Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Team Udayavani, Dec 24, 2024, 6:40 PM IST

7-dvg

ದಾವಣಗೆರೆ: ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಡಿ.24ರ ಮಂಗಳವಾರ ಸಂಜೆ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಸಂಸದರು, ಮುಖಡರು, ಕಾರ್ಯಕರ್ತರು, ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಿದರು.

ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅತ್ಯಂತ ಅವಹೇಳಕಾರಿ ಹೇಳಿಕೆ ನೀಡಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡುವವರೆಗೂ ಕಾಂಗ್ರೆಸ್‌ನ ಹೋರಾಟ ನಿಲ್ಲುವುದೇ ಇಲ್ಲ ಎಂದು ಎಚ್ಚರಿಸಿದರು. ಜೈ ಭೀಮ್, ಜೈ ಜೈ ಭೀಮ್, ಜೈ ಸಂವಿಧಾನ್… ಘೋಷಣೆ ಕೂಗಿದರು.

ಸಂಸದೆ ಡಾ| ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, ಕಳೆದ ನ.26 ರಂದು ದೇಶದ್ಯಾಂತ 75ನೇ ಸಂವಿಧಾನ ದಿನ ಆಚರಣೆ ಮಾಡಲಾಗಿದೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ತಲಾ ಎರಡು ದಿನಗಳ ಕಾಲ ಸಂವಿಧಾನ, ರಚನೆ, ನೀಡಿರುವ ಹಕ್ಕು, ನಿರ್ವಹಿಸಬೇಕಾಗಿರುವ ಕರ್ತವ್ಯಗಳ ಬಗ್ಗೆ ಎಲ್ಲ ಸದಸ್ಯರಿಗೆ ಅಭಿಪ್ರಾಯ ತಿಳಿಸುವ ಅವಕಾಶ ಮಾಡಿಕೊಟ್ಟಿದ್ದ ಸಂದರ್ಭದಲ್ಲಿ ಅಮಿತ್ ಶಾ ಅವರು, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎಂದರೆ 7 ಜನ್ಮಕ್ಕೂ ಸ್ವರ್ಗ ಸಿಗುತ್ತದೆ… ಎಂಬ ಹೇಳಿಕೆ ನೀಡಿದ್ದು ಅತ್ಯಂತ ಖಂಡನೀಯ ಎಂದು ದೂರಿದರು.

ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದ ಹಿನ್ನೆಲೆಯಿಂದಲೇ ದೇಶದ ಎಲ್ಲರಿಗೂ ಮತದಾನದ ಹಕ್ಕು ದೊರೆತಿದೆ. ಒಳ್ಳೆಯ ಪ್ರತಿನಿಧಿ ಆಯ್ಕೆ ಮಾಡುವ, ಒಳ್ಳೆಯ ಅಭಿವೃದ್ಧಿ ಕೆಲಸ, ಮೂಲಭೂತ ಸೌಲಭ್ಯ, ಹಕ್ಕು ದೊರೆತಿವೆ. ಅಂತಹ ಸೌಲಭ್ಯಗಳು, ಮೂಲಭೂತ ಹಕ್ಕುಗಳ ನೀಡಿರುವಂತಹ ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಶಾ ಅವರು ಅವಮಾನವಾಗುವ ರೀತಿ ಹೇಳಿಕೆ ನೀಡಿರುವುದರ ವಿರುದ್ಧ ಎಲ್ಲರೂ ವಿರೋಧಿಸಲೇಬೇಕು ಎಂದರು.

ಅಂಬೇಡ್ಕರ್ ಅವರ ಕುರಿತಂತೆ ಅವಹೇಳನಕಾರಿ ಹೇಳಿಕೆ ನೀಡಿರುವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಇಂಡಿಯಾ ಒಕ್ಕೂಟದ ನೇತೃತ್ವದಲ್ಲಿ ರಾಜ್ಯ, ಲೋಕಸಭೆ ಒಳಗೆ ಮತ್ತು ಹೊರಗೆ ನಿರಂತರ ಹೋರಾಟ ಮಾಡಲಾಗುತ್ತಿದೆ. ರಾಷ್ಟ್ರಪತಿ ಅವರಿಗೂ ಪತ್ರ ಬರೆಯಲಾಗಿದೆ. ಕಾಂಗ್ರೆಸ್‌ನ 99 ಲೋಕಸಭಾ ಸದಸ್ಯ ರ ಎಲ್ಲ ಕ್ಷೇತ್ರದಲ್ಲಿ ಹೋರಾಟ ನಡೆಸಲಾಗುತ್ತಿದೆ. ಪ್ರತಿಯೊಬ್ಬರಿಗೂ ಹಕ್ಕುಗಳ ನೀಡಿರುವ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಅಮಿತ್ ಶಾ ಅವರು ರಾಜೀನಾಮೆ ನೀಡುವ ಜೊತೆಗೆ ದೇಶದ ಜನರ ಬಹಿರಂಗ ಕ್ಷಮೆ ಕೋರುವವರೆಗೂ ಕಾಂಗ್ರೆಸ್‌ನ ಹೋರಾಟ ನಿಲ್ಲುವುದೇ ಇಲ್ಲ ಎಂದು ಎಚ್ಚರಿಸಿದರು.

ಮೇಯರ್ ಚಮನ್ ಸಾಬ್, ಉಪ ಮೇಯರ್ ಸೋಗಿ ಶಾಂತಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ, ಎ.‌ ನಾಗರಾಜ್, ಬಿ.ಎಚ್. ವೀರಭದ್ರಪ್ಪ ಇತರರು ಇದ್ದರು.

ಟಾಪ್ ನ್ಯೂಸ್

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.