ತಾಲೂಕಾಡಳಿತಕ್ಕೆ ತಲೆನೋವಾದ ಕ್ವಾರಂಟೈನ್
Team Udayavani, May 13, 2020, 11:35 AM IST
ಸಾಂದರ್ಭಿಕ ಚಿತ್ರ
ಹೊಸದುರ್ಗ: ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಬಂದಿರುವ ವಲಸಿಗರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡುವುದು ತಾಲೂಕು ಆಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.
ತಾಲೂಕಿನ ಯಾವುದೇ ಗ್ರಾಮಕ್ಕೆ ಹೋದರೂ ಇಲ್ಲಿ ಕ್ವಾರಂಟೈನ್ ಮಾಡಬೇಡಿ, ನಮ್ಮ ಗ್ರಾಮ ಸೋಂಕಿನಿಂದ ಮುಕ್ತವಾಗಿದೆ, ಎಲ್ಲಿಂದಲೋ ಬಂದವರಿಂದ ನಮ್ಮ ಗ್ರಾಮದ ಜನರು ರೋಗ ಬಾಧಿತರಾಗುತ್ತಾರೆ ಎಂದು ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸೋಮವಾರ ರಾತ್ರಿ ಕೇರಳದ ಕಾಸರಗೋಡಿನಿಂದ ಶ್ರೀರಾಂಪುರ ಹೋಬಳಿಯ ಸುಮಾರು 21ಜನ ವಲಸಿಗರು ರಾಜ್ಯ ಸರ್ಕಾರಗಳ ಅನುಮತಿ ಮೇರೆಗೆ ತಮ್ಮ ಗ್ರಾಮಗಳಿಗೆ ಬಂದಿದ್ದಾರೆ.
ಈ ರೀತಿ ಹೊರ ರಾಜ್ಯಗಳಿಂದ ಬಂದಂತಹ ವಲಸಿಗರನ್ನು ಕಡ್ಡಾಯವಾಗಿ 14 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಮಾಡುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಅದರಂತೆ ಅವರನ್ನೆಲ್ಲಾ ಗ್ರಾಮಕ್ಕೆ ಸಮೀಪವಿರುವ ತಂಡಗ ಗ್ರಾಮದ ಹೊರವಲಯದಲ್ಲಿರುವ ಬಿಸಿಎಂ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡಲು ನಿರ್ಧರಿಸಲಾಯಿತು. ತಡರಾತ್ರಿ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರು ಎರಡು ಅಂಬ್ಯುಲೆನ್ಸ್‌ಗಳಲ್ಲಿ 21 ಜನ ವಲಸಿಗರನ್ನು ಕರೆದೊಯ್ದಿದ್ದಾರೆ. ವಿಷಯ ತಿಳಿದ ಸ್ಥಳೀಯರು ರಾತ್ರಿ ವೇಳೆ ಕ್ವಾರಂಟೈನ್ ಮಾಡಲು ಅವಕಾಶ ನೀಡದೆ ಪ್ರತಿರೋಧ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳು ಎಷ್ಟೇ ಮನವಿ ಮಾಡಿಕೊಂಡರೂ ಒಪ್ಪದ ಕಾರಣ ಅಲ್ಲಿಂದ ಅವರನ್ನು ಗ್ರಾಮದ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಯಿತು. ಮಂಗಳವಾರ ಮಧ್ಯಾಹ್ನ 21 ಜನ ವಲಸಿಗರನ್ನು ಮತ್ತೋಡು ಹೋಬಳಿಯ ಸಿದ್ದಾಪುರ ಗೇಟ್ ಬಳಿ ಇರುವ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲು ಕರೆದೊಯ್ಯಲಾಯಿತು. ಅಲ್ಲಿನ ಜನರೂ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಎಲ್ಲಾ ಕಡೆ ವಿರೋಧ ವ್ಯಕ್ತವಾಗುತ್ತಿರುವುದನ್ನು ಗಮನಿಸಿದ ತಹಶೀಲ್ದಾರ್ ತಿಪ್ಪೇಸ್ವಾಮಿ, ಪೊಲೀಸ್ ಬಂದೋಬಸ್ತ್ನಲ್ಲಿ ವಲಸಿಗರನ್ನು ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್ ಡಿನ್ನರ್‌ಗೆ ಹೈ ಕಮಾಂಡ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.