Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ
Team Udayavani, May 21, 2024, 9:47 AM IST
ಬೆಂಗಳೂರು: ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಮಾರಕಾಸ್ತ್ರ ತೋರಿಸಿ ಗ್ರಾಹಕರನ್ನು ಬೆದರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಡಿ.ಜೆ.ಹಳ್ಳಿ ದುಬೈ ಲೇಔಟ್ ನಿವಾಸಿ ಸೈಯದ್ ಸುಹೇಬ್(24) ಮತ್ತು ಡಿ.ಜೆ.ಹಳ್ಳಿ ಸಕ್ಕರೆ ಮಂಡಿ ನಿವಾಸಿ ಸೈಯದ್ ಮುಬಾರಕ್ (23) ಬಂಧಿತರು.
ಆರೋಪಿಗಳಿಂದ ಮಾರಕಾಸ್ತ್ರ ಜಪ್ತಿ ಮಾಡಲಾಗಿದೆ. ಆರೋಪಿಗಳು ಮೇ 12ರಂದು ಹೆಣ್ಣೂರು ಠಾಣಾ ವ್ಯಾಪ್ತಿಯ ಬಾಲಾಜಿ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಕೊಂಡು ಗ್ರಾಹಕರಲ್ಲಿ ಭಯ ಉಂಟು ಮಾಡುತ್ತಿದ್ದರು.
ಈ ಬಗ್ಗೆ ಹೆಣ್ಣೂರು ಪೊಲೀಸ್ ಠಾಣೆಯ ಹೊಯ್ಸಳ ಗಸ್ತು ವಾಹ ನದ ಸಿಬ್ಬಂದಿಗೆ ಮಾಹಿತಿ ಬಂದಿದೆ. ಈ ದೂರಿನ ಮೇರೆಗೆ ತಕ್ಷಣ ಹೊಯ್ಸಳ ಸಿಬ್ಬಂದಿ ಬಾರ್‌ಗೆ ತೆರಳಿ ಇಬ್ಬರು ಆರೋಪಿ ಗಳನ್ನು ಮಾರಕಾಸ್ತ್ರ ಸಹಿತ ವಶಕ್ಕೆ ಪಡೆದಿದ್ದಾರೆ. ಆರೋಪಿ ಸೈಯದ್ ಸುಹೇಬ್ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರೆ, ಮತ್ತೂಬ್ಬ ಆರೋಪಿ ಸೈಯದ್ ಮುಬಾರಕ್ ಕಾರು ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ. ಇಬ್ಬರ ವಿರುದ್ಧ ಈ ಹಿಂದೆ ಯಾವುದೇ ಅಪರಾಧ ಪ್ರಕರಣಗಳು ದಾಖಲಾಗಿಲ್ಲ ಎಂದು ಪೊಲೀಸರು ಹೇಳಿದರು.
ಈ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ಹೊಸ ಸೇರ್ಪಡೆ
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.