Udyan Express ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ದುರಂತ, ಮೆಜೆಸ್ಟಿಕ್ ಸುತ್ತ ದಟ್ಟ ಹೊಗೆ
Team Udayavani, Aug 19, 2023, 9:56 AM IST
ಬೆಂಗಳೂರು: ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಶನಿವಾರ ಬೆಳಿಗ್ಗೆ ಪ್ರಯಾಣಿಕರನ್ನು ಹೊತ್ತ ರೈಲು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬಂದು ನಿಂತು ಸುಮಾರು ಎರಡು ಗಂಟೆಗಳ ಬಳಿಕ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ, ಕೂಡಲೇ ಎಚ್ಚೆತ್ತ ಪ್ರಯಾಣಿಕರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ, ಈ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅವಘಡವನ್ನು ತಪ್ಪಿಸಿದ್ದಾರೆ.
ಮೊದಲಿಗೆ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬಳಿಕ ಪಕ್ಕದ ಎರಡು ಬೋಗಿಗಳಿಗೆ ಆವರಿಸಿಕೊಂಡಿದೆ ಎನ್ನಲಾಗಿದೆ.
ಬೆಂಕಿ ಆವರಿಸಿದ ಪರಿಣಾಮ ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡಿದೆ.
ತಾಂತ್ರಿಕ ಸಮಸ್ಯೆಯಿಂದ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ, ತನಿಖೆ ಬಳಿಕ ನಿಖರ ಕಾರಣ ತಿಳಿದುಬರಬೇಕಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Bihar journalist: ಮನೆಯಲ್ಲೇ ಬಿಹಾರ ಪತ್ರಕರ್ತನ ಗುಂಡಿಕ್ಕಿ ಹತ್ಯೆ: ನಾಲ್ವರು ವಶಕ್ಕೆ
#WATCH | Bengaluru, Karnataka: Fire broke out in Udyan Express after it reached Sangolli Rayanna Railway Station. The incident happened 2 hours after passengers deboarded the train. No casualties or injuries. Fire engine and experts reached the spot and asserting the situation.… pic.twitter.com/laBLreFDgI
— ANI (@ANI) August 19, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.