ಮೂವರಿಗೆ ಪಾಸಿಟಿವ್‌-ಐವರು ಡಿಸ್ಚಾರ್ಜ್‌

ಕೋವಿಡ್ ಗುಣಪಡಿಸಿದ ವೈದ್ಯರು,ಸಿಬ್ಬಂದಿ-ಜಿಲ್ಲಾಡಳಿತಕ್ಕೆ ಸೋಂಕು ಮುಕ್ತನಿಂದ ನಮನ

Team Udayavani, May 22, 2020, 11:33 AM IST

22-May-03

ದಾವಣಗೆರೆ: ಕೋವಿಡ್ ಸೋಂಕಿನಿಂದ ಗುಣಮುಖರಾದ ವ್ಯಕ್ತಿ ಬೀಳ್ಕೊಟ್ಟ ಸಂದರ್ಭದಲ್ಲಿ ಗುರುವಾರ ಜಿಲ್ಲಾಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತಕ್ಕೆ ಕೃತಜ್ಞತೆ ಸಲ್ಲಿಸಿದರು.

ದಾವಣಗೆರೆ: ಗುರುವಾರ ಸಹ ಮೂವರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಗುಣಮುಖರಾದ ಐವರನ್ನು ಡಿಸ್ಚಾರ್ಜ್‌ ಮಾಡಲಾಗಿದೆ. 6 ವರ್ಷದ ಬಾಲಕಿ, 15 ವರ್ಷದ ಬಾಲಕ ಹಾಗೂ 68 ವರ್ಷದ ಮಹಿಳೆಗೆ ಸೋಂಕು ವ್ಯಾಪಿಸಿರುವುದು ದೃಢಪಟ್ಟಿದ್ದು, ಈ ಮಧ್ಯೆ ಚಿಕಿತ್ಸೆಯಿಂದ ಗುಣಮುಖರಾದ ಐವರನ್ನು ಡಿಸ್ಚಾರ್ಜ್‌ ಮಾಡಲಾಯಿತು.

ಜಿಲ್ಲಾಸ್ಪತ್ರೆಯಲ್ಲಿ ಸಂಜೆ ಸರಳ ಕಾರ್ಯಕ್ರಮದ ಮೂಲಕ ಐವರಿಗೆ ಚಪ್ಪಾಳೆ ತಟ್ಟುತ್ತಾ, ಪುಷ್ಪವೃಷ್ಟಿಗೈದು ಅಧಿಕಾರಿಗಳು, ವೈದ್ಯರು, ಆರೋಗ್ಯ ಇಲಾಖೆ ಆಧಿಕಾರಿಗಳು, ಸಿಬ್ಬಂದಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲೆಯಲ್ಲಿ ಮೂರು ಕೋವಿಡ್ ಪಾಸಿಟಿವ್‌ ಪ್ರಕರಣ ವರದಿಯಾಗಿದೆ. ರೋಗಿ-1483, 1485 ಹಾಗೂ 1488 ಜಾಲಿನಗರಕ್ಕೆ ಸಂಬಂಧಟ್ಟವರು. ಕಂಟೈನ್‌ಮೆಂಟ್‌ ಝೋನ್‌ನಲ್ಲಿರುವ ಎಪಿಸೆಂಟರ್‌ ವಾಸಿಯಾದ 15 ವರ್ಷದ ಬಾಲಕ (ರೋಗಿ-1483)ನಿಗೆ ಪಾಸಿಟಿವ್‌ ದೃಢಪಟ್ಟಿದೆ. 68 ವರ್ಷದ ಮಹಿಳೆ (ರೋಗಿ-1485)ಗೆ ರೋಗಿ-667ರ ದ್ವಿತೀಯ ಸಂಪರ್ಕ ಹಾಗೂ 6 ವರ್ಷದ ಬಾಲಕಿ (ರೋಗಿ-1489)ಗೆ ರೋಗಿ-634ರ ಸಂಪರ್ಕದಿಂದ ಸೋಂಕು ವ್ಯಾಪಿಸಿದೆ ಎಂದರು.

ಕೋವಿಡ್ ಸೋಂಕಿನಿಂದ ಗುಣಮುಖರಾದ ಐವರನ್ನು (ಪಿ-618, 620, 623, 628, 664) ಜಿಲ್ಲಾ ಕೋವಿಡ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಇವರಲ್ಲಿ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರಾಗಿದ್ದು, ಇದುವರೆಗೆ ಚಿಕಿತ್ಸೆಯಿಂದ ಗುಣಮುಖರಾದ ಒಟ್ಟು 14 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಕೋವಿಡ್ ಸೋಂಕಿತ ಒಟ್ಟು 115 ಮಂದಿಯಲ್ಲಿ ನಾಲ್ವರು ಮೃತಪಟ್ಟಿದ್ದು, 97 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿಸಿದರು.

