ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಬೀಳಗಿ
ಮುತುವರ್ಜಿ ವಹಿಸಿ ಪರೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚನೆ 93 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ 21,683 ವಿದ್ಯಾರ್ಥಿಗಳು
Team Udayavani, Jun 18, 2020, 11:44 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದಾವಣಗೆರೆ: ಸರ್ಕಾರದ ಆದೇಶದಂತೆ ಜೂ. 25 ರಿಂದ ಜು. 3 ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೋವಿಡ್-19 ಮಾರ್ಗಸೂಚಿಯನ್ವಯ ಸಾಮಾಜಿಕ ಅಂತರ, ಸ್ಯಾನಿಟೈಸಿಂಗ್, ಡಿಸ್‌ಇನ್‌ಫೆಕ್ಷನ್ ಒಳಗೊಂಡಂತೆ ಎಲ್ಲಾ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳು ಯಾವುದೇ ಕಳವಳ, ಅಭದ್ರತೆಯ ಭಯ ಇಲ್ಲದೆ ಪರೀಕ್ಷೆ ಬರೆಯಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.
ತುಂಗಭದ್ರಾ ಸಭಾಂಗಣದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ಪರೀಕ್ಷೆ ಒಂದು ಸವಾಲಿನ ಮತ್ತು ವಿಶೇಷ ಪರೀಕ್ಷೆಯಾಗಿದೆ. ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಲು ಎಲ್ಲ ತಯಾರಿ ಮಾಡಿಕೊಳ್ಳಲಾಗಿದ್ದು, ಇನ್ನೂ ಹೆಚ್ಚಿನ ಮುತುವರ್ಜಿ ವಹಿಸಿ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಈ ಸಾಲಿನಲ್ಲಿ ಒಟ್ಟು 21,683 ವಿದ್ಯಾರ್ಥಿಗಳು ಒಟ್ಟು 93 (79+14) ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳವರೆಗೆ ಬರಲು ಸಮರ್ಪಕ ಸಾರಿಗೆ ವ್ಯವಸ್ಥೆ ಮಾಡಬೇಕು. ಯಾವುದೇ ಒಂದು ಮಗು ಕೂಡ ಸಾರಿಗೆಯಿಂದ ವಂಚಿತರಾಗದಂತೆ ಅಧಿಕಾರಿಗಳು ಕಾಳಜಿ ವಹಿಸಬೇಕು. ವಿಶೇಷ ಸಂದರ್ಭವಾಗಿರುವ ಹಿನ್ನೆಲೆ ಕೆಎಎಸ್ಸಾರ್ಟಿಸಿಯವರು ವಿಶೇಷವಾಗಿ ಮಕ್ಕಳನ್ನು ಪರೀಕ್ಷೆಗಳಿಗೆ ತೆರಳಲು ಕಳಕಳಿಯಿಂದ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ಪ್ರತಿ ಪರೀಕ್ಷೆಗೂ ಮುನ್ನ ಒಟ್ಟು 7 ಬಾರಿ ಪ್ರತಿ ಕೊಠಡಿಗಳನ್ನು ಡಿಸ್‌ಇನ್‌ಫೆಕ್ಷನ್ ಮಾಡಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ತಲಾ ಇಬ್ಬರು ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರನ್ನು (ಅಗತ್ಯ ಔಷಧಗಳೆ ೂಂದಿಗೆ)ನಿಯೋಜಿಸಲಾಗುವುದು. ಸ್ಕೌಟರ್ ಮತ್ತು ಗೈಡರ್, ರೇಂಜರ್ ಮತ್ತು ರೋವರ್, ಕಬ್ ಮಾಸ್ಟರ್ ಮತ್ತು ಫ್ಲೋಕ್ ಲೀಡರ್ ಗಳು ಸ್ವಯಂಸೇವಕರಾಗುವರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಒಟ್ಟು 22 ಸಾವಿರ ಮಾಸ್ಕ್ಗಳನ್ನು ನೀಡಲಾಗುತ್ತಿದೆ. ಎಲ್ಲಾ ತಹಶೀಲ್ದಾರರು ತಲಾ 5 ಸಾವಿರ ಮಾಸ್ಕ್ಗಳನ್ನು ನೀಡಬೇಕು. ತಾಲೂಕುಗಳಲ್ಲಿ ವಿವಿಧ ಸಂಘ-ಸಂಸ್ಥೆಗಳು ಮಾಸ್ಕ್ ವಿತರಣೆ ಮಾಡಲು ಮುಂದೆ ಬಂದಿವೆ ಎಂದು ತಿಳಿಸಿದರು.
ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಕಾಲ್ನಡಿಗೆಯಲ್ಲಿ 6174 ವಿದ್ಯಾರ್ಥಿಗಳು, ಪೋಷಕರ ಸಹಾಯದಿಂದ 12,581, ಕೆಎಸ್ಸಾರ್ಟಿಸಿ ಬಸ್ ಮೂಲಕ 229, ಖಾಸಗಿ ಶಾಲಾ ವಾಹನಗಳ ವ್ಯವಸ್ಥೆ ಮೂಲಕ 1,690, ಹಾಸ್ಟೆಲ್‌ನಲ್ಲಿ ತಂಗಿ ಪರೀಕ್ಷೆ ಬರೆಯುವವರು 674, ವ್ಯಾಸಂಗ ಮಾಡುತ್ತಿರುವ ಶಾಲಾ ವಾಹನಗಳಲ್ಲಿ 335 ಸೇರಿದಂತೆ ಒಟ್ಟು 21,683 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ನಿಯಮದಂತೆ ಎಲ್ಲ 93 ಪರೀûಾ ಕೇಂದ್ರಗಳಲ್ಲಿ ಅಡ್ಡ ಮತ್ತು ಉದ್ದವಾಗಿ ಮೂರು ಅಡಿ ಅಂತರದಲ್ಲಿ ಡೆಸ್ಕ್ ವ್ಯವಸ್ಥೆ ಮಾಡಲಾಗಿದೆ. ಒಂದು ಡೆಸ್ಕ್ನಲ್ಲಿ ಇಬ್ಬರು ವಿದ್ಯಾರ್ಥಿಗಳು ಕೂರುತ್ತಾರೆ. ಮೂಲ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ. ಮಂಡಳಿಯಿಂದ 200 ಮಕ್ಕಳಿಗೆ ಒಂದರಂತೆ ಥರ್ಮಲ್ ಸೀRÅನರ್‌ಗಳನ್ನು ನೀಡಿದ್ದು, 14 ಹೆಚ್ಚುವರಿ ಕೇಂದ್ರಗಳಿಗೆ ಅವಶ್ಯಕತೆ ಇದೆ. ದಾವಣಗೆರೆಯಲ್ಲಿ ಕಂಟೈನ್‌ಮೆಂಟ್ ಝೋನ್‌ನಿಂದ 90 ವಿದ್ಯಾರ್ಥಿಗಳು ಇದ್ದಾರೆಂದು ಗುರುತಿಸಲಾಗಿದೆ. ಅವರಿಗೆ ಎನ್-95 ಮಾಸ್ಕ್ ನೀಡಬೇಕಿದೆ. ಒಟ್ಟು 1,300 ಕೊಠಡಿ ಇದ್ದು ಪ್ರತಿ ಕೊಠಡಿಗೆ ಒಂದು ಸ್ಯಾನಿಟೈಸರ್ ನೀಡಬೇಕು ಎಂದು ಮನವಿ ಮಾಡಿದರು .ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು, ಇತ್ತೀಚೆಗೆ ಕೆಲವು ಕಂಟೈನ್‌ಮೆಂಟ್ ಝೋನ್ ಗಳನ್ನು ಡಿನೋಟಿಫೈ ಮಾಡಲಾಗಿದೆ. ಹಾಗಾಗಿ ಪಟ್ಟಿಯನ್ನು ಪರಿಷ್ಕರಿಸುವಂತೆ ತಿಳಿಸಿದರು.
ಸುಳ್ಳು ಸುದ್ದಿ ಹಬ್ಬಿಸಿದ್ರೆ ಕ್ರಮ ಎಸ್ಸೆಸ್ಸೆಲ್ಸಿ ಮಂಡಳಿಯಿಂದ ಈಗಾಗಲೇ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಅರ್ಧ ಲೀಟರ್ ಸ್ಯಾನಿಟೈಸರ್ ಬಾಟಲಿ ಸರಬರಾಜು ಮಾಡಲಾಗಿದೆ. ಎಸ್‌ಓಪಿ ಪ್ರಕಾರ ಎಲ್ಲಾ ಪರೀಕ್ಷಾ ಕೇಂದ್ರಗಳ ಸಾಮಾನ್ಯ, ವಿಶೇಷ ಕೊಠಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಆಸನ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ನಿಷೇಧವಿದ್ದು, ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿ ಜೆರಾಕ್ಸ್, ಸೈಬರ್ ಕೆಫೆ ಮುಚ್ಚಿಸಲು ಕ್ರಮ ವಹಿಸಲಾಗುವುದು. ಹಾಗೂ ವಾಟ್ಸ್ ಆ್ಯಪ್ ಇತರೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಸಿದ್ದಗಂಗಾ ಶ್ರೀ ರಾಷ್ಟ್ರಸಂತನೆಂದು ಘೋಷಿಸಿ: ಕೂಡಲಸಂಗಮ ಶ್ರೀ
Davanagere: ಮೀಸಲಾತಿಗಾಗಿ ಇನ್ನು ಮುಂದೆ ಈ ಸರ್ಕಾರದ ಮುಂದೆ ಹೋಗುವುದಿಲ್ಲ: ಪಂಚಮಸಾಲಿ ಶ್ರೀ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್
Davanagere: ಮಹಾನಗರ ಪಾಲಿಕೆ ವ್ಯಾಪ್ತಿಯ ಅನಧಿಕೃತ ಹೋರ್ಡಿಂಗ್ ತೆರವು