಇದೇ ಕಟ್ಟಡದ ನೆಲ ಮಹಡಿಯಲ್ಲಿ ಕುಟುಂಬ ಸಮೇತ ವಾಸವಾಗಿದ್ದಾರೆ. ಆಶ್ರಮದಲ್ಲಿ 10ಕ್ಕೂ ಹೆಚ್ಚು ಮಂದಿ ವೃದ್ಧರಿದ್ದಾರೆ. 15 ದಿನಕ್ಕೊಮ್ಮೆ ಆರೋಪಿ ಸೈಯದ್ ಬೇಗ್ ವೃದ್ಧಾಶ್ರಮ ಸ್ವಚ್ಛಗೊಳಿಸಿ ಹೋಗುತ್ತಿದ್ದ. ಈ ವೇಳೆ ದೂರುದಾರರ ಹಣಕಾಸಿನ ವ್ಯವಹಾರ ಹಾಗೂ ಚಿನ್ನಾಭರಣ ಇರುವುದನ್ನು ಆರೋಪಿ ತಿಳಿದುಕೊಂಡಿದ್ದ.
ಈ ಮಧ್ಯೆ ಕೆಲ ದಿನಗಳ ಹಿಂದೆ ವೃದ್ಧಾಶ್ರಮ ಸ್ವಚ್ಛಗೊಳಿಸಲು ಬಂದಾಗ ಕಮಲಾಗೆ ಅವರ ಪುತ್ರ ಲಕ್ಷಾಂತರ ರೂ. ಕೊಟ್ಟಿರುವುದನ್ನು ಗಮನಿಸಿದ್ದಾನೆ. ಈ ವೇಳೆ ಏ.9ರಂದು ಕಮಲಾ ಯುಗಾದಿ ಹಬ್ಬದ ಪ್ರಯುಕ್ತ ಬನಶಂಕರಿಯಲ್ಲಿರುವ ಪುತ್ರನ ಮನೆಗೆ ಹೋಗಿದ್ದರು. ಈ ವಿಚಾರ ತಿಳಿದ ಕೂಡಲೇ ಆರೋಪಿ ತನ್ನ ತಂದೆಗೆ ಕರೆ ಮಾಡಿ ವೃದ್ಧಾಶ್ರಮದ ಬಳಿ ಕರೆಸಿಕೊಂಡಿದ್ದಾನೆ. ಬಳಿಕ ಇಬ್ಬರು ಸೇರಿ ಮನೆಯ ಬಾಗಿಲು ಒಡೆದು 1 ಕೋಟಿ ರೂ. ಮೌಲ್ಯದ ವಜ್ರ,ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದರು. ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬಾಲದಂಡಿ ಹೇಳಿದರು.
ಮನೆಯಲ್ಲಿ ಖಾರದ ಪುಡಿ ಎರಚಿದ್ದರು!: ಆರೋಪಿಗಳು ಮನೆಯಲ್ಲಿ ಕಳ್ಳತನ ಎಸಗಿದ ಬಳಿಕ ಸಾಕ್ಷ್ಯಾ ನಾಶ ಪಡಿಸಲು ಮನೆಯ ಎಲ್ಲೆಡೆ
ಖಾರದ ಪುಡಿ ಎರಚಿದ್ದರು. ಕಳವು ಮಾಡಿದ ಚಿನ್ನಾಭರಣ, ನಗದನ್ನು ವೃದ್ಧಾಶ್ರಮದ ಸಮೀಪದಲ್ಲಿರುವ ಮನೆಯಲ್ಲೇ ಇರಿಸಿದ್ದರು. ಒಂದೆರಡು ದಿನಗಳಲ್ಲಿ ಬಳ್ಳಾರಿಗೆ ಪರಾರಿಯಾಗಲು ಮುಂದಾಗಿದ್ದರು. ಅಷ್ಟರಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದರು. ಮಾದನಾಯಕನಹಳ್ಳಿ ಠಾಣಾಧಿಕಾರಿ ಮುರಳೀಧರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.