ವಿವಿಧೆಡೆ ಬಸವಣ್ಣನ ಸ್ಮರಣೆ
ಕೋವಿಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಈ ಬಾರಿ ಸರಳ ಆಚರಣೆ
Team Udayavani, Apr 27, 2020, 11:40 AM IST
ದಾವಣಗೆರೆ: ಜಿಲ್ಲಾಡಳಿತದಿಂದ ಬಸವ ಜಯಂತಿ ಆಚರಿಸಲಾಯಿತು.
ದಾವಣಗೆರೆ: ಪ್ರತಿಯೊಬ್ಬರು ನಿಸ್ವಾರ್ಥ ಕಾಯಕದ ಮೂಲಕ ದೇವರನ್ನು ಕಾಣಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ತಿಳಿಸಿದರು.
ಭಾನುವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಬಸವ ಜಯಂತಿಯಲ್ಲಿ ಮಾತನಾಡಿದ ಅವರು, ದಿನದಲ್ಲಿ ಒಂದು ನಿಮಿಷವಾದರೂ ಬಸವಣ್ಣನವರಾಗುವ ಪ್ರಯತ್ನವನ್ನು ನಾವೆಲ್ಲ ಮಾಡಬೇಕು ಎಂದರು. ಮನಸ್ಸಿನಲ್ಲಿ ಸ್ವಾರ್ಥ ಮತ್ತು ದ್ವೇಷ, ಅಸೂಯೆ ಇಟ್ಟುಕೊಂಡು ಎಷ್ಟು ಪೂಜೆ ಮಾಡಿದರೂ ಯಾವುದೇ ಪ್ರ ಪ್ರಯೋಜನ ಇಲ್ಲ. ಬದಲಾಗಿ ಒಳ್ಳೆಯ ಮನದಿಂದ ಪೂಜೆ ಮಾಡಬೇಕು. ದಾವಣಗೆರೆಯವರೇ ಆದ ಹಿರಿಯರಾದ ಹರ್ಡೇಕರ್ ಮಂಜಪ್ಪನವರು ಆರಂಭಿಸಿದ ಬಸವ ಜಯಂತಿಯನ್ನು ದಾವಣಗೆರೆಯಲ್ಲೇ ಸರಳವಾಗಿ ಆಚರಿಸುತ್ತಿರುವುದು ಹಾಗೂ ಇಲ್ಲಿ ಸೇವೆ ಸಲ್ಲಿಸುತ್ತಿರುವುದು ಕೂಡ ನನ್ನ ಸೌಭಾಗ್ಯ ಎಂದರು.
ಬಸವ ಬಳಗದ ಸಂಚಾಲಕ ಸಿದ್ದರಾಮಣ್ಣ ಮಾತನಾಡಿ, ನಾವೆಲ್ಲಾ ಬಸವನ ಹೃದಯ ಬಳ್ಳಿಗಳು. ಜಗತ್ತಿಗೇ ಬೆಳಕು ನೀಡಿದ ಜಗಜ್ಯೋತಿ ಬಸವಣ್ಣನವರು ನುಡಿದಂತೆ ನಡೆದ ಮಹಾನ್ ಚೇತನ. ಎಲ್ಲ ಜಾತಿ, ಧರ್ಮ, ಮತದವರನ್ನು ಒಟ್ಟುಗೂಡಿಸಿ ಸಮಾನತೆಯ ಎತ್ತಿ ಹಿಡಿದವರು. ಕಾಯಕದಲ್ಲಿ ದೇವರನ್ನು ಕಂಡು ಕಾಯಕವೇ ಕೈಲಾಸ ಎಂದು ಸಾರಿದ ಬಸವಣ್ಣನವರು ನಮ್ಮ ನಿಮ್ಮೆಲ್ಲರೂ ಮಧ್ಯೆಯೂ ಇರಬೇಕು. ಎಲ್ಲಿ ನೋಡಿದರಲ್ಲಿ ಬಸವಣ್ಣ ಕಾಣಬೇಕು ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ, ಮುಖ್ಯ ಕಾರ್ಯನಿರ್ವಹಕಾಧಿಕಾರಿ ಪದ್ಮಾ ಬಸವಂತಪ್ಪ, ಬಸವ ಬಳಗದ ಎಚ್.ಎಂ. ಸ್ವಾಮಿ, ಮಹಾಂತೇಶ್ ಅಗಡಿ, ರೈತ ಮುಖಂಡ ಬಲ್ಲೂರು ರವಿಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಕೆ.ಎಸ್. ಗೋವಿಂದರಾಜ್, ಬಸವ ಬಳಗದ ಪದಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.