ಕೋವಿಡ್ ಮುಕ್ತ ಜಿಲ್ಲೆಯಾಗಿಸಲು ಸಹಕರಿಸಿ
ಎರಡ್ಮೂರು ದಿನಗಳಲ್ಲಿ ಹಸಿರು ವಲಯಕ್ಕೆ ದಾವಣಗೆರೆ ಸೇರ್ಪಡೆಯಾಗುವ ವಿಶ್ವಾಸ: ಸಂಸದ ಜಿ.ಎಂ. ಸಿದ್ದೇಶ್ವರ್
Team Udayavani, Apr 20, 2020, 11:27 AM IST
ದಾವಣಗೆರೆ: ಸಂಸದ ಜಿ.ಎಂ. ಸಿದ್ದೇಶ್ವರ್ ಕಲಾವಿದರು, ಆಟೋರಿಕ್ಷಾ ಚಾಲಕರಿಗೆ ಆಹಾರದ ಕಿಟ್ ವಿತರಣೆ ಮಾಡಿದರು.
ದಾವಣಗೆರೆ: ದಾವಣಗೆರೆಯನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಮನವಿ ಮಾಡಿದ್ದಾರೆ.
ಭಾನುವಾರ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಲೋಕಿಕೆರೆ ನಾಗರಾಜ್ ವತಿಯಿಂದ ವಾದ್ಯಗೋಷ್ಠಿ ಕಲಾವಿದರು, ಆಟೋರಿಕ್ಷಾ ಚಾಲಕರಿಗೆ ಆಹಾರದ ಕಿಟ್ ವಿತರಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೋವಿಡ್ ವೈರಸ್ ಹರಡದಂತೆ ಸರ್ಕಾರ ಜಾರಿಗೊಳಿಸಿರುವ ಲಾಕ್‌ಡೌನ್ ಅನ್ನು ಸರಿಯಾಗಿ ಪಾಲಿಸುವ ಮೂಲಕ ದಾವಣಗೆರೆಯನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು. ಶೀಘ್ರದಲ್ಲೇ ದಾವಣಗೆರೆ ಕೋವಿಡ್ ಮುಕ್ತ ಜಿಲ್ಲೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಾರಂಭದಲ್ಲಿ ಮೂವರಲ್ಲಿ ಕೋವಿಡ್ ಪಾಸಿಟಿವ್ ಕಂಡು ಬಂದಿತ್ತು. ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಆರೋಗ್ಯಾಧಿಕಾರಿಗಳು ಒಳಗೊಂಡಂತೆ ಎಲ್ಲರ ಪರಿಶ್ರಮದಿಂದ ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ವರದಿಯಾಗಿಲ್ಲ ಎನ್ನುವುದು ನಿಜಕ್ಕೂ ಸಮಾಧಾನ ಮತ್ತು ಸಂತೋಷದ ವಿಷಯ. ದಾವಣಗೆರೆ ಜಿಲ್ಲೆ 2-3 ದಿನಗಳಲ್ಲಿ ಹಸಿರು ವಲಯ ಪಟ್ಟಿಗೆ ಸೇರ್ಪಡೆ ಆಗಬಹುದು ಎಂದರು.
ಕೋವಿಡ್ ವೈರಸ್ ಹರಡುವಿಕೆ ತಡೆಗಟ್ಟಲು ಜಾರಿಗೊಳಿಸಿರುವ ಲಾಕ್‌ಡೌನ್ ಯಶಸ್ಸಿಗೆ ಎಲ್ಲಾ ಅಧಿಕಾರಿಗಳು ಪರಿಶ್ರಮ ಪಡುತ್ತಿದ್ದಾರೆ. ಸಾರ್ವಜನಿಕರು ಅವರಿಗೆ ಸ್ಪಂದಿಸಬೇಕು. ಯಾವುದೇ ಕಾರಣಕ್ಕೂ ಮನೆಯಿಂದ ಹೊರಗೆ ಬರಬಾರದು. ಅವಶ್ಯಕ ವಸ್ತುಗಳ ಖರೀದಿಗೆ ಬಂದಾಗಲೂ ಪ್ರತಿಯೊಬ್ಬರೂ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲೇಬೇಕು ಎಂದು ಹೇಳಿದರು.
