ಗಿಡ ನೆಡಿ ಬಹುಮಾನ ಗೆಲ್ಲಿ ಸ್ಪರ್ಧೆ ಫಲಿತಾಂಶ ಪ್ರಕಟ
Team Udayavani, Jun 21, 2020, 11:32 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದಾವಣಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಿ.ಎಸ್. ಚನ್ನಬಸಪ್ಪ ಅಂಡ್ ಸನ್ಸ್ ನಿಂದ ಏರ್ಪಡಿಸಿದ್ದ “ಗಿಡ ನೆಡಿ ಬಹುಮಾನ ಗೆಲ್ಲಿ’ ಸ್ಪರ್ಧೆಯಲ್ಲಿ ದಾವಣಗೆರೆ ಕೆಟಿಜೆ ನಗರದ 16ನೇ ಕ್ರಾಸ್ ನಿವಾಸಿ ಮಂಜುನಾಥ್, ಸರಸ್ವತಿ ಬಡಾವಣೆಯ ಶ್ವೇತಾ, ಹರಿಹರದ ಅಯ್ಯಪ್ಪ ಕಾಲೋನಿಯ ಕುಮಾರಸ್ವಾಮಿ ಸಾಲಿಮಠ, ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಶಿರನಹಳ್ಳಿ ಗ್ರಾಮದ ಸುರೇಶ್ (ವಿಜಯನಗರ ಶುಗರ್ಸ್), ದಾವಣಗೆರೆಯ ಪಿ.ಜೆ. ಬಡಾವಣೆಯ ಕೆ.ಎಂ. ಪ್ರೀತಿಕುಮಾರ್ ಬಹುಮಾನ ಗೆದ್ದಿದ್ದಾರೆ.
ಶನಿವಾರ ನಡೆದ ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಲಕ್ಷ್ಮೀಕಾಂತ್ ಬೊಮ್ಮನಾರ್ ಬಹುಮಾನ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ತೋಟಗಾರಿಕಾ ಇಲಾಖೆಯಿಂದ ತರಕಾರಿ ಬೀಜಗಳನ್ನು ನೀಡಲಾಗುತ್ತಿದೆ. ಪ್ರತಿಯೊಬ್ಬರು ಮನೆಯಲ್ಲಿಯೇ ತರಕಾರಿ ಬೆಳೆಯುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಬಿ.ಎಸ್. ಚನ್ನಬಸಪ್ಪ ಆ್ಯಂಡ್ ಸನ್ಸ್ ಮಾಲೀಕರಾದ ಬಿ.ಎಸ್. ಮೃಣಾಲ್ ಮಾತನಾಡಿ, ಮನುಷ್ಯ ಹುಟ್ಟಿದಾಗ ಉಸಿರಿನೊಂದಿಗೆ ಜೀವನ ಪ್ರಾರಂಭಿಸುತ್ತಾನೆ. ಸಾಯುವಾಗ ಉಸಿರಿನಿಂದ ಮುಕ್ತಾಯವಾಗುತ್ತಾನೆ. ಅಂತಹ ಅಮೂಲ್ಯವಾದ ಉಸಿರು ಸಿಗುವುದೇ ಗಿಡ ಮತ್ತು ಮರಗಳಿಂದ. ಪ್ರತಿಯೊಬ್ಬರೂ ಗಿಡ, ಮರ ಬೆಳೆಸುವ ಮೂಲಕ ನಾಡನ್ನು ಉಳಿಸಬೇಕು ಎಂದು ಮನವಿ ಮಾಡಿದರು. ಬಿ.ಎಸ್. ಚನ್ನಬಸಪ್ಪ ಆ್ಯಂಡ್ ಸನ್ಸ್ ಮಾಲೀಕರಾದ ದೀಪಾ ಶಿವಕುಮಾರ್, ಗ್ರಾಹಕರು, ವಿಜೇತರು, ಸಿಬ್ಬಂದಿ ವರ್ಗದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.