ಮಲ್ಲಾಪುರ ಕೆರೆಯಲ್ಲಿ ಮೀನುಗಳ ಸಾವು
ದುರ್ವಾಸನೆಗೆ ಮೂಗು ಮುಚ್ಚಿ ಓಡಾಡುವ ಸ್ಥಿತಿ ನಿರ್ಮಾಣ
Team Udayavani, Apr 9, 2020, 11:05 AM IST
ಚಿತ್ರದುರ್ಗ: ಮಲ್ಲಾಪುರ ಕೆರೆಯಲ್ಲಿ ಸತ್ತಿರುವ ಮೀನುಗಳ ರಾಶಿ.
ಚಿತ್ರದುರ್ಗ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 13ರ ಪಕ್ಕದಲ್ಲೇ ಇರುವ ಮಲ್ಲಾಪುರ ಕೆರೆಯಲ್ಲಿ ರಾಶಿ ರಾಶಿ ಮೀನುಗಳು ಸತ್ತು ಬಿದ್ದುದ್ದು, ದುರ್ವಾಸನೆ ಬರುತ್ತಿದೆ. ಇದರಿಂದ ಮಲ್ಲಾಪುರ ಸೇರಿದಂತೆ ಸುತ್ತಮುತ್ತಲಿನ ಜನತೆ ಕೆರೆ ಬಳಿ ಹಾದು ಹೋಗುವುದು ಕಷ್ಟವಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ನಗರಕ್ಕೆ ಬರುವವರು ಕೂಡಾ ವಾಸನೆಗೆ ಮೂಗು ಮುಚ್ಚಿ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಕೋವಿಡ್-19 ವೈರಸ್‌ನಿಂದ ಭಯಭೀತರಾಗಿರುವ ಜನರಿಗೆ ಮೀನುಗಳು ಸಾವಿರಾರು ಸಂಖ್ಯೆಯಲ್ಲಿ ಸತ್ತು ಕೆಟ್ಟ ವಾಸನೆ ಬರುತ್ತಿರುವುದರಿಂದ ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.
ಚಿತ್ರದುರ್ಗದ ನಗರದ ಎಲ್ಲಾ ತ್ಯಾಜ್ಯ ಮಲ್ಲಾಪುರ ಕೆರೆಯ ಒಡಲು ಸೇರುತ್ತಿದ್ದು, ಆಳುವ ವರ್ಗದವರು ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಕೆರೆಯಲ್ಲಿ ಶೇಖರಣೆಯಾಗುತ್ತಿರುವ ಮಲೀನ ಹಾಗೂ ವಿಷಯುಕ್ತ ನೀರು ಕೂಡಾ ಮೀನುಗಳ ಮಾರಣ ಹೋಮಕ್ಕೆ ಕಾರಣವಾಗಿರಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಬಿಸಿಲಿನ ಪ್ರಮಾಣ ಹೆಚ್ಚಾಗಿರುವುದು, ಇತ್ತೀಚೆಗೆ ಸುರಿದ ಮಳೆಯ ಕಾರಣಕ್ಕೆ ಈ ರೀತಿ ಮೀನುಗಳು ಸಾಯುತ್ತಿರಬಹುದು ಎಂದು ಅಂದಾಜಿಸಲಾಗಿದೆ. ತಕ್ಷಣ ಈ ಮೀನುಗಳನ್ನು ಹಿಡಿದು ಹೂಳಬೇಕು. ಜತೆಗೆ ಕೆರೆಯಲ್ಲಿರುವ ಇತರೆ ಮೀನುಗಳನ್ನು ಹಿಡಿದು ಮಾರಾಟ ಮಾಡಬೇಕು. ಆಗ ಕೆರೆಯಲ್ಲಿನ ಮೀನುಗಳ ಪ್ರಮಾಣ ಕಡಿಮೆಯಾಗಿ ಉಸಿರಾಟಕ್ಕೆ ಅನುಕೂಲವಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕೆರೆಯಲ್ಲಿ ಮೀನುಗಾರಿಕೆ ನಡೆಸಲು ಸಾಕಷ್ಟು ಹಣ ಹೂಡಿ ಗುತ್ತಿಗೆ ಪಡೆದಿದ್ದವರು ಕೂಡಾ ಇದರಿಂದ ಕಂಗಾಲಾಗಿದ್ದು, ಈಗ ಲಾಕ್ ಡೌನ್ ಇರುವುದರಿಂದ ಮೀನು ಮಾರಾಟ ಕೂಡಾ ಕಷ್ಟವಾಗಲಿದೆ. ಈ ಸಂದರ್ಭದಲ್ಲಿ ಮೀನುಗಳು ಸಾಯುತ್ತಿರುವುರು ಆತಂಕವನ್ನು ಹೆಚ್ಚಿಸಿದೆ.
ಮಳೆ ಬಂದಾಗ ಹೊಸ ನೀರು ಹರಿದು ಬರುವುದರಿಂದ ಈ ರೀತಿ ಮೀನುಗಳು ಮರಣ ಹೊಂದುತ್ತವೆ ಎಂದು ತಜ್ಞರು ಹೇಳುತ್ತಿದ್ದಾರೆ. ಈಗ ಸತ್ತಿರುವ ಮೀನುಗಳನ್ನು ನಾವೇ ತೆಗೆದು ಹಾಕುತ್ತಿದ್ದೇವೆ. ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಸಂಪರ್ಕಕ್ಕೆ ಸಿಗುತ್ತಿಲ್ಲ. ಕಳೆದ ಐದು ವರ್ಷದಿಂದ ಕೆರೆ ಸ್ವತ್ಛವಾಗಿಲ್ಲ. ಈ ಎಲ್ಲಾ ಕಾರಣಕ್ಕೆ ಇಷ್ಟು ಪ್ರಮಾಣದಲ್ಲಿ ಮೀನು ಗಳು ಸಾಯುತ್ತಿರಬಹುದು ಎಂದು ಮಹಾತ್ಮಾ ಗಾಂಧಿ ಕೆರೆ ಬಳಕೆದಾರರ ಸಂಘದ ಅಧ್ಯಕ್ಷೆ ಸಿದ್ದಲಿಂಗಮ್ಮ, ಖಜಾಂಚಿ ಸಿದ್ದಪ್ಪ ಪಿಳ್ಳಿಕೇರೆನಹಳ್ಳಿ ಹಾಗೂ ಕಾರ್ಯದರ್ಶಿ ಬಸವರಾಜ್ “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.