ತವರೂರಲ್ಲೇ ವಲಸೆ ವಿದ್ಯಾರ್ಥಿಗಳಿಗೆ ಪರೀಕ್ಷೆ
ಜಿಲ್ಲೆಯಲ್ಲಿ 349 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ನೋಂದಣಿ ಪರೀಕ್ಷೆಗೆ ಸಾಕಷ್ಟು ತಯಾರಿ ನಡೆಸಿದೆ ಶಿಕ್ಷಣ ಇಲಾಖೆ
Team Udayavani, Jun 4, 2020, 12:24 PM IST
ಸಾಂದರ್ಭಿಕ ಚಿತ್ರ
ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಶಿಕ್ಷಣ ಇಲಾಖೆ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದು, ಕೋವಿಡ್ ಮಹಾಮಾರಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತಾವಿರುವ ಊರಿನ ಪರೀಕ್ಷಾ ಕೇಂದ್ರದಲ್ಲೇ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ.
ಪೋಷಕರ ವಲಸೆ ಕಾರಣಕ್ಕೆ ಸಹಜವಾಗಿ ಮಕ್ಕಳ ಅಧ್ಯಯನ ಕೇಂದ್ರಗಳು ಬದಲಾಗುತ್ತಿರುತ್ತವೆ. ಇನ್ನೂ ಕೆಲವರು ಗುಣಮಟ್ಟದ ಶಿಕ್ಷಣಕ್ಕಾಗಿ ಪ್ರತಿಷ್ಠಿತ ಶಾಲಾ ಕಾಲೇಜುಗಳಿರುವ ಊರುಗಳಿಗೆ ತೆರಳಿ ಅಲ್ಲಿರುವ ಪಿಜಿ, ಹಾಸ್ಟೆಲ್‌ಗಳಲ್ಲಿದ್ದು ಅಧ್ಯಯನ ಮಾಡುತ್ತಿದ್ದಾರೆ. ಸರ್ಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಘೋಷಣೆ ಮಾಡಿದ ಕ್ಷಣದಿಂದಲೇ ಈ ಎಲ್ಲರೂ ಆತಂಕಕ್ಕೊಳಗಾಗಿದ್ದರು. ಕಾರಣ ಬಹುತೇಕ ಹಾಸ್ಟೆಲ್‌ಗಳು ಕ್ವಾರಂಟೈನ್ ಕೇಂದ್ರಗಳಾಗಿದ್ದವು. ಇದರಿಂದ ಪರೀಕ್ಷೆಗಾಗಿ ಬರುವ ವಿದ್ಯಾರ್ಥಿಗಳನ್ನು ಅಲ್ಲಿ ಉಳಿಸಲು ಕಷ್ಟ. ಇನ್ನೂ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಕಾರಣಕ್ಕೆ ಪರೀಕ್ಷೆಗಾಗಿ ಊರಿಂದ ಊರಿಗೆ ಬರುವಾಗ ಸೋಂಕು ತಗುಲುವ, ವ್ಯಾಪಿಸುವ ಆತಂಕಗಳಿದ್ದವು. ಆದರೆ, ಈ ಎಲ್ಲಾ ತಳಮಳಗಳಿಗೆ ಶಿಕ್ಷಣ ಇಲಾಖೆ ಅವರ ಊರುಗಳಲ್ಲೇ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಿದೆ. ದೂರದ ಮಂಗಳೂರು, ಉಡುಪಿ, ಹುಬ್ಬಳ್ಳಿ, ಬೆಂಗಳೂರು, ಮೈಸೂರು ಸೇರಿದಂತೆ ಯಾವುದೇ ಊರುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈಗ ಚಿತ್ರದುರ್ಗದಲ್ಲಿರುವ ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷೆ ಬರೆಯುವ ಅವಕಾಶ ಸಿಕ್ಕಿದೆ.
ಇನ್ನೂ ಚಿತ್ರದುರ್ಗದ ಮಠ, ವಿದ್ಯಾರ್ಥಿ ನಿಲಯಗಳಲ್ಲಿದ್ದು ಅಧ್ಯಯನ ಮಾಡುತ್ತಿದ್ದ ಮಕ್ಕಳು ಕೋವಿಡ್ ಲಾಕ್‌ಡೌನ್ ಕಾರಣಕ್ಕೆ ದೂರದ ಊರುಗಳನ್ನು ಸೇರಿದ್ದರೆ ಅವರೂ ಕೂಡಾ ಅಲ್ಲಿಂದಲೇ ಪರೀಕ್ಷೆ ಬರೆಯಲು ಈಗಾಗಲೇ ಶಿಕ್ಷಣ ಇಲಾಖೆ ಬಳಿ ನೋಂದಾಯಿಸಿಕೊಂಡಿದ್ದಾರೆ.
