ಸಂಕ್ರಾಂತಿಯೊಳಗೆ ಅಣ್ಣಿಗೇರಿಗೆ 24×7 ನೀರು: ಮುನೇನಕೊಪ್ಪ
ಬಸಾಪುರ ಬಳಿ ನೂತನವಾಗಿ ನಿರ್ಮಿಸಿರುವ ಕೆರೆ ; ಮಲಪ್ರಭೆ ಕಾಲುವೆ ನೀರು ತುಂಬಿಸುವುದಕ್ಕೆ ಚಾಲನೆ ; ದಶಕಗಳ ಸಮಸ್ಯೆಗೆ ಮುಕ್ತಿ ಕಾಲ
Team Udayavani, Nov 1, 2022, 12:01 PM IST
ಹುಬ್ಬಳ್ಳಿ: ಕೆರೆ ನಿರ್ಮಾಣದಿಂದ ಕಳೆದ ಮೂರ್‍ನಾಲ್ಕು ದಶಕಗಳಿಂದ ಅಣ್ಣಿಗೇರಿ ಜನರು ಅನುಭವಿಸುತ್ತಿದ್ದ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರಕಿದಂತಾಗಿದ್ದು, ಸಂಕ್ರಾಂತಿಯೊಳಗೆ ಪಟ್ಟಣದ ಜನತೆಗೆ ನಿರಂತರ ಕುಡಿಯುವ ನೀರು ಸರಬರಾಜು ಆಗಲಿದೆ ಎಂದು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.
ಸೋಮವಾರ ಅಣ್ಣಿಗೇರಿ ತಾಲೂಕಿನ ಬಸಾಪುರ ಬಳಿ 34.88 ಕೋಟಿ ರೂ. ವೆಚ್ಚದಲ್ಲಿ ಅಣ್ಣಿಗೇರಿ ಪಟ್ಟಣಕ್ಕೆ 24×7 ನಿರಂತರ ಕುಡಿಯುವ ನೀರು ಸರಬರಾಜು ಕೆರೆಗೆ ಮಲಪ್ರಭಾ ಕಾಲುವೆ ಮೂಲಕ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೆರೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ನಿರಂತರ ನೀರು ಪೂರೈಕೆಗೆ ಅಗತ್ಯ ಇರುವ ಪೈಪ್‌ಲೈನ್ ಕಾಮಗಾರಿ ಮುಗಿಯುವ ಹಂತದಲ್ಲಿದೆ. ಸಂಕ್ರಾಂತಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾಮಗಾರಿ ವೇಗ ಕೂಡ ಹಚ್ಚಾಗಿದ್ದು, ಸಂಕ್ರಾಂತಿ ವೇಳೆಗೆ ಕೆರೆಯ ನೀರು ಅಣ್ಣಿಗೇರಿ ಪಟ್ಟಣದ ಜನತೆಗೆ ದೊರೆಯಲಿದ್ದು, ನಂತರ ಅತೀ ಶೀಘ್ರದಲ್ಲಿ ನಿರಂತರ ನೀರು ದೊರೆಯಲಿದೆ ಎಂದರು.
ಆರಂಭದಲ್ಲಿ ಮಲಪ್ರಭಾ ಕಾಲುವೆಯಿಂದ ಪಂಪ್‌ಸೆಟ್‌ಗಳ ಮೂಲಕ ತುಂಬಿಸುವ ಯೋಜನೆ ರೂಪಿಸಲಾಗಿತ್ತು. ಇದು ಅತ್ಯಂತ ಖರ್ಚುದಾಯಕವಾಗಿದ್ದು, ವಿದ್ಯುತ್ ಸೇರಿದಂತೆ ಹಲವು ಸೌಲಭ್ಯಗಳನ್ನು ಮಾಡಿಕೊಳ್ಳಬೇಕಾಗಿತ್ತು. ಇದು ಪುರಸಭೆಗೆ ಹೊರೆಯಾಗುತ್ತಿತ್ತು. ಆದರೆ ಇದೀಗ ನೇರವಾಗಿ ಕಾಲುವೆಯಿಂದ ಕೆರೆಗೆ ನೈಸರ್ಗಿಕವಾಗಿ ನೀರು ತುಂಬಿಸುವ ವ್ಯವಸ್ಥೆ ಯಶಸ್ವಿಯಾಗಿದೆ. ಇದರಿಂದ 45 ದಿನಗಳಲ್ಲಿ ಇಡೀ ಕೆರೆ ಭರ್ತಿಯಾಗಲಿದೆ. ಒಂದು ವೇಳೆ ಪಂಪ್ ಸೆಂಟ್‌ಗಳ ಮೂಲಕ ತುಂಬಿಸುವುದಾಗಿದ್ದರೆ 3-4 ತಿಂಗಳು ಬೇಕಾಗಿತ್ತು. ಈ ಕೆರೆಯನ್ನು ಪ್ರವಾಸಿ ತಾಣವನ್ನಾಗಿ ಮಾಡುವ ಚಿಂತನೆಯಿದೆ. ಅಣ್ಣಿಗೇರಿ ಪಟ್ಟಣದಲ್ಲಿ ಕೋರ್ಟ್, ನ್ಪೋರ್ಟ್ಸ್ ಪಾರ್ಕ್ ಸೇರಿದಂತೆ ವಿವಿಧ ತಾಲೂಕು ಮಟ್ಟದ ಕಚೇರಿ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ವೀರೇಶ ಹಸಬಿ ಮಾತನಾಡಿ, ನಿರಂತರ ನೀರು ಹಾಗೂ ಕೆರೆ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಇದೀಗ 10 ದಿನಗಳಿಗೊಮ್ಮೆ ನೀರು ದೊರೆಯುತ್ತಿದೆ. ಕಾಮಗಾರಿ ಪೂರ್ಣಗೊಂಡ ನಂತರ ನಿರಂತರ ನೀರು ದೊರೆಯಲಿದೆ. ಒಮ್ಮೆ ಕೆರೆ ತುಂಬಿಸಿದರೆ ಆರು ತಿಂಗಳ ಕಾಲ ನೀರು ಪಡೆಯಬಹುದಾಗಿದೆ ಎಂದರು.
