ಕೋವಿಡ್ ವಾರಿಯರ್ಸ್ ಸೇವೆ ಸ್ಮರಣೀಯ
Team Udayavani, Jun 20, 2020, 11:43 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಜಗಳೂರು: ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಕೋವಿಡ್ ವಾರಿಯರ್ ಹಗಲಿರುಳು ಶ್ರಮಿಸಿದ್ದರಿಂದ ಜಿಲ್ಲೆಯಲ್ಲಿ ಕೋವಿಡ್ ವೈರಸ್ ಹಾವಳಿಯನ್ನು ಯಶಸ್ವಿಯಾಗಿ ನಿಯಂತ್ರಿಸಲು ಸಾಧ್ಯವಾಗಿದೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು.
ಪಟ್ಟಣದ ತರಳಬಾಳು ಕೇಂದ್ರದಲ್ಲಿ ಎಸ್.ವಿ.ಆರ್ ಅಭಿಮಾನಿ ಬಳಗ ಹಾಗೂ ಬಿಜೆಪಿ ವತಿಯಿಂದ ಜಿಲ್ಲಾ ಮಟ್ಟದ ಕೋವಿಡ್ ವಾರಿಯರ್ಗೆ ಹಮ್ಮಿಕೊಂಡಿದ್ದ ಅಭಿನಂದನೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್ ಇನ್ನೂ ಹೋಗಿಲ್ಲ. ಸಾರ್ವಜನಿಕರು ಇದನ್ನು ಅರ್ಥ ಮಾಡಿಕೊಂಡು ವೃದ್ಧರು ಮತ್ತು ಚಿಕ್ಕಮಕ್ಕಳನ್ನು ಜಾಗರೂಕವಾಗಿ ನೋಡಿಕೊಳ್ಳಬೇಕೆಂದರು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಹಕಾರದಿಂದ ಕೊರೊನಾ ವಿರುದ್ಧ ಹೋರಾಡಲು ಸಾಧ್ಯವಾಗಿದೆ. ಜಿಲ್ಲೆಯಲ್ಲಿ 23 ಪ್ರಕರಣಗಳು ಕಂಡುಬಂದ ಸಂದರ್ಭದಲ್ಲಿ ಆಕಾಶವೇ ತಲೆ ಮೇಲೆ ಬಿದ್ದಂತಾಗಿತ್ತು. ಅ ಸಂದರ್ಭದಲ್ಲಿ ಅಧಿಕಾರಿಗಳು ನನಗೆ ಧೆ„ರ್ಯ ತುಂಬಿದರು. ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ಮಾರ್ಗದರ್ಶನದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಕೂಡ ಉತ್ತಮಜವಾಗಿ ಕೆಲಸ ಮಾಡಿದ್ದಾರೆಂದು ಶ್ಲಾಘಿಸಿದರು.
ಎಸ್‌ಪಿ ಹನುಮಂತರಾಯ ಮಾತನಾಡಿ, ಕೋವಿಡ್ ವಿರುದ್ಧ ಹೋರಾಡಲು ಅಧಿಕಾರಿಗಳ ಜೊತೆಗೆ ಸಾರ್ವಜನಿಕರ ಸಹಕಾರವೂ ಮುಖ್ಯ. ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ಬಳಕೆ ಮಾಡಿ ಸುರಕ್ಷತಾ ಕ್ರಮವನ್ನು ಪಾಲಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕರ ಪತ್ನಿ ಇಂದಿರಾ, ದೂಡಾ ಆಯುಕ್ತ ಕುಮಾರಸ್ವಾಮಿ, ಉಪವಿಭಾಗಾಧಿಕಾರಿಗಳಾದ ಮಮತಾ ಹೊಸಗೌಡರ್, ಹುಲ್ಲುಮನಿ ತಿಮ್ಮಣ್ಣ, ಪಿ.ಡಿ. ನಜ್ಮಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ|ರಾಘವೇಂದ್ರ ಸ್ವಾಮಿ, ತಹಶೀಲ್ದಾರ್ ಗಿರೀಶ್‌ಬಾಬು, ತಾಪಂ ಇಒ ಮಲ್ಲಾ ನಾಯ್ಕ, ಸಿಪಿಐ ದುರುಗಪ್ಪ, ಪಪಂ ಮುಖ್ಯಾಧಿಕಾರಿ ರಾಜು ಬಣಕಾರ್, ಬಿಜೆಪಿ ಮಂಡಲ ಅಧ್ಯಕ್ಷ ಪಲ್ಲಾಗಟ್ಟೆ ಮಹೇಶ್, ಎಸ್ಟಿ ಕಚೇರಿಯ ಮಹೇಶ್ವರಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
MUST WATCH
ಹೊಸ ಸೇರ್ಪಡೆ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.