ಪಂಚ ಲಕ್ಷ ಹೆಜ್ಜೆ ಪಾದಯಾತ್ರೆಗೆ ಸ್ವಾಗತ
ಪಂಚಲಕ್ಷ ಹೆಜ್ಜೆ ಪಾದಯಾತ್ರೆ
Team Udayavani, Jan 26, 2021, 5:21 PM IST
ಹರಪನಹಳ್ಳಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಒತ್ತಾಯಿಸಿ ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ
ಪೀಠಾಧ್ಯಕ್ಷರಾದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಸೋಮವಾರ ಹರಪನಹಳ್ಳಿ ತಾಲೂಕಿನ ನಂದಿಬೇವೂರು ಗ್ರಾಮಕ್ಕೆ ಆಗಮಿಸಿದ ವೇಳೆ ಅದ್ಧೂರಿಯಾಗಿ
ಸ್ವಾಗತಿಸಲಾಯಿತು.
ನಂದಿಬೇವೂರು ಗ್ರಾಮದಲ್ಲಿ ಬಹಿರಂಗ ಸಭೆ ನಡೆಸಿ ಮಧ್ಯಾಹ್ನದ ವೇಳೆ ಕಣವಿಹಳ್ಳಿ ಗ್ರಾಮಕ್ಕೆ ಆಗಮಿಸಿದ ಪಾದಯಾತ್ರೆಯು ಗ್ರಾಮದಲ್ಲಿ ಬಹಿರಂಗ ಸಭೆ ನಡೆಸಿ ಮಧ್ಯಾಹ್ನದ ಭೋಜನ ಸವಿದು ವಿಶ್ರಾಂತಿ ಪಡೆದರು.
ಸಂಜೆ ವೇಳೆ ಪಾದಯಾತ್ರೆ ಪುನಃ ಶುರುವಾಯಿತು. ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಎಂ.ಪಿ.ಲತಾ ಮಲ್ಲಿಕಾರ್ಜುನ್, ಪ್ರಗತಿಪರ ಚಿಂತಕರಾದ ಕೋಡಿಹಳ್ಳಿ ಭೀಮಪ್ಪ, ಎನ್.ಅನಂತನಾಯ್ಕ ಅಲಗಿಲವಾಡ ಎ.ಎಂ.ವಿಶ್ವನಾಥ ಸೇರಿದಂತೆ ವಿವಿಧ ಗಣ್ಯರು ಶ್ರೀಗಳನ್ನು ಸ್ವಾಗತಿಅವರೊಂದಿಗೆ ಹೆಜ್ಜೆ ಹಾಕಿದರು.
ನಂದಿಬೇವೂರು ಮತ್ತು ಕಣವಿಹಳ್ಳಿ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶ್ರೀಗಳು ಪಂಚಮಸಾಲಿ ಸಾಮಾಜಕ್ಕೆ 2ಎ
ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ. ಶಾಂತಿ-ಸಹನೆ ಮೀರಿದೆ. ಇನ್ನೇನಿದ್ದರೂ ಕಿತ್ತೂರು ರಾಣಿ ಚೆನ್ನಮ್ಮನಂತೆ ಹೋರಾಟ ನಿವಾರ್ಯ ಎಂದು ಪ್ರತಿಪಾದಿಸಿದರು.
ಮಾಜಿ ಶಾಸಕರಾದ ವಿಜಯನಂದ ಕಾಶಪ್ಪನವರ್, ನಂದಿಹಳ್ಳಿ ಹಾಲಪ್ಪ, ಕೆಪಿಸಿಸಿ ಸದಸ್ಯ ಎಸ್.ಪಿ.ಪ್ರಭಾಕರಗೌಡ, ಮುಖಂಡರಾದ ಅರಸೀಕೆರೆ ಎನ್. ಕೊಟ್ರೇಶ್, ಪಾಟೀಲ್ ಬೆಟ್ಟನಗೌಡ, ಶಶಿಧರ್ ಪೂಜಾರ್, ಓಂಕಾರಗೌಡ, ಈಶ್ವರನಾಯ್ಕ, ಪುಣಬಗಟ್ಟಿ
ನಿಂಗಪ್ಪ, ಕೋಡಿಹಳ್ಳಿ ಗುರುಬಸವರಾಜ್, ಎನ್. ಮಂಜುನಾಥ, ಇಮ್ರಾನ್‌ಸಾಬ್, ಇರ್ಫಾನ್ ಮುದಗಲ್ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.