ಅನವಶ್ಯಕವಾಗಿ ವಾಹನ ಬಳಸಿದರೆ ಜಪ್ತಿ: ಆಯುಕ್ತ
Team Udayavani, Jul 5, 2020, 5:25 AM IST
ಬೆಂಗಳೂರು: ಕೋವಿಡ್ 19 ಸೋಂಕು ಹಬ್ಬುವುದಕ್ಕೆ ಕಡಿವಾಣ ಹಾಕಲು ಸರ್ಕಾರ ಶನಿವಾರ ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡಿದ್ದು, ಈ ಅವಧಿಯಲ್ಲಿ ಅನವಶ್ಯಕವಾಗಿ ವಾಹನ ಬಳಸಿದರೆ ವಾಹನ ಜಪ್ತಿ ಆಗಲಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌ಅನಿಲ್‌ಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ನಗರದ ಜನತೆ ನಿಯಮ ಮೀರಿ ಅನಗತ್ಯವಾಗಿ ಓಡಾಡಿದರೆ ಕೇಸು ದಾಖಲಾಗುತ್ತದೆ. ಲಾಕ್‌ಡೌನ್ ಇರುವುದ ರಿಂದ ಅಗತ್ಯ ಸೇವೆಗಳ ವಾಹನ ಹೊರತುಪಡಿಸಿ ಬೇರೆ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ. ಒಂದು ವೇಳೆ ಲಾಕ್‌ಡೌನ್ ನಿಯಮ ಮೀರಿ ವಾಹನಗಳನ್ನು ಹೊರಗೆ ತಂದಲ್ಲಿ ಅಂತಹ ವಾಹನಗಳನ್ನು ಪೊಲೀಸರು ಜಪ್ತಿ ಮಾಡಲಿದ್ದಾರೆ.
ನಂತರ ನ್ಯಾಯಾಲಯದ ಮೂಲಕ ವಾಹನ ಗಳನ್ನು ಬಿಡಿಸಿಕೊಳ್ಳಬೇಕಾಗುತ್ತದೆ. ಈ ವೇಳೆ ನ್ಯಾಯಾಲಯ ಸೂಚಿಸಿದಷ್ಟು ದಂಡವನ್ನೂ ಪಾವತಿಸಬೇಕು ಎಂದರು. ಭಾನುವಾರ ಅಗತ್ಯ ಸೇವೆಗಳ ಮಾರಾಟಕ್ಕೆ ಮಾತ್ರ ಅವಕಾಶ. ದಿನಸಿ ಅಂಗಡಿ, ಹಣ್ಣು-ತರಕಾರಿ ಅಂಗಡಿ, ಮಾಂಸದಂಗಡಿ, ಔಷಧಿ ಮಳಿಗೆ ತೆರೆದಿರುತ್ತವೆ. ಸಾರ್ವಜನಿಕರು ನಿಯಮ ಪಾಲಿಸ ಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.