ಲಾಕ್‌ಡೌನ್ ಹಿನ್ನೆಲೆಯಲ್ಲಿ ತೊಂದರೆಯಲ್ಲಿದ್ದವರಿಗೆ ನಮ್ಮ ಪಕ್ಷದ ಕಾರ್ಯಕರ್ತರು ಅನೇಕ ಕಡೆ ಆಹಾರದ ಕಿಟ್ ಒಳಗೊಂಡಂತೆ ಅಗತ್ಯ ವಸ್ತುಗಳ ವಿತರಣೆ ಮಾಡುತ್ತಿದ್ದಾರೆ. ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಲೋಕಿಕೆರೆ ನಾಗರಾಜ್ ವಾದ್ಯಗೋಷ್ಠಿ ಕಲಾವಿದರು, ಆಟೋರಿಕ್ಷಾ ಚಾಲಕರಿಗೆ 200 ಆಹಾರದ ಕಿಟ್ ವಿತರಣೆ ಮಾಡಿದ್ದಾರೆ. ಸ್ಫೂರ್ತಿ ಸೇವಾ ಸಂಘದಿಂದ ದಾವಣಗೆರೆಯ ಅನೇಕ ಭಾಗದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಹಲವಾರು ಸಂಘ-ಸಂಸ್ಥೆಗಳು ಸಹ ಜನರ ನೆರವು ನೀಡುತ್ತಿವೆ. ಜಿಲ್ಲೆಯಲ್ಲಿನ 3.89 ಲಕ್ಷದಷ್ಟು ಬಿಪಿಎಲ್ ಕುಟುಂಬಗಳಿಗೆ 2 ತಿಂಗಳ ಪಡಿತರ ನೀಡಲಾಗುತ್ತಿದೆ. ವಲಸೆ ಕಾರ್ಮಿಕರು ಒಳಗೊಂಡಂತೆ ಎಲ್ಲರಿಗೂ ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ. ಇನ್ನೂ ಬೇಕಾದರೂ ನೀಡಲಾಗುವುದು. ಜನರು ಆತುರ ಮಾಡಬಾರದು ಎಂದರು.
ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಲೋಕಿಕೆರೆ ನಾಗರಾಜ್ ಮಾತನಾಡಿ, ಲಾಕ್‌ಡೌನ್ ಹಿನ್ನೆಲೆಯಲ್ಲಿ ತೊಂದರೆಯಲ್ಲಿರುವರಿಗೆ ಪ್ರತಿ ನಿತ್ಯ ಆಹಾರದ ಕಿಟ್ ನೀಡಲಾಗುತ್ತಿದೆ. ಈಗ 200ಕ್ಕೂ ಹೆಚ್ಚು ವಾದ್ಯಗೋಷ್ಠಿ ಕಲಾವಿದರು, ಆಟೋರಿಕ್ಷಾ ಚಾಲಕರಿಗೆ ಆಹಾರದ ಕಿಟ್ ವಿತರಣೆ ಮಾಡಲಾಗಿದೆ. ಸೋಮವಾರವೂ ಈ ಕಾರ್ಯ ಮುಂದುವರೆಸಲಾಗುವುದು ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಸದಸ್ಯೆ ಗೀತಾ ದಿಳ್ಯೆಪ್ಪ, ಬಾಡದ ಆನಂದರಾಜ್, ಎಚ್.ಆರ್. ಲಿಂಗರಾಜ್, ಅಣಬೇರು ಜೀವನಮೂರ್ತಿ, ಸತ್ಯನಾರಾಯಣಮೂರ್ತಿ, ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ, ಎಸ್ಪಿ ಹನುಮಂತರಾಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.