ಲಾಕ್‌ಡೌನ್‌ಗೆ ಜಿಲ್ಲಾದ್ಯಂತ ಉತ್ತಮ ಸ್ಪಂದನೆ
ಜಿಲ್ಲಾಡಳಿತ-ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮದಿಂದ ಮನೆಯಲ್ಲೇ ಕಾಲ ಕಳೆಯುತ್ತಿರುವ ಜನ
Team Udayavani, Apr 7, 2020, 1:23 PM IST
ಚಿಕ್ಕಮಗಳೂರು: ಕೊರೊನಾ ವೈರಸ್ ತಡೆಯುವ ಉದ್ದೇಶದಿಂದ ಲಾಕ್‌ಡೌನ್ ವಿ ಸಲಾಗಿದ್ದು, ಲಾಕ್ ಡೌನ್‌ಗೆ ಸೋಮವಾರ ಜಿಲ್ಲಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮದಿಂದ ಜನರು ಮನೆಯಲ್ಲೇ ಕಾಲ ಕಳೆಯುತ್ತಿದ್ದು, ನಗರದಲ್ಲಿ ಜನಸಂಚಾರ ಸಂಪೂರ್ಣ ಕ್ಷೀಣವಾಗಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಜನ ಸಂಚಾರವನ್ನು ಹತೋಟಿಗೆ ತರಲು ನಗರದ ಪ್ರಮುಖ ರಸ್ತೆಗಳಲ್ಲಿ ಚೆಕ್‌ಪೋಸ್ಟ್ ನಿರ್ಮಿಸಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅನಾವಶ್ಯಕವಾಗಿ ಓಡಾಡುವವರ ವಾಹನಗಳನ್ನು ಜಪ್ತಿ ಮಾಡುವ ಮೂಲಕ ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕಲಾಗುತ್ತಿದೆ. ನಗರದ ಎಂಜಿ ರಸ್ತೆ, ಮಾರ್ಕೆಟ್ ರಸ್ತೆ, ಐಜಿ ರಸ್ತೆ, ಬಸವನಹಳ್ಳಿ ಮುಖ್ಯರಸ್ತೆ, ಹನುಮಂತಪ್ಪ ವೃತ್ತ, ಆಜಾದ್ ಪಾರ್ಕ್ ವೃತದದಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ ಅಗತ್ಯ ವಸ್ತುಗಳ ಖರೀದಿಗೆ ಬರುವವರನ್ನು ಮಾತ್ರ ನಗರೊಳಗೆ ಬಿಡಲಾಗುತ್ತಿದೆ. ಸುಖಸುಮ್ಮನೆ ತಿರುಗಾಡುವ ಬೈಕ್ ಮತ್ತು ಕಾರುಗಳನ್ನು ಜಪ್ತಿ ಮಾಡಲಾಗುತ್ತಿದೆ.
ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಜನಜಂಗುಳಿ ನಿಯಂತ್ರಿಸುವ ಹಿನ್ನೆಲೆಯಲ್ಲಿ ಪ್ರತಿ ದಿನ ಬೆಳಗ್ಗೆ 8 ಗಂಟೆಗೆ ಮಾರುಕಟ್ಟೆಯನ್ನು ತೆರೆಯಲಾಗುತ್ತಿದೆ.
ಖರೀದಿದಾರರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗುತ್ತಿದ್ದು, ಕೃಷಿ ಉತ್ಪನ್ನ ಮಾರುಕಟ್ಟೆಗೆ ಬೀಗಿ ಪೊಲಿಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಅನುಕೂಲ ಕಲ್ಪಿಸುವ ಕೊಡುವ ಉದ್ದೇಶದಿಂದ ನಗರದ ಮಾರ್ಕೇಟ್ ರಸ್ತೆಯಲ್ಲಿರುವ ನಗರಸಭೆ ಮಳಿಗೆಗಳಲ್ಲಿ ಹಣ್ಣು, ತರಕಾರಿ ಮಳಿಗೆಗಳನ್ನು ತೆರೆಯಲಾಗಿದೆ.
ತರಕಾರಿ, ಹಣ್ಣು ಮಾರಾಟಕ್ಕೆ ಮೊಬೈಲ್ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮೊಬೈಲ್ ವಾಹನಗಳು ನಗರದ ಎಲ್ಲಾ ಬಡಾವಣೆಗಳಲ್ಲಿ ಸಂಚರಿಸುತ್ತಿವೆ. ತಳ್ಳುಗಾಡಿಗಳಲ್ಲಿ ತರಕಾರಿ ಮತ್ತು ಹಣ್ಣು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆದ ಬೆಳೆಗಗಳನ್ನು ಹಾಪ್‌ಕಾಂಮ್ಸ್ ನೆರ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ.
ಜಿಲ್ಲಾಡಳಿತ ಕೈಗೊಂಡ ಬೀಗಿ ಕ್ರಮಗಳಿಂದ ನಗರದಲ್ಲಿ ಅನಾಗತ್ಯವಾಗಿ ಸಂಚರಿಸುವರಿಗೆ ಸಂಪೂರ್ಣ ಬ್ರೇಕ್ ಬಿದ್ದಿದ್ದು, ಹನುಮಂತಪ್ಪ ವೃತ್ತ, ಆಜಾದ್ ಪಾರ್ಕ್ ವೃತ್ತ ಸೇರಿದಂತೆ ನಗರದ ಮುಖ್ಯ ರಸ್ತೆಗಳಲ್ಲಿ ಜನಸಂಚಾರವಿಲ್ಲದೇ ಇಡೀ ನಗರವೇ ಬಿಕೋ ಎನ್ನುತ್ತಿದೆ. ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಜನರು ಮನೆಯಿಂದ ಹೊರಬರಲು ಹಿಂಜರಿಯುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಜನರಿಗೆ ಯಾವುದೇ ತೊಂದರೆಯಾಗದಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದ್ದು, ಅಗತ್ಯ ವಸ್ತುಗಳ ಸಮಸ್ಯೆಯಾಗದಂತೆ ತರಕಾರಿ ಮತ್ತು ಹಣ್ಣಿನ ಮೊಬೈಲ್ ಸಂಚಾರಿ ವಾಹನಗಳನ್ನು ಗ್ರಾಮೀಣ ಪ್ರದೇಶಗಳಿಗೂ ಬಿಡಲಾಗಿದೆ. ಲಾಕ್‌ಡೌನ್ ಪ್ರಾರಂಭಗೊಂಡ ನಂತರ ಗ್ರಾಮೀಣ ಪ್ರದೇಶದ ಜನರು ನಗರಗಳಾತ್ತ ಮುಖ ಮಾಡಲು ಹೆದರುತ್ತಿದ್ದು ಜಮೀನು ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಒಟ್ಟಾರೇ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಕೈಗೊಂಡ ಕಟ್ಟುನಿಟ್ಟಿನ ಕ್ರಮದಿಂದ ಜಿಲ್ಲಾದ್ಯಂತ ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.