ಕ್ವಾರಂಟೈನ್‌ಗೆ ಜನರ ವಿರೋಧ
Team Udayavani, May 25, 2020, 11:27 AM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಜನವಸತಿ ಪ್ರದೇಶದಲ್ಲಿರುವ ಸರ್ಕಾರಿ ಸ್ವಾಮ್ಯದ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡಬಾರದು ಎಂದು ವಿರೋಧಿಸಿ ಭಾನುವಾರ ಕೆ.ಬಿ. ಬಡಾವಣೆ ನಿವಾಸಿಗಳು ಪ್ರತಿಭಟನೆ ನಡೆಸಿದರು.
ಕೆ.ಬಿ. ಬಡಾವಣೆಯ 1ನೇ ಮುಖ್ಯ ರಸ್ತೆ, 1ನೇ ಕ್ರಾಸ್‌ನ ಎಲಿಗಾರ್ ಶಿವಪ್ಪ ರಸ್ತೆಯಲ್ಲಿರುವ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗುವುದು ಎಂಬ ವಿಷಯ ಬಹಳ ದಿನಗಳಿಂದಲೂ ಕೇಳಿ ಬರುತ್ತಿದೆ. ವಾರ್ಡ್‌ನ ಜನಪ್ರತಿನಿಧಿಗಳು, ಮುಖಂಡರ ಭೇಟಿ ಮಾಡಿ, ಇಲ್ಲಿ ಯಾವುದೇ ಕಾರಣಕ್ಕೂ ಕ್ವಾರಂಟೈನ್ ಮಾಡಲು ಅವಕಾಶ ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದೇವೆ. ಆದರೂ ಕ್ವಾರಂಟೈನ್‌ಗಾಗಿ ಹಾಸ್ಟೆಲ್ ಬಳಕೆ ಮಾಡಿಕೊಳ್ಳಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿವೆ. ಯಾವುದೇ ಕಾರಣಕ್ಕೂ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡಬಾರದು ಎಂದು ಪ್ರತಿಭಟನಾಕಾರರು ತಾಕೀತು ಮಾಡಿದರು.
ಸರ್ಕಾರದ ಆದೇಶ, ನಿಯಮಗಳಿಗೆ ವಿರೋಧ ಇಲ್ಲ. ಆದರೆ ಜನನಿಬಿಡ ಪ್ರದೇಶಗಳ ಬದಲಿಗೆ ಇತರೆಡೆ ಕ್ವಾರಂಟೈನ್ ಮಾಡುವುದು ಸೂಕ್ತ. ಕೆ.ಬಿ. ಬಡಾವಣೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ವಯೋವೃದ್ಧರು, ಮಕ್ಕಳು ಇದ್ದಾರೆ. ಅತೀ ಸೂಕ್ಷ್ಮ ಪರಿಸ್ಥಿತಿ ಇರುವಾಗ ಕ್ವಾರಂಟೈನ್ ಮಾಡುವುದರಿಂದ ಇತರರಿಗೆ ತೊಂದರೆ ಆಗುತ್ತದೆ. ಅಲ್ಲದೆ ಕ್ವಾರಂಟೈನ್ ಮಾಡಬೇಕು ಎಂದುಕೊಂಡಿರುವ ಹಾಸ್ಟೆಲ್‌ನಲ್ಲೂ ಸಾಕಷ್ಟು ಸಮಸ್ಯೆಗಳಿವೆ. ಹಾಗಾಗಿ ಯಾವುದೇ ಕಾರಣಕ್ಕೂ ಇಲ್ಲಿ ಕ್ವಾರಂಟೈನ್ ಮಾಡಬಾರದು. ಎಂತದ್ದೇ ಪರಿಸ್ಥಿತಿಯಲ್ಲಿ ಕ್ವಾರಂಟೈನ್‌ಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.