ಡಿಸಿ ಕಚೇರಿ ಎದುರು 3ನೇ ದಿನ ಮುಂದುವರಿದ ಸತ್ಯಾಗ್ರಹ
Team Udayavani, Oct 23, 2021, 8:29 PM IST
ಬಳ್ಳಾರಿ: ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಶೇ. 7.5ಕ್ಕೆ ಹೆಚ್ಚಿಸಬೇಕು ಎಂದು ಡಿಸಿ ಕಚೇರಿ ಎದುರು ಎಸ್‌ಸಿ, ಎಸ್‌ಟಿ ಮಿಸಲಾತಿ ಹೋರಾಟ ಸಮಿತಿ ಹಮ್ಮಿಕೊಂಡ ಆಮರಣಾಂತ ಉಪವಾಸ ಸತ್ಯಾಗ್ರಹ ಮೂರನೇ ದಿನವೂ ಮುಂದುವರೆಯಿತು. ಕಂಪ್ಲಿ ಶಾಸಕ ಜೆ.ಎನ್. ಗಣೇಶ್, ಸಿರುಗುಪ್ಪದ ಸಮುದಾಯದ ಮುಖಂಡ ಬಿ.ಎಂ. ಸತೀಶ್ ಸತ್ಯಾಗ್ರಹದಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ಬೃಹತ್ ಮೆರವಣಿಗೆ ನಡೆಸಲಾಯಿತು. ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಜಾರಿಗೆ ಇರುವ ಎಸ್.ಟಿ. ಮೀಸಲಾತಿ ಹೋರಾಟ ಸಮಿತಿಯಿಂದ ಆರಂಭಿಸಿರುವ ಆಮರಣಾಂತ ಉಪವಾಸ ಸತ್ಯಾಗ್ರಹದಲ್ಲಿ ಯುವ ಮುಖಂಡ ಬಿ.ಆರ್.ಎಲ್. ಶ್ರೀನಿವಾಸ್ ಮತ್ತು ಗಡ್ಡಂ ತಿಮ್ಮಪ್ಪ ಅವರು ಉಪವಾಸ ಕೂತಿದ್ದಾರೆ. ಅವರ ಆರೋಗ್ಯದ ಸ್ಥಿತಿ ಏರುಪೇರು ಆಗಬಹುದೆಂದು ನಿನ್ನೆ ರಾತ್ರಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ, ಡಿಎಚ್‌ಒ ಮೊದಲಾದವರು ಬಂದು ಸತ್ಯಾಗ್ರಹ ಕೈ ಬಿಡುವಂತೆ ಮನವಿ ಮಾಡಿದರೂ ಅದಕ್ಕೆ ಒಪ್ಪಲಿಲ್ಲ. ಜೊತೆಗೆ ಸತ್ಯಾಗ್ರಹಿಗಳು ತಮಗೆ ಡ್ರಿಪ್ ಹಾಕುವುದಕ್ಕೂ ಒಪ್ಪಲಿಲ್ಲ. ಎಸ್ಟಿ ಸಮುದಾಯದ ಮುಖಂಡರು ನಗರದಲ್ಲಿ ಬೃಹತ್ ಮೆರವಣಿಗೆ ನಡೆಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೂಡಲೇ ಈ ಬಗ್ಗೆ ತಮ್ಮ ನಿರ್ಧಾರ ಪ್ರಕಟಿಸಬೇಕು ಎಂದು ಆಗ್ರಹಿಸಿದರು. ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕೆಂದು ಕಳೆದ 3 ದಶಕಗಳಿಂದ ಮನವಿ ಮಾಡುತ್ತಾ ಬಂದಿದೆ, ಬೇಡಿಕೆ ಈಡೇರಿಲ್ಲ. ಎಸ್ಸಿ ಮತ್ತು ಎಸ್ಟಿ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ರಚನೆ ಮಾಡಿದ್ದ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಆಯೋಗ ನೀಡಿರುವ ವರದಿಯನ್ನು ಬಹಿರಂಗಪಡಿಸಿ ಅಂಗೀಕರಿಸಬೇಕು ಎಂದು ಒತ್ತಾಯಿಸಲಾಯಿತು. ಎಸ್‌ಟಿ ಮೀಸಲಾತಿ ಹೆಚ್ಚಿಸುವಂತೆ ಸಮುದಾಯ ಸ್ವಾಮೀಜಿ ಪಾದಯಾತ್ರೆ ನಡೆಸಿದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಸ್ವಾಮೀಜಿಗಳನ್ನು ನಿರ್ಲಕ್ಷé ಮಾಡಿರುವ ರಾಜ್ಯ ಸರ್ಕಾರಕ್ಕೆ ವಿಧಾನಸಭೆಯಲ್ಲಿ ಮಾತನಾಡುವ ಜನಪ್ರತಿನಿಧಿಗಳಾದರೂ ಬಿಸಿ ಮುಟ್ಟಿಸಬೇಕು ಎಂದು ಸತ್ಯಾ ಗ್ರಹಿಗಳಾದ ಬಿ.ಆರ್.ಎಲ್. ಶ್ರೀನಿವಾಸ್ ಮನವಿ ಮಾಡಿದರು. ಮೀನಳ್ಳಿ ತಾಯಣ್ಣ, ಯುವ ಮುಖಂಡರಾದ ಜಗನ್ನಾಥ್, ವಿ.ಕೆ. ಬಸಪ್ಪ, ಮೋಕಾ ಮಲ್ಲಯ್ಯ, ವಿ.ಎಸ್. ಶಿವಶಂಕರ್ ಸೇರಿದಂತೆ ಸಮುದಾಯದ ನೂರಾರು ಜನರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
MUST WATCH
ಹೊಸ ಸೇರ್ಪಡೆ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.