ಕೊನೆಗೂ ಆರಂಭವಾಯ್ತು ಮದ್ಯ ಮಾರಾಟ
Team Udayavani, May 14, 2020, 11:27 AM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಲಾಕ್‌ಡೌನ್ 3.0 ನಡುವೆ ಜಿಲ್ಲಾಡಳಿತ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೇ.17ರ ವರೆಗೆ ಮದ್ಯ ಮಾರಾಟಕ್ಕೆ ಅನುಮತಿ ನೀಡಿದೆ.
ದಾವಣಗೆರೆಯಲ್ಲಿನ ಕಂಟೈನ್ ಮೆಂಟ್ ಝೋನ್ ಹೊರತುಪಡಿಸಿ ಇತರೆ ಪ್ರದೇಶಗಳಲ್ಲಿ ಸಿಎಲ್-4, ಸಿಎಲ್-9 ಮತ್ತು ಸಿಎಲ್-7 ಸನ್ನದುಗಳಲ್ಲಿ ಅನುಮತಿ ನೀಡಲಾಗಿದೆ. ಹಾಗಾಗಿ ಬುಧವಾರ ಮಧ್ಯಾಹ್ನದಿಂದ ಬಾರ್ ಪ್ರಾರಂಭಿಸಲಾಯಿತು. ಲಾಕ್‌ಡೌನ್ ಹಿನ್ನೆಲೆಯಲ್ಲಿ ಮಾರಾಟವಾಗದೆ ಉಳಿದಿರುವ ಬಿಯರ್, ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಪ್ರತಿ ದಿನ ಬೆಳಗ್ಗೆ 9 ರಿಂದ ಸಂಜೆ 7ರ ವರೆಗೆ ಮಾತ್ರ ಸಮಯ ನಿಗದಿಪಡಿಸಲಾಗಿದೆ. ದಾವಣಗೆರೆ ಜಿಲ್ಲೆ ಹಸಿರು ವಲಯಕ್ಕೆ ಸೇರಿದ್ದರ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಹಸಿರು ನಿಶಾನೆ ನೀಡಲಾಗಿತ್ತು. ಇದ್ದಕ್ಕಿದ್ದಂತೆ ಕೊರೊನಾ ಪ್ರಕರಣ ಪತ್ತೆಯಾಗಿದ್ದರಿಂದ ಮದ್ಯ ಮಾರಾಟವನ್ನು ನಿಷೇಧಿಸಲಾಗಿತ್ತು. ಈಗ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಒಬ್ಬರಿಂದ ಒಬ್ಬರಿಗೆ 6 ಅಡಿ ಅಂತರ, ಒಂದು ಸಮಯದಲ್ಲಿ ಐವರಿಗೆ ಮಾತ್ರ ಅವಕಾಶ ಹಾಗೂ ಪಾರ್ಸೆಲ್‌ಗೆ ಮಾತ್ರ ಅವಕಾಶ ಎಂಬಿತ್ಯಾದಿ ಷರತ್ತಿನ ಅನ್ವಯ ಅನುಮತಿ ನೀಡಿರುವುದರಿಂದ ಮದ್ಯ ಪ್ರಿಯರಿಗೆ ಅನುಕೂಲವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.