ಜಿಲ್ಲೆಯಲ್ಲೇ ಅತಿ ಹೆಚ್ಚು ಭತ್ತ ಖರೀದಿ
Team Udayavani, Jun 19, 2020, 1:09 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸನಗರ: ಕೋವಿಡ್ ಆತಂಕದ ನಡುವೆಯೂ ಬೆಂಬಲ ಬೆಲೆಯಲ್ಲಿ ಅತಿ ಹೆಚ್ಚು ಭತ್ತ ಖರೀದಿ ಮಾಡುವ ಮೂಲಕ ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಾಧನೆ ಮಾಡಿದೆ ಎಂದು ಎಪಿಎಂಸಿ ಅಧ್ಯಕ್ಷ ಈಶ್ವರಪ್ಪ ಗೌಡ ಹೇಳಿದರು.
ಹೋಬಳಿ ಕೇಂದ್ರ ನಗರದಲ್ಲಿ ರೂ.75 ಲಕ್ಷ ವೆಚ್ಚದಲ್ಲಿ ನಿರ್ಮಾಣ ವಾಗುತ್ತಿರುವ ಸಂತೆ ಮಾರುಕಟ್ಟೆ ಕಾಮಗಾರಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಹೊಸನಗರ ಎಪಿಎಂಸಿ ವತಿಯಿಂದ 7500 ಕ್ವಿಂಟಲ್ ಭತ್ತವನ್ನು 1850 ಬೆಂಬಲ ಬೆಲೆ ನೀಡಿ ಖರೀದಿಸಲಾಗಿದೆ. ರೂ.75 ಲಕ್ಷ ವೆಚ್ಚದಲ್ಲಿ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಸರ್ಕಾರದಿಂದ ಬಂದಿದ್ದು ಅಂದಾಜು 17 ಲಕ್ಷ ಮಾತ್ರ. ಉಳಿದ ಹಣವನ್ನು ಎಪಿಎಂಸಿಯೇ ಭರಿಸಿದೆ. ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ಎಪಿಎಂಸಿಯ ನಗರ ಭಾಗದ ನಿರ್ದೇಶಕ ಎಚ್.ಜಿ. ರಮಾಕಾಂತ್ ಮಾತನಾಡಿ, ನಗರ ಸಂತೆ ಮಾರುಕಟ್ಟೆ ಅಭಿವೃದ್ಧಿ ನಮ್ಮ ಕನಸಾಗಿತ್ತು. ಇದಕ್ಕೆ ಹಿಂದಿನ ಅಧ್ಯಕ್ಷ ಬಂಡಿ ರಾಮಚಂದ್ರ, ಹಾಲಿ ಅಧ್ಯಕ್ಷ ಈಶ್ವರಪ್ಪ ಗೌಡ, ಉಪಾಧ್ಯಕ್ಷರು ಮತ್ತು ಎಲ್ಲಾ ನಿರ್ದೇಶಕರು ಸಹಕಾರ ಕೊಟ್ಟ ಹಿನ್ನೆಲೆಯಲ್ಲಿ ಮಾರುಕಟ್ಟೆ ಅಭಿವೃದ್ಧಿಗೆ ಕಾರಣವಾಗಿದೆ. ಇದು ಎಪಿಎಂಸಿಯ ಸಾಧನೆ ಎಂದರು. ಉಪಾಧ್ಯಕ್ಷ ಕುನ್ನೂರು ಮಂಜಪ್ಪ, ನಿರ್ದೇಶಕರಾದ ದುಮ್ಮ ಅಶೋಕಗೌಡ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.