ಕ್ವಾರಂಟೈನ್‌ಗೆ ಜನರ ವಿರೋಧ; ಅಧಿಕಾರಿಗಳಿಗೆ ಪೇಚಾಟ

Team Udayavani, May 11, 2020, 11:28 AM IST

11-May-03

ಸಾಂದರ್ಭಿಕ ಚಿತ್ರ

ಹರಿಹರ: ಹೈರಿಸ್ಕ್ ಪ್ರದೇಶದಿಂದ ಆಗಮಿಸಿದ್ದ ನಾಲ್ವರನ್ನು ಕ್ವಾರಂಟೈನ್‌ನಲ್ಲಿಡಲು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರಿಂದ ಪರ್ಯಾಯ ಸ್ಥಳ ಹುಡುಕಲು ಅಧಿಕಾರಿಗಳು ಹರಸಾಹಸಪಟ್ಟ ಘಟನೆ ನಗರದಲ್ಲಿ ಭಾನುವಾರ ನಡೆಯಿತು.

ಗುಜರಾತ್‌ನಲ್ಲಿದ್ದ ಇಲ್ಲಿನ ಇಂದಿರಾನಗರದ ನಿವಾಸಿಗಳಾದ ಪತಿ, ಪತ್ನಿ ಹಾಗೂ ಮಗ ಶನಿವಾರ ವಾಪಸ್‌ ಬಂದಿದ್ದರು. ಇದೇ ರೀತಿ ಮತ್ತೊಬ್ಬ ವ್ಯಕ್ತಿ ಸಹ ಮಹಾರಾಷ್ಟ್ರದಿಂದ ನಗರಕ್ಕೆ ಆಗಮಿಸಿದ್ದರು. ಗುಜರಾತ್‌ ಹಾಗೂ ಮಹಾರಾಷ್ಟ್ರ ರಾಜ್ಯಗಳನ್ನು ಕೋವಿಡ್‌ನ‌ ಹೈರಿಸ್ಕ್ ಪ್ರದೇಶವೆಂದು ಗುರುತಿಸಲಾಗಿದೆ. ಹಾಗಾಗಿ ಅಧಿಕಾರಿಗಳು ಭಾನುವಾರ ಬೆಳಿಗ್ಗೆ ಈ ನಾಲ್ವರನ್ನು ನಿಯಮಾವಳಿಯಂತೆ ಸಾಂಸ್ಥಿಕ ನಿಗಾವಣೆಯಲ್ಲಿಡಲು ನಗರ ಹೊರವಲಯದ ಗುತ್ತೂರು ಗ್ರಾಮದ ಸರ್ಕಾರಿ ಹಾಸ್ಟೆಲ್‌ ನಲ್ಲಿಡಲು ಕರೆದೊಯ್ದರು.

ಅಷ್ಟರಲ್ಲಿ ಸುದ್ದಿ ತಿಳಿದು ಸ್ಥಳದಲ್ಲಿ ಜಮಾಯಿಸಿದ್ದ ಗುತ್ತೂರು ಗ್ರಾಮಸ್ಥರು, ಶಂಕಿತರನ್ನು ಇಲ್ಲಿಡುವುದು ಬೇಡ ಎಂದು ವಿರೋಧ ವ್ಯಕ್ತಪಡಿಸಿದರು. ಮಾಜಿ ಶಾಸಕ ಬಿ.ಪಿ. ಹರೀಶ್‌ ಹಾಗೂ ಶಾಸಕ ಎಸ್‌. ರಾಮಪ್ಪ ಜನರ ಮನವೊಲಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಮುಂಜಾಗ್ರತಾ ಕ್ರಮವಾಗಿ ಡಿಆರ್‌ಆರ್‌ ತುಕಡಿಯನ್ನು ಸ್ಥಳಕ್ಕೆ ಕರೆಸಲಾಗಿತ್ತು. ನಂತರ ಅಧಿಕಾರಿಗಳ ತಂಡ ಕೊಂಡಜ್ಜಿ ಗ್ರಾಮದ ಸರ್ಕಾರಿ ಹಾಸ್ಟೆಲ್‌ನತ್ತ ಹೆಜ್ಜೆ ಹಾಕಿತು. ಆದರೆ ಗ್ರಾಮದ ದ್ವಾರಬಾಗಿಲಿಗೆ ಬೈಕ್‌ಗಳನ್ನು ಅಡ್ಡವಾಗಿಟ್ಟ ಗ್ರಾಮಸ್ಥರು, ಗ್ರಾಮದೊಳಗೆ ಕಾಲಿಡುವಂತಿಲ್ಲ ಎಂದು ತಾಕೀತು ಮಾಡಿದರು. ಕೊನೆಗೆ ಅಧಿಕಾರಿಗಳು ಈ ನಾಲ್ವರನ್ನು ನಗರದ ಲಾಡ್ಜೊಂದರಲ್ಲಿ ಕ್ವಾರಂಟೈನ್‌ನಲ್ಲಿ ಇಡಬೇಕಾಯಿತು.

ಅನ್ಯ ರಾಜ್ಯಗಳಿಂದ ಬಂದಿರುವ ನಾಲ್ವರು ಕೋವಿಡ್‌ ಅಧಿಕವಾಗಿ ಬಾಧಿಸುತ್ತಿರುವ ಪ್ರದೇಶದಿಂದ ಬಂದವರೆಂಬ ಕಾರಣಕ್ಕೆ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ. ಗುತ್ತೂರು ಹಾಸ್ಟೆಲ್‌ ಅನ್ನು ತಾಲೂಕಿನ ನಿಗಾವಣೆ ಕೇಂದ್ರವಾಗಿ ಘೋಷಿಸಲಾಗಿದೆ. ಜನರು ವದಂತಿಗಳನ್ನು ನಂಬಿ ಕ್ವಾರಂಟೈನ್‌ಗೆ ವಿರೋಧಿಸುತ್ತಿರುವುದು ವಿಪರ್ಯಾಸ ಎಂದು ತಾಲೂಕು ವೈದ್ಯಾಧಿಕಾರಿ ಡಾ| ಚಂದ್ರಮೋಹನ್‌ ಬೇಸರ ವ್ಯಕ್ತಪಡಿಸಿದರು. ತಹಶೀಲ್ದಾರ್‌ ಕೆ.ಬಿ. ರಾಮಚಂದ್ರಪ್ಪ, ಸಿಪಿಐ ಶಿವಪ್ರಸಾದ್‌, ಪಿಎಸ್‌ಐ ರವಿಕುಮಾರ್‌ ಇತರರು ಇದ್ದರು.

ಟಾಪ್ ನ್ಯೂಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.