ಪ್ರತಿಯೊಬ್ಬರಿಗೂ ಉದ್ಯೋಗ ನೀಡುವ ಉದ್ದೇಶ
ಉದ್ಯೋಗ ಖಾತ್ರಿ ಯೋಜನೆಯಡಿ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ ಕರ್ನಾಟಕ
Team Udayavani, Jun 5, 2020, 12:19 PM IST
ಸಾಂದರ್ಭಿಕ ಚಿತ್ರ
ಯಾದಗಿರಿ: ಮಹಾತ್ಮಗಾಂಧಿ ರಾಷ್ಟ್ರಿಯ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಯೊಬ್ಬರಿಗೆ ಉದ್ಯೋಗ ದೊರಕಿಸುವ ಯೋಜನೆ ರೂಪಿಸಿದ್ದಾರೆ. ರಾಜ್ಯದಲ್ಲಿಯೂ ಪ್ರತಿಯೊಬ್ಬ ಕಾರ್ಮಿಕ ಉದ್ಯೋಗ ಪಡೆಯಬಹುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ತಾಲೂಕಿನ ಬಳಿಚಕ್ರ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಸಾಮಾಜಿಕ ಅರಣ್ಯ ಕ್ಷೇತ್ರದ ಸಸಿ ನೆಡುವುದು ಮತ್ತು ನಾಲಾ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಸರ್ಕಾರಿ ನೌಕರರು, ತೆರಿಗೆ ಪಾವತಿದಾರರು ಹಾಗೂ ಜನಪ್ರತಿನಿಧಿಗಳನ್ನು ಹೊರತು ಪಡಿಸಿ ಉಳಿದೆಲ್ಲರೂ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ನಿರ್ವಹಿಸಲು ಪಿಡಿಒ ಗಳಿಂದ ಉದ್ಯೋಗ ಚೀಟಿ ಪಡೆಯಬೇಕು ಎಂದು ಹೇಳಿದರು.
ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ವೆಂಕಟರೆಡ್ಡಿ ಮುದ್ನಾಳ, ಜಿಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಬಿಜೆಪಿ ಜಿಲ್ಲಾಧ್ಯಕ್ಷ ಡಾ| ಶರಣಭೂಪಾಲರೆಡ್ಡಿ ನಾಯ್ಕಲ್, ಬಿಜೆಪಿ ಮುಖಂಡರಾದ ದೇವರಾಜ ನಾಯಕ, ಸಾಯಬಣ್ಣ ಬೋರಬಂಡಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.