ಮೆಕ್ಕೆಜೋಳ ಬೆಳೆಗಾರರಿಗೆ 5 ಸಾವಿರ ರೂ. ಸಹಾಯಧನ
Team Udayavani, Jun 9, 2020, 3:22 PM IST
ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಧ್ಯಕ್ಷತೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು.
ದಾವಣಗೆರೆ: 2019-20ನೇ ಸಾಲಿನಲ್ಲಿ ಮೆಕ್ಕೆಜೋಳ ಬೆಳೆದು ಲಾಕ್‌ಡೌನ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ರೈತರಿಗೆ ನೇರ ನಗದು ವರ್ಗಾವಣೆಮೂಲಕ 5 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.
ಸೋಮವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೃಷಿ ಇಲಾಖೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಾಕ್‌ಡೌನ್‌ನಿಂದಾಗಿ ಮಕ್ಕೆಜೋಳ ಬೆಳೆ ಬೇಡಿಕೆ ಕಳೆದುಕೊಂಡಿತ್ತು. ರೈತರು ಸಂಕಷ್ಟಕ್ಕೆ ಒಳಗಾಗಿದ ಹಿನ್ನೆಲೆಯಲ್ಲಿ ಆರ್ಥಿಕ ನೆರವು ನೀಡುವುದು ಅವಶ್ಯಕವಾಗಿದೆ ಎಂದರು. ಯೋಜನೆಯ ಕುರಿತು ಜಿಲ್ಲಾ ಮಟ್ಟದಲ್ಲಿ ವ್ಯಾಪಕವಾಗಿ ಪ್ರಚಾರ ಕೈಗೊಳ್ಳಬೇಕು. ಯೋಜನೆ ಅನುಷ್ಠಾನದಲ್ಲಿ ಹೋಬಳಿ ಹಾಗೂ ತಾಲೂಕು ಮಟ್ಟದಲ್ಲಿ ನಿಗದಿತ ಸಮಯದೊಳಗೆ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಸಂಬಂಧಪಟ್ಟ ವಿವಿಧ ಇಲಾಖೆಗಳೊಂದಿಗೆ ಸಮನ್ವಯತೆಯೊಂದಿಗೆ ಹೋಬಳಿ ಮಟ್ಟದಲ್ಲಿ ಹೆಚ್ಚಿನ ತಂಡ ರಚಿಸುವ ಮೂಲಕ ಕ್ಷೇತ್ರ ತಪಾಸಣೆ ತ್ವರಿತವಾಗಿ ಕೈಗೊಳ್ಳುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಸೂಚಿಸಿದರು. ತಾಲೂಕುಗಳಿಂದ ಪರಿಹಾರ ನೀಡಲು ತಯಾರಿಸಿರುವ ರೈತರ ಪಟ್ಟಿಯನ್ನು ಪರಿಹಾರ ನೀಡುವ ಸಲುವಾಗಿ ಅನುಮೋದಿಸಬೇಕು. ಕಾಲಕಾಲಕ್ಕೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಿಗತ ಅವಧಿಯಲ್ಲಿ ಯೋಜನೆಯಡಿ ಆರ್ಥಿಕ ಹಾಗೂ ಭೌತಿಕ ಗುರಿ ಸಾಧಿಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದರು.
ರೈತರಿಗೆ ಅಲ್ಪಾವಧಿ ಆರ್ಥಿಕ ನೆರವು ನೀಡಲು ಇ-ಆಡಳಿತದಿಂದ 2019-20ನೇ ಸಾಲಿನಲ್ಲಿ ಮೆಕ್ಕೆಜೋಳ ಬೆಳೆದ ರೈತರಿಗೆ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ಈಗ ದಾಖಲಾಗಿರುವ ಬೆಳೆ
ವಿವರಗಳ ಆಧಾರದ ಮೇರೆಗೆ ಪಾವತಿಸಬೇಕು. ಜೊತೆಗೆ ಬೆಳೆ ಸಮೀಕ್ಷೆಯಲ್ಲಿ ಇರುವಂತೆ ಮಕ್ಕೆಜೋಳ ಬೆಳೆಗಾರರ ಪಟ್ಟಿಯನ್ನು ಗ್ರಾಮ ಪಂಚಾಯತಿ, ರೈತ ಸಂಪರ್ಕ ಕೆಂದ್ರ ಹಾಗೂ ತಾಲೂಕು ಕಚೇರಿ ನಾಪಫಲಕದಲ್ಲಿ ಪ್ರದರ್ಶಿಸಬೇಕು. ಬೆಳೆ ಸಮೀಕ್ಷೆಯಲ್ಲಿ ದಾಖಲಾಗದಿರುವ ರೈತರಿಂದ ಅರ್ಜಿ ಪಡೆದು ಹೋಬಳಿ ಮಟ್ಟದಲ್ಲಿ ಕೃಷಿ ಅಧಿಕಾರಿ, ಸಹಾಯಕ ಅಧಿಕಾರಿ ಹಾಗೂ
ಗ್ರಾಮಲೆಕ್ಕಿಗರನ್ನು ಒಳಗೊಂಡ ತಂಡವನ್ನು ರಚಿಸಿ ಪರಿಶೀಲಿಸಬೇಕು. ಸ್ಥಳೀಯವಾಗಿ ಪಂಚನಾಮೆ ಮಾಡಿಕೊಂಡು ಪರಿಹಾರ ವಿತರಿಸಲು ತಾಲೂಕು ಮಟ್ಟದ ಸಮಿತಿಗೆ ಶಿಫಾರಸು ಮಾಡಬೇಕು ಎಂದು ತಿಳಿಸಿದರು. ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್, ಡಾ| ಹಂಸವೇಣಿ ಇತರರು ಇದ್ದರು.
ರೈತರ ಸಂಕಷ್ಟಕ್ಕೆ ಸ್ಪಂದಿಸಿ
ಲಾಕ್‌ಡೌನ್ ವೇಳೆ ಅಧಿಕಾರಿಗಳು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು. ಈ ಬಾರಿ ಮಳೆ ಜಾಸ್ತಿ ಬರಬಹುದು. ಹಾಗಾಗಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು. ಕೊರೊನಾ
ಸಂದರ್ಭದಲ್ಲಿ ಕಾರ್ಯ ನಿರ್ವಹಿಸಿದಂತೆ ಪ್ರವಾಹ ಬಂದರೆ ಕೊರೊನಾ ಜೊತೆ ಜೊತೆಗೆ ಕೆಲಸ ಮಾಡಲು ಸನ್ನದ್ಧರಾಗಬೇಕು. ಯಾವುದೇ ರೀತಿಯ ಪ್ರಾಣ ಹಾನಿ, ಜೀವ
ಹಾನಿ ಆಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.