ಲಡ್ಡು ಮುತ್ಯಾ ಅಜ್ಜನವರು ಸಾನ್ನಿಧ್ಯ ವಹಿಸಿದ್ದರು. ಪುರಸಭೆ ಅಧ್ಯಕ್ಷೆ ಗಂಗಾ ಕರೆಟ್ಟನವರ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಜಯಲಕ್ಷ್ಮೀ ಜಕರಡ್ಡಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಬಾಜಾನ ಮುಲ್ಲಾನವರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಭಿಯಂತ ರವಿಕುಮಾರ, ಬಿಜೆಪಿ ಮುಖಂಡ ಷಣ್ಮುಖಪ್ಪ ಗುರಿಕಾರ, ಮಾಬುಬಿ ನವಲಗುಂದ, ಮಂಜುಳಾ ರೋಣದ ಇನ್ನಿತರರಿದ್ದರು.
ಸರಕಾರ ಕೆರೆ ನಿರ್ಮಾಣ ಯಶಸ್ವಿಯಾಗಿ ನಿರ್ವಹಿಸಿದೆ. ನೀರನ್ನು ಪ್ರತಿಮನೆಗೆ ತಲುಪಿಸುವ ಜವಾಬ್ದಾರಿ ಪುರಸಭೆಯದ್ದಾದರೆ, ಸದ್ವಿನಿಯೋಗ ಹೊಣೆ ಜನರದ್ದಾಗಿದೆ. ಕೆರೆ ನಿರ್ಮಾಣ ನಿಟ್ಟಿನಲ್ಲಿ ಬಸಾಪುರ ಜನತೆಯ ತ್ಯಾಗ ದೊಡ್ಡದು. ಜಿಲ್ಲೆಯಲ್ಲಿ ಎರಡು ಸಕ್ಕರೆ ಕಾರ್ಖಾನೆ, ನವಲಗುಂದ ಕ್ಷೇತ್ರ ವ್ಯಾಪ್ತಿಯಲ್ಲಿ ಎಥೆನಾಲ್ ತಯಾರಿಸುವ ಘಟಕ ತರಲಾಗುವುದು. ಈಗಾಗಲೇ ಜಿಲ್ಲೆಗೆ ಜವಳಿ ಪಾರ್ಕ್ ಮಂಜೂರಾಗಿದ್ದು, ನೇರವಾಗಿ 5 ಸಾವಿರ ಜನರಿಗೆ ಉದ್ಯೋಗ ದೊರೆಯಲಿದೆ. ಪರೋಕ್ಷವಾಗಿ 25 ಸಾವಿರ ಜನರಿಗೆ ಅನುಕೂಲವಾಗಲಿದೆ. -ಶಂಕರ ಪಾಟೀಲ ಮುನೇನಕೊಪ್ಪ
ಕಳೆದ 50 ವರ್ಷಗಳಿಂದ ನೀರಿಗಾಗಿ ಸಮಸ್ಯೆ ಹೇಳತೀರದು. ನೀರನ್ನು ಹೆಬಸೂರು ಗ್ರಾಮಕ್ಕೆ ಹೋಗಿ ತರಬೇಕಾಗಿತ್ತು. ಆದರೆ ಇದೀಗ ಈ ಯೋಜನೆಯಿಂದ ಬಹು ವರ್ಷದ ಸಮಸ್ಯೆಗೆ ಪರಿಹಾರ ದೊರೆತಂತಾಗಿದೆ. -ಅಬ್ದುಲ್‌ಸಾಬ್ ನಡಕಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.