ಎರಡೇ ದಿನಕ್ಕೆ 201 ಮನೆ ಆಪೋಶನ
1044 ವಿದ್ಯುತ್ ಕಂಬ, 22 ಟಿಸಿಗೆ ಹಾನಿ
Team Udayavani, May 22, 2022, 11:12 AM IST
ಹುಬ್ಬಳ್ಳಿ: ಜಿಲ್ಲಾದ್ಯಂತ ಕಳೆದೆರಡು ದಿನಗಳ ಅವಧಿಯಲ್ಲಿ ಸುರಿದ ಭಾರೀ ಮಳೆಗೆ ಸುಮಾರು 201 ಮನೆಗಳು, 1044 ವಿದ್ಯುತ್ ಕಂಬಗಳು, 22 ವಿದ್ಯುತ್ ಪರಿವರ್ತಕಗಳು ಹಾನಿಯಾದ ಬಗ್ಗೆ ವರದಿಗಳು ಬಂದಿವೆ. ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನದ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಹೇಳಿದರು.
ಅತಿವೃಷ್ಟಿಯಿಂದ ಬಾಧಿತವಾಗಿರುವ ಹಳೇಹುಬ್ಬಳ್ಳಿ ಆನಂದನಗರ ರಸ್ತೆಯ ಗಣೇಶ ಕಾಲೋನಿ, ನೇಕಾರ ನಗರ, ಟಿಪ್ಪು ನಗರ, ರಾಜನಾಲಾ ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿ, ಸ್ಥಳೀಯರಿಂದ ಅಹವಾಲುಗಳನ್ನು ಆಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ 8 ತಾಲೂಕುಗಳಲ್ಲಿ ಅತ್ಯಧಿಕ ಮಳೆಯಾಗಿದೆ. ತೋಟಗಾರಿಕೆ ಇಲಾಖೆಯಲ್ಲಿ ಸುಮಾರು 101 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಅಂದಾಜು 71 ಹೆಕ್ಟೇರ್ ಹಾನಿಯಾಗಿದೆ. ಎನ್‌ಡಿಆರ್‌ಎಫ್ ಮಾನದಂಡಗಳ ಪ್ರಕಾರ ಸುಮಾರು 96 ಲಕ್ಷ ರೂ. ಹಾನಿಯ ಅಂದಾಜು ಮಾಡಲಾಗಿದೆ. ರೈತ ಸಹಾಯವಾಣಿ ಪ್ರಾರಂಭಿಸಲಾಗಿದೆ. ಅತಿವೃಷ್ಟಿ ಸಂದರ್ಭದಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಆಯುಕ್ತರು ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ನಗರ ಪ್ರದೇಶದಲ್ಲಿ ಕಾಮಗಾರಿಗಳು ನಡೆಯುತ್ತಿರುವ ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿ ತೊಂದರೆ ಎದುರಾಗಿದೆ. ಸೂಕ್ತ ಮಾರ್ಪಾಟು ಮಾಡಿಕೊಳ್ಳಲು ಎಂಜಿನಿಯರ್‌ಗಳಿಗೆ ಸೂಚಿಸಲಾಗಿದೆ ಎಂದರು.
ಶಾಸಕ ಪ್ರಸಾದ ಅಬ್ಬಯ್ಯ ಅವರು ನೇಕಾರ ನಗರ, ಟಿಪ್ಪುನಗರ, ರಾಜನಾಲಾ ಸುತ್ತಲಿನ ಪ್ರದೇಶದ ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿ, ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.
ತ್ವರಿತ ಪರಿಹಾರಕ್ಕೆ ಆಗ್ರಹ: ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕುಂದಗೋಳ ಶಾಸಕಿ ಕುಸುಮಾವತಿ ಶಿವಳ್ಳಿ ಮಾತನಾಡಿ, ಅತಿವೃಷ್ಟಿಗೆ ಈ ಬಾರಿ ಕುಂದಗೋಳ ತಾಲೂಕಿನಾದ್ಯಂತ ಅಧಿಕ ಹಾನಿಯಾಗಿದೆ. ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸಲು ಮನವಿ ಮಾಡಿದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಲಾಭೂ ರಾಮ, ಎಸ್ಪಿ ಪಿ. ಕೃಷ್ಣಕಾಂತ, ಜಿಪಂ ಸಿಇಒ ಡಾ| ಸುರೇಶ ಇಟ್ನಾಳ, ಮಹಾನಗರ ಪಾಲಿಕೆ ಆಯುಕ್ತ ಡಾ| ಬಿ. ಗೋಪಾಲಕೃಷ್ಣ ಸೇರಿದಂತೆ ಇತರೆ ಅಧಿಕಾರಿಗಳು ಸಚಿವರಿಗೆ ಅತಿವೃಷ್ಟಿಯ ಮಾಹಿತಿ ನೀಡಿದರು.
ಉಪ ವಿಭಾಗಾಧಿಕಾರಿ ಅಶೋಕ ತೇಲಿ, ತಹಶೀಲ್ದಾರರಾದ ಶಶಿಧರ ಮಾಡ್ಯಾಳ, ಪ್ರಕಾಶ ನಾಶಿ, ಡಾ| ಸಂತೋಷಕುಮಾರ ಬಿರಾದಾರ, ಪಾಲಿಕೆ ಸದಸ್ಯೆ ಸರಸ್ವತಿ ಧೋಂಗಡಿ, ಅಲ್ತಾಫ ಕಿತ್ತೂರ, ಮೋಹನ ಅಸುಂಡಿ ಮೊದಲಾದವರಿದ್ದರು.
ಮಳೆಗಾಲದ ಪೂರ್ವದಲ್ಲಿ ತಯಾರಿಯಾಗಬೇಕು. ಯಾವುದೇ ವರ್ಷ ಮೇ ತಿಂಗಳಲ್ಲಿ ಈ ಪ್ರಮಾಣದಲ್ಲಿ ಮಳೆಯಾಗಿರಲಿಲ್ಲ. ಆದರೆ ಈ ಬಾರಿಯಾಗಿದೆ. ಇದು ಸರಕಾರಕ್ಕೆ ಒಂದು ಪಾಠವಾಗಲಿದೆ. ಎಲ್ಲಿ ಈ ರೀತಿ ಸಮಸ್ಯೆಯಾಗಿದೆಯೋ ಅಲ್ಲಿ ಬಗೆಹರಿಸುವುದರ ಜೊತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಸಣ್ಣ ಸಮಸ್ಯೆಗಳಿದ್ದರೂ ತಿದ್ದುಕೊಳ್ಳಬೇಕು. ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟವಾಗಿ ನಿರ್ದೇಶಿಸಲಾಗುವುದು. –ಹಾಲಪ್ಪ ಆಚಾರ್, ಜಿಲ್ಲಾ ಉಸ್ತುವಾರಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.