ಕೊಟ್ಟೂರೇಶ್ವರ ಕಾರ್ತಿಕೋತ್ಸವ
Team Udayavani, Dec 31, 2020, 4:04 PM IST
ಕೊಟ್ಟೂರು: ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿ ಕಾರ್ತಿಕೋತ್ಸವ ಸರಳವಾಗಿ ಆಚರಿಸಲಾಯಿತು. ಮಹಲ್ ಮಠದ ಕ್ರಿಯಾಮೂರ್ತಿಗಳಾದ ಶಂಕರಮೂರ್ತಿ ಸ್ವಾಮೀಜಿ ಹಾಗೂ ಕೊಟ್ಟೂರು ದೇವರು ಶಿವಪ್ರಕಾಶ ಸ್ವಾಮೀಜಿ ಕಾರ್ತಿಕೋತ್ಸವಕ್ಕೆ ಚಾಲನೆ ನೀಡಿದರು.
ನಂತರ ಭಕ್ತರು ದೇವಸ್ಥಾನದ ಆವರಣದಲ್ಲಿ ಮಣ್ಣಿನ ಹಣತೆ ಹಚ್ಚಿ ಭಕ್ತಿ ಸಮರ್ಪಿಸಿದರು. ಪಟ್ಟಣದ ಹಿರೇಮಠ, ಗಚ್ಚಿನಮಠ, ತೊಟ್ಟಿಲು ಮಠ, ಮೂರ್ಕಲ್ಲು ಮಠ, ಮರಿ ಕೊಟ್ರೇಶ್ವರ ದೇವಸ್ಥಾನಗಳಲ್ಲಿ ಶ್ರೀ ಸ್ವಾಮಿಯ ಪವಿತ್ರ ದೀಪಗಳು ಬೆಳಗಿದವು.
ಇದನ್ನೂ ಓದಿ:ಹೊಸ ವರ್ಷಾಚರಣೆ: ಶೇ.50ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ
ಭಕ್ತರು ದೇವಸ್ಥಾನದ ಮಠದ ಮುಂಭಾಗದಲ್ಲಿ ಕೊಬ್ಬರಿಯನ್ನು ಉರಿಸಿ ಭಕ್ತಿ ಸಮರ್ಪಿಸಿದರು. ದೇವಸ್ಥಾನದ ಪ್ರಧಾನ ಧರ್ಮಕರ್ತರಾದ ಸಿ.ಎಚ್. ಎಂ. ಗಂಗಾಧರ, ಕಾರ್ಯನಿರ್ವಾಹಕಮ ಅಧಿಕಾರಿ ಗಂಗಪ್ಪ, ಪ್ರಧಾನ ಅರ್ಚಕ ಸಿ.ಎಚ್.ಎಂ. ನಾಗರಾಜ ಊರಿನ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
MUST WATCH
ಹೊಸ ಸೇರ್ಪಡೆ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.