ಜಿಂದಾಲ್ ಕಾರ್ಮಿಕರಿಗೆ ಹೋಂ ಕ್ವಾರಂಟೈನ್: ಸ್ಥಳೀಯರಿಗೆ ಆತಂಕ
Team Udayavani, Jun 17, 2020, 10:52 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮೊಳಕಾಲ್ಮೂರು: ತಾಲೂಕಿನ ರಾಂಪುರ ಹಾಗೂ ಸಮೀಪದ ಇನ್ನಿತರ ಗ್ರಾಮಗಳಲ್ಲಿ ಕೋವಿಡ್ ಸೋಂಕಿತ ಜಿಂದಾಲ್ ಹಾಗೂ ಹೈದರಾಬಾದ್‌ನಿಂದ ಬಂದ 38ಕ್ಕೂ ಹೆಚ್ಚು ಕಾರ್ಮಿಕರನ್ನು ಹೋಂ ಕ್ವಾರಂಟೈನ್‌ನಲ್ಲಿಡಲಾಗಿದೆ. ಇದರಿಂದ ತಾಲೂಕಿನ ಜನತೆ ಆತಂಕಕ್ಕೀಡಾಗಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿರುವ ಜಿಂದಾಲ್ ಸ್ಟೀಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ತಾಲೂಕಿನ ನಾನಾ ಗ್ರಾಮಗಳಿಗೆ ಹಿಂದಿರುಗುತ್ತಿದ್ದಾರೆ. ಇದುವರೆಗೆ ತಾಲೂಕಿನಲ್ಲಿ ಯಾವೊಂದು ಕೋವಿಡ್ ಪ್ರಕರಣವೂ ದಾಖಲಾಗದೆ ಕೋವಿಡ್ ಮುಕ್ತ ತಾಲೂಕಾಗಿತ್ತು. ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಬಂದವರನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿಟ್ಟು ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿದಾಗ ಯಾವುದೇ ಪಾಸಿಟಿವ್ ಪ್ರಕರಣ ಕಂಡು ಬಂದಿಲ್ಲ. ಆದರೆ ತಾಲೂಕಿಗೆ ಹೊಂದಿಕೊಂಡಿರುವ ಬಳ್ಳಾರಿ ಜಿಲ್ಲೆಯ ಜಿಂದಾಲ್ ಕಂಪನಿ ಕಾರ್ಮಿಕರಿಗೆ ಕೋವಿಡ್ ಸೋಂಕು ಹರಡಿರುವುದು ಭೀತಿ ಮೂಡಿಸಿದೆ. ಹೈದರಾಬಾದ್‌ನಿಂದ 17, ಜಿಂದಾಲ್ ಕಂಪನಿಯ 21ಕ್ಕೂ ಕಾರ್ಮಿಕರು ರಾಂಪುರ ಭಾಗದ ಹಲವಾರು ಗ್ರಾಮಗಳಿಗೆ ಆಗಮಿಸಿದ್ದಾರೆ. ರಾಂಪುರ, ಕೆ.ಕೆ. ಪುರ, ಫಕ್ಕುರ್ತಿ, ಜೆ.ಬಿ. ಹಳ್ಳಿ, ಹನುಮಾಪುರ ಹಾಗೂ ಹೊಸೂರು ಗ್ರಾಮಗಳಿಗೆ ಬಂದವರನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಿ ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗಿದೆ.
ರಾಂಪುರ ಸಮುದಾಯ ಆರೋಗ್ಯ ಕೇಂದ್ರದ ಡಾ| ಮಧುಕುಮಾರ್, ಲ್ಯಾಬ್ ತಂತ್ರಜ್ಞೆ ಮಮತಾ, ಕಿರಿಯ ಆರೋಗ್ಯ ಮಹಿಳಾ ಸಹಾಯಕಿಯರಾದ ಪಂಕಜಾ, ನಾಗರತ್ನಮ್ಮ, ಆಶಾ ಕಾರ್ಯಕರ್ತೆಯರಾದ ನಿಂಗಮ್ಮ ಮತ್ತು ಕಮಲಮ್ಮ, ಹೊರ ಜಿಲ್ಲೆಗಳಿಂದ ಬಂದಿರುವವರ ಆರೋಗ್ಯ ತಪಾಸಣೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.