ಅನ್ನದಾತರ ಕೈಹಿಡಿದ ಕೃಷಿ ಹೊಂಡ
ನರೇಗಾದಡಿ 2500ಕ್ಕೂ ಹೆಚ್ಚು ಕೃಷಿ ಹೊಂಡ ನಿರ್ಮಾಣ
Team Udayavani, Jul 22, 2021, 5:59 PM IST
ಆರ್. ಬಸವರೆಡ್ಡಿ ಕರೂರು
ಸಿರುಗುಪ್ಪ: ಕೃಷಿ ಭಾಗ್ಯ ಯೋಜನೆಯಡಿ ಮತ್ತು ನರೇಗಾ ಯೋಜನೆಯಡಿಯಲ್ಲಿ ತೋಟಗಾರಿಕೆ, ಕೃಷಿ ಇಲಾಖೆ ವತಿಯಿಂದ ಸುಮಾರು 2500ಕ್ಕೂ ಹೆಚ್ಚು ಕೃಷಿ ಹೊಂಡಗಳು ನಿರ್ಮಾಣವಾಗಿದ್ದು, ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೃಷಿ ಹೊಂಡಗಳಲ್ಲಿ ನೀರು ಸಂಗ್ರಹವಾಗುತ್ತಿದೆ. ಮಳೆಯಾಧಾರಿತ ಕೃಷಿ ಪ್ರದೇಶದಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲು ರೈತರಿಗೆ ಅನುಕೂಲವಾಗುತ್ತಿದೆ.
ತಾಲೂಕಿನ ಹಚ್ಚೊಳ್ಳಿ, ಸಿರುಗುಪ್ಪ, ತೆಕ್ಕಲಕೋಟೆ, ಕರೂರು ಹೋಬಳಿ ವ್ಯಾಪ್ತಿಯಲ್ಲಿ ಬರುವ ಮಳೆಯಾಶ್ರಿತ ಪ್ರದೇಶದಲ್ಲಿ ರೈತರು ವಿವಿಧ ಬೆಳೆಗಳನ್ನು ಬೆಳೆಯಲು ನೀರಿನ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕೃಷಿ ಇಲಾಖೆಯು ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ಮತ್ತು ತೋಟಗಾರಿಕೆ ಇಲಾಖೆಯು ನರೇಗಾ ಯೋಜನೆಯಡಿ ಕೃಷಿ ಹೊಂಡ ಹಾಗೂ ಬದುಗಳ ನಿರ್ಮಾಣ ಮಾಡಿರುವುದರಿಂದ ಮಳೆಯಾಶ್ರಿತ ಪ್ರದೇಶದಲ್ಲಿ ಹತ್ತಿ, ಸಜ್ಜೆ, ನವಣೆ, ಜೋಳ, ಸೂರ್ಯಕಾಂತಿ, ಮೆಣಸಿನಕಾಯಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಅನುಕೂಲವಾಗಿದೆ.
ಕೃಷಿ ಹೊಂಡದಲ್ಲಿ ಸಂಗ್ರಹವಾದ ನೀರನ್ನು ಬೆಳೆಗೆ ನೀರು ಅನಿವಾರ್ಯವಾದ ಸಂದರ್ಭದಲ್ಲಿ ಬಳಕೆ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ಇದರಿಂದ ರೈತರು ಉತ್ತಮ ಇಳುವರಿ ಪಡೆಯಲು ಸಹಾಯಕವಾಗುತ್ತದೆ ಎಂದು ಸಹಾಯಕ ಕೃಷಿ ನಿರ್ದೇಶಕ ನಜೀರ್ ಅಹಮ್ಮದ್ ತಿಳಿಸಿದ್ದಾರೆ.
—————–
ರೈತರು ತಮ್ಮ ಜಮೀನಿನಲ್ಲಿ ಕೃಷಿ ಹೊಂಡವನ್ನು ನಿರ್ಮಿಸಿಕೊಂಡರೆ, ಆಪತ್ಕಾಲದಲ್ಲಿ ಬೆಳೆಗಳಿಗೆ ನೀರನ್ನು ಕೊಡುವ ಹನಿ ನೀರಾವರಿ, ತುಂತುರು ನೀರಾವರಿ ಪದ್ಧತಿ ಅಳವಡಿಸಿಕೊಂಡರೆ ಉತ್ತಮ ಬೆಳೆ ಬೆಳೆಯಲು ಸಾಧ್ಯವಾಗುತ್ತದೆ.
ಡಾ| ಎಂ.ಎ. ಬಸವಣ್ಣೆಪ್ಪ ಕೃಷಿ ವಿಜ್ಞಾನಿ, ಸಿರುಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.