ಅಪಪ್ರಚಾರಕ್ಕೆ ಕಿವಿಗೊಡದಿರಿ


Team Udayavani, May 18, 2020, 8:33 AM IST

mayor kolar

ದಾವಣಗೆರೆ: ಕೋವಿಡ್‌ 19 ವೈರಸ್‌ನಂತಹ ಮಹಾಮಾರಿ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ದಾವಣಗೆರೆಯಲ್ಲಿ ಶಾಂತಿ, ಸೌಹಾರ್ದತೆ ಕದಡುವ ಕೆಲಸ ಮಾಡುತ್ತಿದ್ದಾರೆ. ಹಿಂದೂ, ಮುಸ್ಲಿಂ ಬಾಂಧವರು ಯಾವುದೇ  ರೀತಿಯ ಅಪಪ್ರಚಾರಕ್ಕೆ ಕಿವಿಗೊಡದೆ ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಜೀವನ ನಡೆಸೋಣ ಎಂದು ಮೇಯರ್‌ ಬಿ.ಜಿ. ಅಜಯ್‌ಕುಮಾರ್‌ ಮನವಿ ಮಾಡಿದ್ದಾರೆ.

ನಾವು ಈಗ ಕೋವಿಡ್‌ 19 ಮುಕ್ತ ದಾವಣಗೆರೆ ಮಾಡಬೇಕು.  ಯಾರೋ ಕೆಲವರು ಮಾಡುವಂತಹ ಸಮಾಜಘಾತುಕ ವಿಷಯಕ್ಕೆ ಸಂಬಂಧಿಸಿದಂತೆ ಹಿಂದೂ, ಮುಸ್ಲಿಂ ಬಾಂಧವರು ಒಂದೊಂದು ರೀತಿಯ ಹೇಳಿಕೆ ನೀಡುವುದನ್ನು ಬಿಟ್ಟು  ವಣಗೆರೆಯಲ್ಲಿ ಎಲ್ಲರೂ ಒಂದಾಗಿ ಜೀವನವನ್ನು ಸಾಗಿಸೋಣ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಕೈ ಮುಗಿದು ಪ್ರಾರ್ಥಿಸಿದರು. 1992ರ ನಂತರ ದಾವಣಗೆರೆಯಲ್ಲಿ ಹಿಂದೂ, ಮುಸ್ಲಿಂ ಸಮಾಜ ಬಾಂಧವರು ಅಣ್ಣ-ತಮ್ಮಂದಿರಂತೆ ವ್ಯಾಪಾರ ವಹಿವಾಟು ಮಾಡುತ್ತಾ ಜೀವನ ನಡೆಸುತ್ತಿದ್ದಾರೆ.

ಇಂತಹ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕೋಮುವಾದ ಉತ್ತೇಜಿಸುವ, ಶಾಂತಿ- ಸೌಹಾರ್ದತೆ ಕದಡುವ ಕೆಲಸ ಮಾಡುತ್ತಿದ್ದಾರೆ. ಪೊಲೀಸ್‌ ಇಲಾಖೆ ಅಂತಹವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ನಗರಪಾಲಿಕೆ ಸದಸ್ಯ ಕೆ. ಚಮನ್‌ಸಾಬ್‌ ಮಾತನಾಡಿ, ಕಣ್ಣಿಗೆ ಕಾಣದಂತಹ ಕೋವಿಡ್‌ 19 ವೈರಸ್‌ ಇಡೀ ಮನುಕುಲದ ಅಸ್ತಿತ್ವವನ್ನೇ ಅಲುಗಾಡಿಸುತ್ತಿರುವ ಸಂದರ್ಭದಲ್ಲಿ ಶಾಂತಿ, ಸೌಹಾರ್ದತೆ  ಕದಡುವ ಮಾತು, ಕೆಲಸವನ್ನು ಯಾರೂ ಒಪ್ಪುವುದಿಲ್ಲ.

ಕೋವಿಡ್‌ 19 ಹಿನ್ನೆಲೆಯಲ್ಲಿ ಅದೂಟಛಿರಿಯಾಗಿ ಅಲ್ಲದೆ ಬಹಳ ಸರಳವಾಗಿ ರಂಜಾನ್‌ ಆಚರಿಸೋಣ. ಯಾರೂ ಸಹ ಹೊಸ ಬಟ್ಟೆ ಖರೀದಿ ಮಾಡಬಾರದು. ಹಬ್ಬಕ್ಕಾಗಿ ಖರ್ಚು ಮಾಡುವಂತಹ ಹೆಚ್ಚಿನ ಹಣವನ್ನ ಬಡ ಬಗ್ಗರಿಗೆ ನೀಡೋಣ ಎಂದು ಕರೆ ನೀಡಲಾಗಿತ್ತೇ ಹೊರತು ಇಂತಹವರ ಅಂಗಡಿಯಲ್ಲಿ ಬಟ್ಟೆ ಖರೀದಿಸಬೇಡಿ…ಎಂದು ಯಾರೂ ಹೇಳಿಲ್ಲ. ಕೆಲ ಯುವಕರ ಹೇಳಿಕೆ ಮತ್ತು  ವರ್ತನೆಗೂ, ಸಮಾಜಕ್ಕೂ ಯಾವುದೇ ಸಂಬಂಧ ಇಲ್ಲ.

ಯಾರೋ ಕಿಡಿಗೇಡಿಗಳು ಕೋಮು ಸೌಹಾರ್ದತೆ ಕದಡುವ ಮಾತುಗಳನ್ನಾಡಿದ ಮಾತ್ರಕ್ಕೆ ನಾಯಕರಾಗಲಿಕ್ಕೆ ಸಾಧ್ಯವೇ ಇಲ್ಲ. ಯಶ ಕಾಣುವುದೂ ಇಲ್ಲ. ದಾವಣಗೆರೆಯಲ್ಲಿ  ಹಿಂದೂ- ಮುಸ್ಲಿಂ ಬಾಂಧವರು ಸಹೋದರರಂತೆ ಬಾಳ್ಳೋಣ ಎಂದು ಕೋರಿದರು. ಮಹಾನಗರ ಪಾಲಿಕೆ ಸದಸ್ಯ ಸಯೀದ್‌ ಚಾರ್ಲಿ, ಮುಸ್ಲಿಂ ಸಮಾಜದ ಮುಖಂಡ ಜೆ. ಅಮಾನುಲ್ಲಾ ಖಾನ್‌, ಶಾಂತಿ, ಸೌಹಾರ್ದತೆ ಕಾಪಾಡಬೇಕು  ಎಂದು ಮನವಿ ಮಾಡಿದರು.

ಸಂಸದೆ ಶೋಭಾ ಟ್ವೀಟ್‌: ದಾವಣಗೆರೆಯ ಪ್ರತಿಷ್ಠಿತ ಜವಳಿ ಅಂಗಡಿಯೊಂದರ ಮುಂದೆ ನಡೆ ದಿದೆ ಎನ್ನಲಾದ ಘಟನೆಯೊಂದು ಸಾಮಾಜಿಕ ಜಾಲತಾಣ ದಲ್ಲಿ ವೈರಲ್‌ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು  -ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.