ವಾಯವ್ಯ ಸಾರಿಗೆಯಿಂದ ಸಿಎಂ ನಿಧಿಗೆ 2.03ಕೋಟಿ
ಜನರ ಸೇವೆಗಿದೆ ಸಂಸ್ಥೆ; ಸಂಕಷ್ಟದಲ್ಲೂ ನೆರವು ನೀಡಿದ ಅಧಿಕಾರಿಗಳು-ನೌಕರರು
Team Udayavani, May 14, 2020, 1:14 PM IST
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ವಾಕರಸಾ ಸಂಸ್ಥೆ ಎಲ್ಲಾ ಅಧಿಕಾರಿ ಹಾಗೂ ನೌಕರರ ವತಿಯಿಂದ ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ಒಂದು ದಿನದ ವೇತನದ ಒಟ್ಟು ಮೊತ್ತ 2.03 ಕೋಟಿ ರೂ.ನೀಡಲಾಗಿದೆ ಎಂದು ವಾಯವ್ಯ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ಹೇಳಿದರು.
ನಗರದ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಕಾರ್ಯದರ್ಶಿಗಳು ಇಂದು ಮುಖ್ಯಮಂತ್ರಿಗಳಿಗೆ ಚೆಕ್ ಹಸ್ತಾಂತರಿಸಿದ್ದಾರೆ.
ಸಾರಿಗೆ ಸಂಸ್ಥೆ ಜನರ ಸೇವೆಗೆ ಇರುವಂತಹದ್ದು. ಸಂಸ್ಥೆ ಲಾಭಕ್ಕಿಂತ ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿದೆ. ಬಡಜನರು ಹಾಗೂ ವಿದ್ಯಾರ್ಥಿಗಳಿಗೆ ಸಂಸ್ಥೆಯಿಂದ ಹೆಚ್ಚು ಅನುಕೂಲವಾಗುತ್ತಿದೆ. ಜನರು ಎರಡು ತಿಂಗಳಿಂದ ಸಾರಿಗೆ ಸಂಸ್ಥೆ ಸೌಲಭ್ಯವಿಲ್ಲದೆ ಹೆಚ್ಚು ತೊಂದರೆ ಅನುಭವಿಸಿದ್ದಾರೆ. 20ನೇ ತಾರೀಖೀನ ನಂತರ ಸರ್ಕಾರದ ಆದೇಶದನ್ವಯ ಬಸ್‌ಗಳ ಕಾರ್ಯಾಚರಣೆ ಆರಂಭಿಸಲಾಗುವುದು. ನಿಯಮಾವಳಿಗಳಂತೆ ಒಂದು ಬಸ್‌ನಲ್ಲಿ 25ರಿಂದ 30 ಜನರು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗುವುದು. ಇದರಿಂದ ಸಂಸ್ಥೆಗೆ ಪ್ರತಿದಿನ 3ಕೋಟಿ ನಷ್ಟ ಸಂಭವಿಸಬಹುದು. ಆದರೂ ಸರ್ಕಾರದ ನಿರ್ದೇಶನದಂತೆ ಬಸ್ ಕಾರ್ಯಾಚರಣೆ ಆರಂಭಿಸಲಾಗುವುದು ಎಂದರು.
ನೌಕರರ ವೇತನ ಪಾವತಿಗೆ ಸರ್ಕಾರದ ಸಹಾಯ ಅಗತ್ಯ. ಸಂಸ್ಥೆಯಲ್ಲಿ ಚಾಲಕರು, ನಿರ್ವಾಹಕರು ಸೇರಿದಂತೆ ಕೆಳ ಹಂತದ ಹಾಗೂ ಬಡತನ ಹಿನ್ನೆಲೆ ಇರುವ ನೌಕರರು ಹೆಚ್ಚಿದ್ದಾರೆ. ಆದರೂ ಉದಾರತೆಯಿಂದ ಒಂದು ದಿನದ ವೇತನ ನೀಡಿ ಸರ್ಕಾರದ ನೆರವಿಗೆ ನಿಂತಿದ್ದಾರೆ. ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ಕಾರ್ಯ ಅಭಿನಂದನೀಯ. ಸಾರಿಗೆ ಮಂತ್ರಿಗಳೊಂದಿಗೆ ಚರ್ಚಿಸಿ ಸರ್ಕಾರದಿಂದ ಸಂಸ್ಥೆಗೆ ಇನ್ನೂ ಹೆಚ್ಚು ನೆರವು ಪಡೆಯಲು ಪ್ರಯತ್ನಿಸುವುದಾಗಿ ಹೇಳಿದರು.
ಪಾಟೀಲರಿಗೆ ಸನ್ಮಾನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕಕರಿಗೆ ಸರ್ಕಾರ ಏಪ್ರಿಲ್ ತಿಂಗಳ ವೇತನ ಬಿಡುಗಡೆ ಮಾಡಲಾಗಿದೆ. ಸಾರಿಗೆ ಸಂಸ್ಥೆಯ ಬಸ್ ಕಾರ್ಯಚರಣೆ ನಿಂತಿರುವುದರಿಂದ ಎಲ್ಲಾ ನಿಗಮಗಳಿಗೆ ಆದಾಯ ಇಲ್ಲದಂತಾಗಿದೆ. ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಸಂಸ್ಥೆಯ ನೌಕರರಿಗೆ ವೇತನ ಬಿಡುಗಡೆ ಶ್ರಮಿಸಿದ ವಾಕರಸಾ ಸಂಸ್ಥೆ ಅಧ್ಯಕ್ಷ ವಿ.ಎಸ್. ಪಾಟೀಲ ಅವರನ್ನು ಕೆಎಸ್‌ಆರ್‌ಟಿಸಿ ಆಫಿಸರ್ಸ್ ವೆಲ್‌ಫೇರ್ ಅಸೋಶಿಯೇಷನ್ ನಿಂದ ಸನ್ಮಾನಿಸಲಾಯಿತು. ವಿಭಾಗೀಯ ನಿಯಂತ್ರಣಾಧಿ ಕಾರಿ ವಿವೇಕಾನಂದ ವಿಶ್ವಜ್ಞ, ಡಿಟಿಒ ಅಶೋಕ ಪಾಟೀಲ, ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಪಿ.ವೈ.ನಾಯ್ಕ, ಮುಖ್ಯ ಸಂಚಾರಿ ನಿರೀಕ್ಷಕ ಸಂತೋಷ ಕುಮಾರ ಸೇರಿದಂತೆ ಹಿರಿಯ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.