![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 12, 2022, 5:59 PM IST
ದಾವಣಗೆರೆ: ರಾಜ್ಯ ಸರ್ಕಾರ ಪ್ರತಿ ಕ್ವಿಂಟಲ್ ಈರುಳ್ಳಿಗೆ 2500 ರೂಪಾಯಿ ಬೆಂಬಲ ಬೆಲೆ ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ಅಧ್ಯಕ್ಷ ಎನ್.ಎಂ. ಸಿದ್ದೇಶ್ ಒತ್ತಾಯಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷದಿಂದ ಈರುಳ್ಳಿಗೆ ಉತ್ತಮ ಧಾರಣೆ ದೊರೆಯದೆ ಬೆಳೆಗಾರರು ಅಕ್ಷರಶಃ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಮಧ್ಯ ಪ್ರವೇಶ ಮಾಡಿ ಪ್ರತಿ ಕ್ವಿಂಟಲ್‌ಗೆ 2,500 ರೂಪಾಯಿ ಬೆಂಬಲ ಬೆಲೆ ಘೋಷಿಸುವ ಮೂಲಕ ಬೆಳೆಗಾರರ ಸಂರಕ್ಷಣೆ ಮಾಡಬೇಕು ಎಂದರು.
ರಾಜ್ಯಾದ್ಯಂತ ಸತತ ಮೂರು ವರ್ಷಗಳಿಂದ ಈರುಳ್ಳಿಗೆ ಕೊಳೆ ರೋಗ ಒಂದು ರೀತಿಯಲ್ಲಿ ಕೊರೊನಾ ವೈರಸ್‌ನಂತೆ ಬಾಧಿ ಸುತ್ತಿದೆ. ಕೊಳೆರೋಗದ ಬಗ್ಗೆ ವಿಜ್ಞಾನಿಗಳು ಸಹ ಪರಿಶೀಲನೆ ನಡೆಸಿ ಸಲಹೆ ನೀಡಿದ್ದಾರೆ. ಆದರೆ ಯಾವುದೂ ಉಪಯೋಗಕ್ಕೆ ಬಾರದಂತಾಗಿದೆ. ಹಾಗಾಗಿ ಈರುಳ್ಳಿ ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ತಿಳಿಸಿದರು.
ಒಂದು ಎಕರೆಯಲ್ಲಿ ಈರುಳ್ಳಿ ಬೆಳೆಯಲು ಕನಿಷ್ಠ ಒಂದು ಲಕ್ಷ ರೂ. ಖರ್ಚಾಗುತ್ತದೆ. ಅಷ್ಟೊಂದು ಖರ್ಚು ಮಾಡಿದರೂ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಇಲ್ಲದೆ ನಷ್ಟ ಅನುಭವಿಸುವಂತಾಗಿದೆ. ದಲ್ಲಾಲರಿಗೆ ಲಾಭ ಆಗುತ್ತಿದೆಯೇ ಹೊರತು ಕಷ್ಟಪಟ್ಟು ಬೆಳೆದಂತಹ ರೈತರಿಗೆ ಯಾವುದೇ ಲಾಭ ದೊರೆಯುತ್ತಿಲ್ಲ. ಕಾರಣ ಸರ್ಕಾರ ಪ್ರತಿ ಕ್ವಿಂಟಲ್ ಗೆ 2500 ರೂ. ಬೆಂಬಲ ಬೆಲೆ ಘೋಷಿಸಬೇಕು ಎಂದರು.
ಈಗ ಮುಕ್ತ ಮಾರುಕಟ್ಟೆಯಲ್ಲಿ ಒಂದು ಕ್ವಿಂಟಲ್ ಈರುಳ್ಳಿಗೆ 1500 ರೂ. ದರ ಇದೆ. ಇದರಿಂದಾಗಿ ರೈತರಿಗೆ ಪ್ರತಿ ಕ್ವಿಂಟಲ್‌ಗೆ 500 ರೂಪಾಯಿಗಿಂತಲೂ ಹೆಚ್ಚು ನಷ್ಟ ಆಗುತ್ತದೆ. ಬಿತ್ತನೆ, ಕಳೆ, ಕಟಾವು ಸೇರಿದಂತೆ ರೈತರಿಗೆ ಪ್ರತಿ ಕ್ವಿಂಟಲ್‌ಗೆ 2 ಸಾವಿರ ರೂಪಾಯಿ ವೆಚ್ಚ ಆಗಲಿದೆ. ನಷ್ಟ ಸರಿದೂಗಿಸಲು ಸರ್ಕಾರ ಕೂಡಲೇ 2500 ರೂ. ಬೆಂಬಲ ಬೆಲೆ ಘೋಷಿಸುವ ಮೂಲಕ ಈರುಳ್ಳಿ ಬೆಳೆಗಾರರಿಗೆ ನೆರವಾಗಬೇಕು ಎಂದು ಮನವಿ ಮಾಡಿದರು.
ಈರುಳ್ಳಿ ಬೆಳೆಗಾರರ ಸಂಘದ ದಾವಣಗೆರೆ ಜಿಲ್ಲಾಧ್ಯಕ್ಷರಾಗಿ ಬಿ.ಎಂ. ವೇದಮೂರ್ತಿ, ಗೌರವಾಧ್ಯಕ್ಷರಾಗಿ ಮಲ್ಲಿಕಾರ್ಜುನ ಅಣಬೂರು ಅವರನ್ನು ಆಯ್ಕೆ ಮಾಡಲಾಗಿದೆ. ಉಳಿದ ಪದಾಧಿಕಾರಿಗಳು, ತಾಲೂಕು ಸಂಘಗಳನ್ನು ನೂತನ ಅಧ್ಯಕ್ಷರು, ಗೌರವಾಧ್ಯಕ್ಷರು ಆಯ್ಕೆ ಮಾಡಲಿದ್ದಾರೆ ಎಂದು ತಿಳಿಸಿದರು. ಸಂಘದ ಶರಣಪ್ಪ, ಪ್ರಭಾಕರ್, ಎಚ್. ಉಮೇಶ್, ಶಿವನಗೌಡ, ಸಂತೋಷ್ ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
You seem to have an Ad Blocker on.
To continue reading, please turn it off or whitelist Udayavani.