ಮಕ್ಕಳ ಪಾಲನಾ ಕೇಂದ್ರದಲ್ಲಿ ಗಣ್ಯರ ಜನ್ಮದಿನಾಚರಣೆಗೆ ಬ್ರೇಕ್‌

ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟ ಇತ್ಯಾದಿ ಪಾಲನೆ ಹಾಗೂ ರಕ್ಷಣೆ ಅವಶ್ಯವಿರುವ ಮಕ್ಕಳಾಗಿರುತ್ತಾರೆ.

Team Udayavani, Oct 27, 2021, 7:15 PM IST

B-day

ದಾವಣಗೆರೆ: ಇನ್ನು ಮುಂದೆ ರಾಜಕಾರಣಿಗಳು, ಸೆಲೆಬ್ರಿಟಿಗಳು, ಅಧಿಕಾರಿಗಳು ಸೇರಿದಂತೆ ಗಣ್ಯರು ಮಕ್ಕಳ ಪಾಲನಾ ಕೇಂದ್ರಗಳಿಗೆ ಹೋಗಿ ಅಲ್ಲಿ ತಮ್ಮ ಅಥವಾ ತಮ್ಮ ಮಕ್ಕಳ ಜನ್ಮದಿನ ಆಚರಿಸುವಂತಿಲ್ಲ. ಪಾಲನಾ ಕೇಂದ್ರದ ಮಕ್ಕಳ ಮಾನಸಿಕ ಆರೋಗ್ಯದ ದೃಷ್ಟಿಯಿಂದ ಮಕ್ಕಳ ರಕ್ಷಣಾ ನಿರ್ದೇಶನಾಲಯ ಈ ರೀತಿಯ ಆಚರಣೆಗೆ ಬ್ರೇಕ್‌ ಹಾಕಿದೆ.

ಸಾಮಾನ್ಯವಾಗಿ ಹಲವು ರಾಜಕಾರಣಿಗಳು, ಸೆಲೆಬ್ರಿಟಿಗಳು, ಅಧಿಕಾರಿಗಳು ಸೇರಿದಂತೆ ಗಣ್ಯರು ತಮ್ಮ ಅಥವಾ ತಮ್ಮ ಕುಟುಂಬ ಸದಸ್ಯರ ಇಲ್ಲವೇ ಮಕ್ಕಳ ಜನ್ಮದಿನವನ್ನು ಮಕ್ಕಳ ಪಾಲನಾ ಕೇಂದ್ರಗಳಲ್ಲಿ ಆಚರಿಸಿ ಅಲ್ಲಿನ ಮಕ್ಕಳಿಗೆ ಸಿಹಿ ಹಂಚಿ ಸಂಭ್ರಮಿಸುತ್ತಾರೆ. ತಮ್ಮ ಜನ್ಮದಿನವನ್ನು ಮನೆಯಲ್ಲಿ ಮಾಡುವುದಕ್ಕಿಂತ ಪಾಲನಾ ಕೇಂದ್ರದ ಮಕ್ಕಳ ಸಮ್ಮುಖದಲ್ಲಿ ಮಾಡಿ ಆ ಮಕ್ಕಳಿಗೂ ಖುಷಿ ಹಂಚಬೇಕು ಎಂಬ ಸದುದ್ದೇಶ ಈ ರೀತಿಯ ಆಚರಣೆಯಲ್ಲಿ ಅಡಗಿರುತ್ತದೆ. ಆದರೆ ಇಂಥ ಆಚರಣೆಯಿಂದ ಪಾಲನಾ ಕೇಂದ್ರದ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕಾಗಿ ಮಕ್ಕಳ ರಕ್ಷಣಾ ನಿರ್ದೇಶನಾಲಯ ಮಕ್ಕಳ ಪಾಲನಾ ಕೇಂದ್ರಗಳಲ್ಲಿ ಜನ್ಮದಿನ ಆಚರಣೆಗೆ ಕಡಿವಾಣ ಹಾಕಿದೆ.

ಮಕ್ಕಳ ಮನಸ್ಸಿಗೆ ಘಾಸಿ: ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳು ಕಾನೂನು ಸಂಘರ್ಷಕ್ಕೆ ಒಳಗಾಗಿರುವವರು, ಬಾಲಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟ, ಬಾಲ್ಯ ವಿವಾಹಕ್ಕೆ ಒಳಗಾದ, ಅತ್ಯಾಚಾರಕ್ಕೆ ಒಳಗಾದ, ತಂದೆ-ತಾಯಿಯಿಂದ ತಿರಸ್ಕರಿಸಲ್ಪಟ್ಟ, ತಾಯಿ-ತಂದೆ ಇಲ್ಲದ, ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟ ಇತ್ಯಾದಿ ಪಾಲನೆ ಹಾಗೂ ರಕ್ಷಣೆ ಅವಶ್ಯವಿರುವ ಮಕ್ಕಳಾಗಿರುತ್ತಾರೆ.

