![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 28, 2022, 10:29 AM IST
ಹುಬ್ಬಳ್ಳಿ: ಕೋವಿಡ್ ಮಾರ್ಗಸೂಚಿಗಳ ಜಾರಿ ಕುರಿತು ಪ್ರಧಾನ ಮಂತ್ರಿಗಳೊಂದಿಗೆ ಮುಖ್ಯಮಂತ್ರಿಗಳ ಸಭೆ ನಂತರ ರಾಜ್ಯ ಸರಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಿದ್ದು, ಪರಿಷ್ಕೃತ ಕೋವಿಡ್ ನಿಯಮಗಳ ಅನುಸಾರ ಮೇ 3ರಂದು ಬಸವ ಜಯಂತಿ ಆಚರಿಸಲಾಗುವುದು ಎಂದು ಹುಬ್ಬಳ್ಳಿ ಶಹರ ತಹಶೀಲ್ದಾರ ಶಶಿಧರ ಮಾಡ್ಯಾಳ ಹೇಳಿದರು.
ಇಲ್ಲಿನ ಮಿನಿ ವಿಧಾನಸೌಧದ ತಹಶೀಲ್ದಾರ್ ಸಭಾಭವನದಲ್ಲಿ ಬುಧವಾರ ಬಸವ ಜಯಂತಿ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ವಿವಿಧ ಸಂಘ-ಸಂಸ್ಥೆಗಳು ಹಲವು ಬಡಾವಣೆಗಳಲ್ಲಿ ಬಸವ ಜಯಂತಿ ಆಚರಣೆ ಮಾಡಲಿವೆ.
ಮೇ 3ರಂದು ಬೆಳಗ್ಗೆ 10 ಗಂಟೆಗೆ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ, 11 ಗಂಟೆಗೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ವಿದ್ಯಾರ್ಥಿಗಳಿಂದ ಬಸವಣ್ಣನವರ ವಚನಗಳ ವಾಚನ, ಗಾಯನ ಏರ್ಪಡಿಸಲಾಗುವುದು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಸಾಮಾಜಿಕ ಅಂತರ ಕಾಯ್ದುಕೊಂಡು ನಿಯಮಾನುಸಾರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು ಸಲಹೆ-ಸೂಚನೆ ನೀಡಿದರು. ಸಮಾಜದ ಮುಖಂಡರಾದ ಚನ್ನಬಸಪ್ಪ ಧಾರವಾಡಶೆಟ್ಟರ, ನಂದಕುಮಾರ ಪಾಟೀಲ, ನೀಲಕಂಠಯ್ಯ ತಡಸದಮಠ, ಗುರನಗೌಡ ಪಾಟೀಲ, ಬಸವರಾಜ ಜಾಬಿನ, ನಿರ್ಮಲಾ ಹಿರೇಮಠ, ಬಸವರಾಜ ಯಕಲಾಸಪುರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.