ಕೋವಿಡ್ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಿ, ಅವರಲ್ಲಿ ರೋಗ ನಿರೋಧಕಶಕ್ತಿ ಹೆಚ್ಚಿಸಿ ಆದಷ್ಟು ಬೇಗ ಗುಣಮುಖರಾನ್ನಾಗಿಸುವ ಪ್ರಯತ್ನ ಮಾಡಲಾಗುತ್ತಿದೆ. 14 ದಿನ ಚಿಕಿತ್ಸೆ ಮುಗಿದವರದ್ದು ಮೊತ್ತೂಮ್ಮೆ ಸ್ಯಾಂಪಲ್‌ ಸಂಗ್ರಹಿಸಿ ಕಳುಹಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಆದಷ್ಟು ಬೇಗ ಎಲ್ಲರೂ ಗುಣಮುಖರಾಗುವ ವಿಶ್ವಾಸ ಇದೆ ಎಂದರು. ಒಟ್ಟು 1400 ಸ್ಯಾಂಪಲ್‌ ವರದಿ ಬರಬೇಕಿದೆ. ಇಂದು 601 ಸ್ಯಾಂಪಲ್‌ ಸಂಗ್ರಹಿಸಲಾಗಿದ್ದು, ಅದರಲ್ಲಿ ಶಿವಮೊಗ್ಗಕ್ಕೆ 200 ಸ್ಯಾಂಪಲ್‌ ಕಳುಹಿಸಿ ಕೊಡಲಾಗಿದೆ. ಕೆಲವು ಸ್ಯಾಂಪಲ್‌ಗ‌ಳನ್ನು ಖಾಸಗಿ ಆನಂದ್‌ ಡಯಾಗ್ನೋಸ್ಟಿಕ್‌ ಸೆಂಟರ್‌ ಹಾಗೂ ಉಳಿದ 60 ರಿಂದ 70 ಸ್ಯಾಂಪಲ್‌ಗ‌ಳನ್ನು ಸ್ಥಳೀಯ ಲ್ಯಾಬ್‌ಗ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ನಾಳೆಯಿಂದ ಜೆಜೆಎಂ ಲ್ಯಾಬ್‌ ತೆರೆಯಲಿದ್ದು, ಅಲ್ಲಿಗೂ ಕಳುಹಿಸಲಾಗುವುದು ಎಂದು ತಿಳಿಸಿದರು.

ಪಾಲಿಕೆ ಮೇಯರ್‌ ಬಿ.ಜಿ.ಅಜಯಕುಮಾರ್‌ ಮಾತನಾಡಿ, ಲಾಕ್‌ಡೌನ್‌ ಸಡಿಲಿಕೆ ನಂತರ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದೆ. ಹಾಗಾಗಿ ಎಲ್ಲರೂ ಬಹಳಷ್ಟು ಜಾಗರೂಕತೆ ವಹಿಸಬೇಕು. ಆದಷ್ಟು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಮಾಸ್ಕ್ ಧರಿಸಿ, ಸ್ಯಾನಿಟೆ„ಸರ್‌ ಉಪಯೋಗಿಸುವ ಮೂಲಕ ಕೋವಿಡ್ ನಿಯಂತ್ರಿಸಲು ಸಾರ್ವಜನಿಕರು ಸಹಕರಿಸಬೇಕು ಎಂದರು. ದಾವಣಗೆರೆಯಲ್ಲಿ ಈಗಾಗಲೇ ಸಕ್ರಿಯವಾದ 97 ಪ್ರಕರಣಗಳಿವೆ. ವೈದ್ಯರ ಪ್ರಕಾರ ಅವರಲ್ಲಿ 50 ಜನ 14 ದಿನ ಚಿಕಿತ್ಸೆ ಮುಗಿಸಿರುವವರು ಇದ್ದಾರೆ. ಅವರ ಎರಡನೇ ಸುತ್ತಿನ ಸ್ಯಾಂಪಲ್‌ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ನಿಯಮಾನುಸಾರ ಅವರನ್ನು ಬಿಡುಗಡೆಗೊಳಿಸಲಾಗುವುದು. ಈ ಮಧ್ಯೆ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ, ಮಮತಾ ಹೊಸಗೌಡರ್‌, ಡಿಎಚ್‌ಒ ಡಾ| ರಾಘವೇಂದ್ರಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಜಿ.ಡಿ. ರಾಘವನ್‌, ಜಿಲ್ಲಾ ಶಸ್ತ್ರಚಿತ್ಸಕ ಸುಭಾಷಚಂದ್ರ, ತಹಶೀಲ್ದಾರ್‌ ಗಿರೀಶ್‌ ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.