ಈ ಎಲ್ಲ ಮಕ್ಕಳು ಸಮಾಜದಿಂದ ವಂಚಿತರಾಗಿ ಮನನೊಂದವ ರಾಗಿರುವುದರಿಂದ ಮಕ್ಕಳ ಪಾಲನಾ ಸಂಸ್ಥೆಯಲ್ಲಿ ದಾಖಲಾಗಿರುವ ಮಕ್ಕಳ ಮನಸ್ಸಿಗೆ ಖುಷಿ ತರುವಂಥ ಸೃಜನಶೀಲತೆಯ ಕಾರ್ಯಕ್ರಮಗಳನ್ನು ಏರ್ಪಡಿಸಿ ಮಕ್ಕಳ ಮನಸ್ಸು ಸದೃಢ ಹಾಗೂ ಆಹ್ಲಾದಕರವಾಗುವಂತೆ ಪ್ರೋತ್ಸಾಹಿಸಬೇಕಾಗುತ್ತದೆ. ಆದರೆ ಮಕ್ಕಳ ಪಾಲನಾ ಕೇಂದ್ರದಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಗಣ್ಯರು ತಮ್ಮ ಮಕ್ಕಳ ಜನ್ಮದಿನವನ್ನು ಕೇಕ್‌ ಕತ್ತರಿಸಿ ಮಕ್ಕಳಿಗೆ ಸಿಹಿ ಹಂಚಿ ಅದ್ಧೂರಿಯಾಗಿ ಆಚರಿಸುತ್ತಾರೆ. ಪಾಲನಾ ಸಂಸ್ಥೆಯಲ್ಲಿರುವ ಮಕ್ಕಳು ತಮ್ಮ ಜನ್ಮದಿನವನ್ನು ಹೀಗೆ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೋಲಿಕೆ ಮಾಡಿಕೊಂಡಲ್ಲಿ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಿ ಮನಸ್ಸಿಗೆ ಘಾಸಿಯಾಗುತ್ತದೆ. ಇದರಿಂದ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿದೆ.

ಇಂಥ ಆಚರಣೆಗಳು ಪಾಲನಾ ಕೇಂದ್ರದ ಮಕ್ಕಳ ಆತ್ಮಾಭಿಮಾನ, ಆತ್ಮಗೌರವಕ್ಕೆ ಧಕ್ಕೆಯನ್ನುಂಟು ಮಾಡುತ್ತವೆ ಎಂಬುದು ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಭಿಪ್ರಾಯ. ಪಾಲನಾ ಕೇಂದ್ರದ ಮಕ್ಕಳು ಕುಟುಂಬದಲ್ಲಿ ಬೆಳೆಯುವ ಯಾವುದೇ ಮಗುವಿಗಿಂತ ಕಡಿಮೆ ಇಲ್ಲ ಎಂಬ ಭಾವನೆಯನ್ನು ಕಾಪಾಡುವ ಸಲುವಾಗಿ ಮಕ್ಕಳ ಜನ್ಮದಿನ ಹಾಗೂ ಸರ್ಕಾರದ ಆದೇಶದ ಮೂಲಕ ನಿಗದಿಪಡಿಸಿದ ವ್ಯಕ್ತಿಗಳ ಹುಟ್ಟುಹಬ್ಬ ಆಚರಣೆ ಹೊರತುಪಡಿಸಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಬೇರೆ ಯಾರದೇ ಜನ್ಮದಿನ ಆಚರಿಸುವುದನ್ನು ನಿಷೇಧಿಸಲಾಗಿದೆ ಎಂದು ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರು, ಮಕ್ಕಳ ಪಾಲನಾ ಕೇಂದ್ರದ ಎಲ್ಲ ಮುಖ್ಯಸ್ಥರಿಗೆ ಸುತ್ತೋಲೆ ಮೂಲಕ ತಿಳಿಸಿದ್ದಾರೆ.

ಮಕ್ಕಳ ಪಾಲನಾ ಕೇಂದ್ರಗಳಲ್ಲಿ ಗಣ್ಯ ವ್ಯಕ್ತಿಗಳ ಜನ್ಮದಿನ ಆಚರಣೆಯಿಂದ ಕೇಂದ್ರದ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಮಕ್ಕಳ ರಕ್ಷಣಾ ನಿರ್ದೇಶನಾಲಯ ಮಕ್ಕಳ ಪಾಲನಾ ಕೇಂದ್ರಗಳಲ್ಲಿ ಜನ್ಮದಿನ ಆಚರಣೆ ನಿಷೇಧಿಸಿದೆ. ಈ ಆದೇಶದಂತೆ ಮಕ್ಕಳ ಪಾಲನಾ ಕೇಂದ್ರದಲ್ಲಿ ಇನ್ನು ಮುಂದೆ ಜನ್ಮದಿನ ಆಚರಣೆಗೆ ಅವಕಾಶವಿಲ್ಲ.
ಕೆ.ಎಚ್‌. ವಿಜಯಕುಮಾರ್‌, ಉಪನಿರ್ದೇಶಕರು,
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ದಾವಣಗೆರೆ.

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

BJP Waqf protest: Renukacharya, Gayatri Siddeshwar and many others taken into police custody

Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

BBommai

Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.