ಜೂನ್‌ನಲ್ಲಿ ಪರೀಕ್ಷೆಗೆ ಚಿಂತನೆ
Team Udayavani, Apr 17, 2020, 2:32 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಲಾಕ್‌ಡೌನ್ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಜೂನ್ ವೇಳೆಗೆ ನಡೆಸುವ ಉದ್ದೇಶ ಇದ್ದು, ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.
ವಿವಿಗಳ ಕುಲಪತಿಗಳೊಂದಿಗೆ ಗುರುವಾರ ವೀಡಿಯೋ ಕಾನ್ಫರೆನ್ಸ್ ನಡೆಸಿದ ನಂತರ ಮಾತನಾಡಿದ ಅವರು, ಕಾಲೇಜುಗಳಲ್ಲಿ ಶೈಕ್ಷಣಿಕ ವರ್ಷದ ಪಾಠ ಪ್ರವಚನಗಳು ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಪರೀಕ್ಷೆ ಯಾವಾಗ, ಹೇಗೆ ನಡೆಸಬೇಕು ಎಂಬ ಬಗ್ಗೆ ಕುಲಪತಿಗಳ ಸಲಹೆ ಕೇಳಲಾಗಿದೆ. ಆನ್‌ಲೈನ್ ಮೂಲಕ ಪಾಠ ಪೂರ್ಣಗೊಳಿಸಿ ಪರೀಕ್ಷೆ ನಡೆಸಬೇಕೇ ಅಥವಾ ತರಗತಿಗಳು ಆರಂಭವಾದ ನಂತರ ತಡವಾಗಿ ಪರೀಕ್ಷೆ ನಡೆಬೇಕೇ ಎಂಬ ಬಗ್ಗೆ ಮಾಹಿತಿ ಕೋರಲಾಗಿದೆ ಎಂದರು ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು ವಾಟ್ಸಪ್ ಅಥವಾ ಇಮೇಲ್ ಮೂಲಕ ಶುಕ್ರವಾರ ತಮ್ಮ ಅಭಿಪ್ರಾಯ ತಿಳಿಸಲಿದ್ದಾರೆ.
ಪ್ರಾಯೋಗಿಕ ಪರೀಕ್ಷೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು, ಆಂತರಿಕ ಪರೀಕ್ಷೆಯ ಅಂಕಗಳನ್ನು ಆಧರಿಸಿ ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶ ನಿರ್ಧರಿಸುವ ಬಗ್ಗೆಯೂ ಚಿಂತನೆ ನಡೆದಿದೆ ಎಂದು ವಿವರಿಸಿದರು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಿನ್ನೆಲೆಯಲ್ಲಿ ಎಲ್ಲಾ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಪಠ್ಯಕ್ರಮ, ಬೋಧನಾ ವಿಧಾನ, ಪರೀಕ್ಷಾ ವಿಧಾನ ಬದಲಾವಣೆಗೆ ಚಿಂತನೆ ನಡೆದಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಈಗ ಅಥವಾ ನಂತರದ ದಿನಗಳಲ್ಲಿ ಅನುಷ್ಠಾನಗೊಳಿಸಬೇಕೆ ಎಂಬ ಬಗ್ಗೆ ಪರಿಶೀಲನೆ ನಡೆಸಿ ಸಲಹೆ ನೀಡಲು ಸಮಿತಿಗಳನ್ನು ರಚಿಸಲಾಗಿದೆ.
ಗ್ರಾಮೀಣ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ಕಷ್ಟ
ಬೆಂಗಳೂರು: ಆನ್ ಲೈನ್ ತರಗತಿ ರಾಜ್ಯದ ಗ್ರಾಮೀಣ ಭಾಗದ ಪದವಿ ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆಯಾಗುತ್ತಿದೆ. ಬಹುತೇಕ ಕಾಲೇಜುಗಳು ಝೂಮ್ ಆ್ಯಪ್ ಮೂಲಕ ಆನ್ ಲೈನ್ ತರಗತಿ ಆರಂಭಿಸಿವೆ. ಸರ್ಕಾರಿ ಪದವಿ ಕಾಲೇಜಿನಲ್ಲಿ ಆನ್ ಲೈನ್ ತರಗತಿ ಅಷ್ಟೊಂದು ಪರಿಣಾಮಕಾರಿಯಾಗಿ ಆರಂಭವಾಗಿಲ್ಲ. ಇನ್ನು ಕೆಲವೆಡೆ ಆನ್ ಲೈನ್ ತರಗತಿ ಆರಂಭಿಸಿವೆ. ಆದರೆ, ಗ್ರಾಮೀಣ ವಿದ್ಯಾರ್ಥಿಗಳಿಗೆ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆನ್ಲ„ನ್ ತರಗತಿಯಲ್ಲಿ ಭಾಗವಹಿಸಲು ನಾನಾ ಕಂಟಕ ಎದುರಾಗುತ್ತಿದೆ. ಕೆಲವು ವಿದ್ಯಾರ್ಥಿಗಳಲ್ಲಿ ಸಮರ್ಪಕವಾದ ಅಥವಾ ಆ್ಯಪ್ ಗೆ
ಸರಿಹೊಂದುವ ಸ್ಮಾರ್ಟ್ ಫೋನ್‌ಗಳಿಲ್ಲ. ಇನ್ನು ಕೆಲವೆಡೆ ನೆಟ್‌ವರ್ಕ್ ಸಮಸ್ಯೆ ಹೆಚ್ಚಿದೆ. ವಾಣಿಜ್ಯ ವಿಭಾಗದ ಕೆಲವೊಂದು ತರಗತಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ 50ಕ್ಕಿಂತಲೂ ಅಧಿಕವಿದೆ. ಹೀಗಾಗಿ ಏಕಕಾಲದಲ್ಲಿ ಎಲ್ಲರೂ ಆನ್ ಲೈನ್ ಮೂಲಕ ಸೇರಿಕೊಳ್ಳಲು ಆಗುತ್ತಿಲ್ಲ. ಆನ್ಲ„ನ್ ತರಗತಿ ನಡೆಸಲು ನಿರ್ದಿಷ್ಟ ಸೂಚನೆ ಬಂದಿಲ್ಲ. ಆದರೆ, ಕೆಲವೊಂದು ಕಾಲೇಜುಗಳಲ್ಲಿ ಈಗಾಗಲೇ ಆರಂಭಿಸಿದ್ದಾರೆ. ಶೇ.100ರಷ್ಟು ಪರಿಣಾಮಕಾರಿಯಾಗಿ ತರಗತಿ ನಡೆಸಲು ಸಾಧ್ಯವಿಲ್ಲ ಎಂದು ಪದವಿ ಕಾಲೇಜಿನ ಪ್ರಾಧ್ಯಾಪಕರೊಬ್ಬರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.