ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ
ಯಾವುದೇ ವಿದ್ಯಾರ್ಥಿ ವಂಚಿತರಾಗದಂತೆ ಅಗತ್ಯ ಕ್ರಮಕ್ಕೆ ಸೂಚನೆ
Team Udayavani, Jun 3, 2020, 11:26 AM IST
ದಾವಣಗೆರೆ: ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಸಭೆಯಲ್ಲಿ ಎಸ್.ಆರ್. ಉಮಾಶಂಕರ್ ಮಾತನಾಡಿದರು
ದಾವಣಗೆರೆ: ಕೋವಿಡ್ ವೈರಸ್ ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ತಿಳಿಸಿದ್ದಾರೆ.
ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಮಂಗಳವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವಸಿದ್ಧತೆಗಾಗಿ ಆಯೋಜಿಸಲಾಗಿದ್ದ ಶಿಕ್ಷಣ ಇಲಾಖೆಯ ಅಧಿಕಾರಿಗ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೂ.25ರಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಿಂದ ಯಾವುದೇ ವಿದ್ಯಾರ್ಥಿ ವಂಚಿತರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ಬಹಳ ಮುಖ್ಯವಾದ ಘಟ್ಟ. ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯಲು ಮಾನಸಿಕವಾಗಿ ಸಿದ್ಧರಾಗಿರುವಂತೆ ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಜೂ.25 ರಿಂದ ಜು.4ರವರೆಗೆ ನಡೆಯುವ ಪರೀಕ್ಷೆಯಲ್ಲಿ ಒಂದು ಕೊಠಡಿಯಲ್ಲಿ 18ರಿಂದ 20 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರತಿ ವಿದ್ಯಾರ್ಥಿಗೆ 2 ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಲಾಗುವುದು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗುವುದು, ಸಾಮಾಜಿಕ ಅಂತರ ಒಳಗೊಂಡಂತೆ ಎಲ್ಲ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಬಹುದಿನಗಳಿಂದ ವಿದ್ಯಾರ್ಥಿಗಳು ಪರೀಕ್ಷೆ ಎದುರು ನೋಡುತ್ತಿದ್ದರು. ಈಗ ಪರೀಕ್ಷೆ ದಿನಾಂಕ ಪ್ರಕಟಗೊಂಡಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಿಲ್ಲ. ಕೆಲ ರಾಜ್ಯಗಳಲ್ಲಿ ಈಗಾಗಲೇ ಪರೀಕ್ಷೆ ನಡೆಸಲಾಗುತ್ತಿದೆ. ರಾಜ್ಯದಲ್ಲೂ ಪರೀಕ್ಷೆ ನಡೆಸಲು ಎಲ್ಲಾ ರೀತಿಯಿಂದಲೂ ಚರ್ಚಿಸಿ ಹಾಗೂ ಶಿಕ್ಷಣ ತಜ್ಞರ ಅಭಿಪ್ರಾಯ ಸಂಗ್ರಹಿಸಿ ಜೊತೆಗೆ ಅಧಿಕಾರಿಗಳ ಸಭೆ ನಡೆಸಿ ಸರ್ಕಾರ ನಿರ್ಧಾರ ಕೈಗೊಂಡಿದೆ. ಕೋವಿಡ್ ಬಗ್ಗೆ ವಿದ್ಯಾರ್ಥಿಗಳಲ್ಲಿ ಯಾವುದೇ ಆತಂಕ ಬೇಡ. ಬದಲಾಗಿ ಎಚ್ಚರಿಕೆಯಿಂದ ಇರಬೇಕು ಎಂದು ಎಂದು ತಿಳಿಸಿದರು.
ಲಾಕ್‌ಡೌನ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಖಾಸಗಿ ಶಾಲಾ ವಾಹನ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಬಸ್ ಸಂಚಾರ ಇಲ್ಲದಿರುವೆಡೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಪರೀಕ್ಷಾ ಕೇಂದ್ರಗಳಿಗೆ ಬಿಡಬೇಕು. ಬಳಿಕ ಅವರ ಕೇಂದ್ರಸ್ಥಾನದಿಂದ ಕರೆದುಕೊಂಡ ಹೋಗಬೇಕು ಎಂದರು.
ಬಹುತೇಕ ಜಿಲ್ಲೆಗಳಲ್ಲಿ ಹಾಗೂ ಗಡಿಭಾಗದಲ್ಲಿನ ಶಾಲೆಗಳು ಕ್ವಾರಂಟೈನ್ ಕೇಂದ್ರಗಳಾಗಿದ್ದುವು. ಅಂತಹ ಶಾಲೆಗಳು ಪರೀಕ್ಷಾ ಕೇಂದ್ರಗಳಾಗಿದ್ದಲ್ಲಿ ಅವುಗಳನ್ನು ಮೂರು ದಿನಗಳ ಮುಂಚಿತವಾಗಿ ಡಿಸ್ ಇನ್‌ಫೆಕ್ಷನ್ ಮಾಡಬೇಕು. ಜಾಲಿನಗರದ ದುರ್ಗಾಬಿಂಕಾ ಶಾಲೆ ಕಂಟೈನ್‌ಮೆಂಟ್ ಝೋನ್‌ನಲ್ಲಿರುವ ಕಾರಣಕ್ಕೆ ಪೂರಕ ಶಾಲೆ ಗೊತ್ತು ಮಾಡಲಾಗಿದೆ ಎಂದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ವಿವಿಧ ಇಲಾಖೆಗಳ ಸಮನ್ವಯ ಸಾಧಿಸಿಕೊಂಡು ಸಹಕಾರದೊಂದಿಗೆ ಯಶಸ್ವಿಯಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುವುದುಎಂದರು. ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ ಮಾತನಾಡಿ, ಒಟ್ಟು 435 ಸರ್ಕಾರಿ ಶಾಲೆಗಳಲ್ಲಿ
1150 ಕೊಠಡಿಗಳ ವ್ಯವಸ್ಥೆ ಇದೆ, ಒಂದು ಕೊಠಡಿಯಲ್ಲಿ 18 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶವಿದೆ. ಒಟ್ಟು 20.927 ಪರೀಕ್ಷಾರ್ಥಿಗಳಿದ್ದಾರೆ. 10.311 ಬಾಲಕರು, 10.616 ಬಾಲಕಿಯರಿದ್ದಾರೆ. ಸ್ಕೌಟ್ ಆ್ಯಂಡ್ ಗೈಡ್ಸ್ ಸಂಸ್ಥೆಯಿಂದ 22 ಸಾವಿರ ಮಾಸ್ಕ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.