ಕಳಪೆ ಬೀಜ ವಿತರಣೆ: ರೈತ ಸಂಘದಿಂದ ಕ್ರಮಕ್ಕೆ ಆಗ್ರಹ
Team Udayavani, Apr 23, 2020, 11:21 AM IST
ದಾವಣಗೆರೆ: ಕಳಪೆ ಗುಣಮಟ್ಟದ ಭತ್ತದ ಬೀಜ ನೀಡಿರುವ ಕಂಪನಿ ಮತ್ತು ಮಾರಾಟ ಮಾಡಿರುವ ಅಂಗಡಿ ಮಾಲಿಕರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಬುಧವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ(ಹುಚ್ಚವ್ವನಹಳ್ಳಿ ಮಂಜುನಾಥ್‌ಬಣ) ನೇತೃತ್ವದಲ್ಲಿ ರೈತರು ಕೃಷಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ದಾವಣಗೆರೆ ತಾಲೂಕಿನ ಕೋಲ್ಕುಂಟೆ ಗ್ರಾಮದ ಬಿ. ಬಸಪ್ಪ, ಕೆ.ಎಚ್. ನಾಗೇಂದ್ರಪ್ಪ, ಮಂಜುನಾಥ್, ಪೂಜಾರ್ ಗುರುಮೂರ್ತಿ, ಹನುಮಂತಪ್ಪ, ಉಲ್ಲಳ್ಳಿ ಮಂಜಪ್ಪ, ಹುಲೇಕಾರ್ ಭೀಮಪ್ಪ, ರುದ್ರೇಶ್ ಎಂಬುವವರು ದಾವಣಗೆರೆಯ ಅಂಗಡಿಯೊಂದರಲ್ಲಿ ಬಿಪಿಟಿ ಸೋನಾ ಬಿತ್ತನೆ ಬೀಜ ಖರೀದಿಸಿ ನಾಟಿ ಮಾಡಿದ್ದರು. ಒಡೆ ಬಿಚ್ಚುವ ಹಂತದಲ್ಲಿ ಸಾಕಷ್ಟು ಸಮಸ್ಯೆಯಾಗಿದೆ. ಕಳಪೆ ಗುಣಮಟ್ಟದ ಬಿತ್ತನೆ ಬೀಜದಿಂದ ಸರಿಯಾಗಿ ಒಡೆ ಹೊಡೆದಿಲ್ಲ ಎಂದು ರೈತರು ಆರೋಪಿಸಿದರು.
ಕಳಪೆ ಗುಣಮಟ್ಟದ ಭತ್ತದ ಬೀಜ ತಯಾರಿಕಾ ಕಂಪನಿ ಮತ್ತು ಮಾರಾಟಗಾರರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು. ನಷ್ಟಕ್ಕೀಡಾಗಿರುವ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು. ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್, ಬಿ. ಬಸಪ್ಪ, ಕೆ.ಎಚ್. ನಾಗೇಂದ್ರಪ್ಪ, ಮಂಜುನಾಥ್, ಪೂಜಾರ್ ಗುರುಮೂರ್ತಿ, ಹನುಮಂತಪ್ಪ, ಉಲ್ಲಳ್ಳಿ ಮಂಜಪ್ಪ, ಹುಲೇಕಾರ್ ಭೀಮಪ್ಪ, ರುದ್ರೇಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.