ರೈತರಿಗೆ ತೊಗರಿ ಬೀಜ ವಿತರಣೆ
Team Udayavani, Jun 5, 2020, 11:27 AM IST
ಹೊಸದುರ್ಗ: ಶಾಸಕ ಗೂಳಿಹಟ್ಟಿ ಡಿ.ಶೇಖರ್ ಅವರು ರೈತರಿಗೆ ಮೆಕ್ಕೆಜೋಳ ಬೀಜ ವಿತರಿಸಿದರು.
ಹೊಸದುರ್ಗ: ರೈತರು ಉತ್ತಮ ತಳಿಯ ಬಿತ್ತನೆ ಬೀಜ ಖರೀದಿಸಿ ಅಧಿಕ ಇಳುವರಿಗಾಗಿ ಕಾಲ ಕಾಲಕ್ಕೆ ಕೃಷಿ ಇಲಾಖೆ ಅಧಿಕಾರಿಗಳಿಂದ ತಾಂತ್ರಿಕ ಸಲಹೆ ಪಡೆದುಕೊಳ್ಳಬೇಕು ಎಂದು ಶಾಸಕ ಗೂಳಿಹಟ್ಟಿ ಡಿ.ಶೇಖರ್ ಹೇಳಿದರು.
ಪಟ್ಟಣದ ಕೃಷಿ ಇಲಾಖೆ ವತಿಯಿಂದ ಮುಸುಕಿನ ಜೋಳ ಮತ್ತು ತೊಗರಿ ಬೀಜ ರೈತರಿಗೆ ವಿತರಿಸಿ ಅವರು ಮಾತನಾಡಿದರು. ಬಿತ್ತನೆ ಪೂರ್ವದಲ್ಲಿ ಬೀಜೋಪಚಾರಮ ಲಘು ಪೋಷಕಾಂಶಗಳ ಸಮರ್ಥ ಬಳಕೆಯಿಂದ ಅಧಿಕ ಇಳುವರಿ ಪಡೆಯಬಹುದು. ಈ ನಿಟ್ಟಿನಲ್ಲಿ ರೈತರು ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳಿಂದ ಮಾಹಿತಿ ಪಡೆದು ಯಶಸ್ಸು ಸಾಧಿಸುವಂತೆ ರೈತರಿಗೆ ತಿಳಿಸಿದರು.
ರೈತರು ಜಮೀನುಗಳಲ್ಲಿ ಏಕಬೆಳೆ ಪದ್ದತಿಯ ಬದಲಾಗಿ ಬಹುಬೆಳೆ ಪದ್ಧತಿ ಅನುಸರಿಸಬೇಕು. ಮುಸುಕಿನ ಜೋಳದಲ್ಲಿ ಅಕ್ಕಡಿ ಬೆಳೆಯಾಗಿ ತೊಗರಿ ಹಾಕಬೇಕು. ಬಹುಬೆಳೆ ಪದ್ದತಿಯಿಂದ ಒಂದು ಬೆಳೆ ನಷ್ಟವಾದರೂ ಮತ್ತೊಂದು ಬೆಳೆಯಿಂದ ಲಾಭ ಪಡೆಯಬಹುದಾಗಿದೆಎಂದರು. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಿ.ಎಸ್.ಈಶ ಮಾತನಾಡಿದರು. ತಾಂತ್ರಿಕ ಅಧಿಕಾರಿ ವೆಂಕಟೇಶ್, ಮುಖಂಡರಾದ ಶೀತಲ್ ಕುಮಾರ್ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.