12,674 ವಿದ್ಯಾರ್ಥಿಗಳ ನೋಂದಣಿ: ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಿಂದ ಬರೋಬ್ಬರಿ 12674 ವಿದ್ಯಾರ್ಥಿಗಳು ತಾವಿರುವ ಊರಿನ ಪರೀಕ್ಷಾ ಕೇಂದ್ರದಲ್ಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆಯಲ್ಲಿ ಹೆಸರು ನೋಂದಾಯಿಸಿದ್ದಾರೆ. ಈ ಅಂಕಿ ಸಂಖ್ಯೆಗಳ ಆಧಾರದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಲಸೆ ವಿದ್ಯಾರ್ಥಿಗಳಿರುವುದು ಕಂಡು ಬಂದಿದೆ.
ಇಡೀ ರಾಜ್ಯದ ವಲಸೆ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಮಂಗಳೂರು (ದ.ಕ) ಜಿಲ್ಲೆಗೆ ಹೊರಗಿನಿಂದ ಹೋಗಿ ಅಧ್ಯಯನ ಮಾಡಿ, ಈಗ ಅಲ್ಲಿಂದ ಹೊರಗಿದ್ದು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿದವರ ಸಂಖ್ಯೆಯೇ ಹೆಚ್ಚಿದೆ. ಮಂಗಳೂರಿನ ಔಟ್ ಮೈಗ್ರೇಟೆಡ್ ವಿದ್ಯಾರ್ಥಿಗಳು 1318, ಇನ್ನೂ ಮಂಗಳೂರಿನಿಂದ ಹೊರಗೆ ಅಧ್ಯಯನ ಮಾಡಿ ಈಗ ಅಲ್ಲಿದ್ದು ಪರೀಕ್ಷೆ ಬರೆಯುವ ಇನ್ ಮೈಗ್ರೇಟೆಡ್ ವಿದ್ಯಾರ್ಥಿಗಳ ಸಂಖ್ಯೆ 232. ಆನಂತರದ ಸ್ಥಾನಗಳಲ್ಲಿ ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಮತ್ತಿತರೆ ಜಿಲ್ಲೆಗಳಿವೆ.
ಚಿತ್ರದುರ್ಗದಲ್ಲಿ 349 ವಿದ್ಯಾರ್ಥಿಗಳ ನೋಂದಣಿ: ಇನ್ನೂ ಈ ಪಟ್ಟಿಯಲ್ಲಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ 349 ವಿದ್ಯಾರ್ಥಿಗಳು ಜಿಲ್ಲೆಯಿಂದ ಹೊರಗೆ ಅಧ್ಯಯನ ಮಾಡುತ್ತಿದ್ದು, ಈಗ ಚಿತ್ರದುರ್ಗ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಹೆಸರು ನೊಂದಾಯಿಸಿದ್ದಾರೆ. ಜಿಲ್ಲೆಯಲ್ಲೇ ಅಧ್ಯಯನ ಮಾಡುತ್ತಿರುವ 271 ವಿದ್ಯಾರ್ಥಿಗಳು ವಾಪಾಸು ಹೋಗಿರುವ ತಮ್ಮ ಊರುಗಳಿಂದ ಹೆಸರು ನೋಂದಾಯಿಸಿದ್ದಾರೆ. ಈಗ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಗಿಂತ 78 ಜನ ಹೆಚ್ಚಾಗುತ್ತಿದ್ದಾರೆ.
ಜಿಲ್ಲೆಯಿಂದ ಹೊರಗೆ ಹಾಗೂ ಜಿಲ್ಲೆಯಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಪ್ರವೇಶಪತ್ರ (ಹಾಲ್ ಟಿಕೇಟ್)ವನ್ನು ಆಯಾ ಬಿಇಒಗಳ ಮೂಲಕ ಒದಗಿಸಲಾಗುವುದು. ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲೂ ಡೌನ್‌ಲೋಡ್ ಮಾಡಿಕೊಳ್ಳಬಹುದು. ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಹೆಚ್ಚುವರಿ ವಿದ್ಯಾರ್ಥಿಗಳ ಪಟ್ಟಿ ಇಲಾಖೆಯಿಂದ ಬರಲಿದ್ದು, ಅವರಿಗೆ ವ್ಯವಸ್ಥೆ ಮಾಡುತ್ತೇವೆ.
ಕೆ. ರವಿಶಂಕರ ರೆಡ್ಡಿ, ಉಪನಿರ್ದೇಶಕರು,
ಸಾರ್ವಜನಿಕ ಶಿಕ್ಷಣ ಇಲಾಖೆ ಚಿತ್ರದುರ್ಗ
ತಿಪ್ಪೇಸ್ವಾಮಿ ನಾಕೀಕೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.