Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 35 ಸಾವಿರ ರೂ. ದಂಡ
Team Udayavani, Dec 18, 2024, 1:22 PM IST
ದಾವಣಗೆರೆ: ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 35 ಸಾವಿರ ರೂ. ದಂಡ ವಿಧಿಸಿದೆ.
ಹೊನ್ನಾಳಿ ತಾಲೂಕು ದೊಡ್ಡೇರಹಳ್ಳಿ ಗ್ರಾಮದ ಶಿವಕುಮಾರ್ ಶಿಕ್ಷೆಗೆ ಒಳಗಾದ ಆರೋಪಿ. 2021ರ ಜು.8 ರಂದು ದೊಡ್ಡೇರಹಳ್ಳಿಯಿಂದ ಬಡಗೇರ ಪರಮೇಶ್ವರಪ್ಪ ಎಂಬವರ ಸಹಾಯದಿಂದ ಅಪ್ರಾಪ್ತೆಯನ್ನು ಅಪಹರಿಸಿ, ಶಿವಮೊಗ್ಗ ತಾಲೂಕಿನ ಚಿಕ್ಕದಾನವಂದಿ ಗ್ರಾಮದ ತೋಟಕ್ಕೆ ಕರೆದೊಯ್ದು ನಾನು ನಿನ್ನನ್ನ ಪ್ರೀತಿಸುತ್ತೇನೆ. ಮದುವೆ ಆಗುತ್ತೇನೆ ಎಂದು ಅತ್ಯಾಚಾರವೆಸಗಿದ್ದನು.
ವೃತ್ತ ನಿರೀಕ್ಷಕ ಟಿ.ವಿ. ದೇವರಾಜ್ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ಆರೋಪ ಸಾಬೀತಾಗಿದ್ದರಿಂದ ಶಿವಕುಮಾರ್‌ಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 35 ಸಾವಿರ ರೂ. ದಂಡ ವಿಧಿಸಿದ್ದಾರೆ.
ದಂಡದ ಮೊತ್ತ 35 ಸಾವಿರ ರೂ. ನೊಂದಿಗೆ ಸರ್ಕಾರ 4 ಲಕ್ಷ ರೂಪಾಯಿ ಪರಿಹಾರವನ್ನು ಸಂತ್ರಸ್ಥೆಗೆ ನೀಡಬೇಕು ಎಂದು ಆದೇಶಿಸಿದ್ದಾರೆ. ಸರ್ಕಾರದ ಪರ ಸುನಂದಾ ಮಡಿವಾಳರ್ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
BJP ವಿಜಯೇಂದ್ರ ಪರ ಬಣದ ಮಹತ್ವದ ಸಭೆ ; ಯಾರ‍್ಯಾರು ಭಾಗಿ ..?
MUST WATCH
ಹೊಸ ಸೇರ್ಪಡೆ
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು
Success: ಯಶಸ್ವಿ ಜೀವನಕ್ಕೆ ಸೂತ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.