ಮನುಕುಲದ ಉದ್ಧಾರಕ್ಕೆ ಭಜನೆ ಶ್ರೇಷ್ಠ ಸಾಧನ: ನ್ಯಾ| ಅಡಿಗ
ಸಿದ್ಧಾರೂಢ ಮಠದಲ್ಲಿ ರಾಜ್ಯಮಟ್ಟದ ಭಜನಾ ಸ್ಪರ್ಧೆಗೆ ಚಾಲನೆ
Team Udayavani, Apr 5, 2022, 12:33 PM IST
ಹುಬ್ಬಳ್ಳಿ: ಮನುಕುಲದ ಉದ್ಧಾರಕ್ಕೆ ಭಜನೆ ಶ್ರೇಷ್ಠವಾದ ಸಾಧನವೆಂದು ಶ್ರೀಮಠದ ಮುಖ್ಯ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಸತ್ರ ನ್ಯಾಯಾಧೀಶ ಉಮೇಶ ಅಡಿಗ ಹೇಳಿದರು.
ಸಿದ್ಧಾರೂಢಸ್ವಾಮಿ ಮಠದಲ್ಲಿ ಸೋಮವಾರ ಸಿದ್ಧಾರೂಢ ಸ್ವಾಮಿಯವರ 186ನೇ ಜಯಂತ್ಯುತ್ಸವ ನಿಮಿತ್ತ 7ನೇ ವರ್ಷದ ರಾಜ್ಯಮಟ್ಟದ ಭಜನಾ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ಕಲಿಯುಗದಲ್ಲಿ ನಾಮ ಸಂಕೀರ್ತನೆ, ಭಜನೆ ಮೋಕ್ಷಕ್ಕೆ ಸುಲಭವಾದ ಸಾಧನಗಳಾಗಿವೆ. ಈ ರೀತಿಯಾದ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿರುವ ಧರ್ಮದರ್ಶಿಗಳು ಹಾಗೂ ರಾಜ್ಯ ಮಟ್ಟದ ಸ್ಪರ್ಧೆಯ ಅಧ್ಯಕ್ಷ ಶಾಮಾನಂದ ಪೂಜೇರಿ ಅವರ ಸೇವಾ ಕಾರ್ಯ ಅತ್ಯಂತ ಶ್ಲಾಘನೀಯ ಎಂದರು.
ಅಣ್ಣಿಗೇರಿ ದಾಸೋಹ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಆಶೀರ್ವಚನ ನೀಡಿ, ಭಜನೆ ಬ್ರಹ್ಮಾನಂದ ವನ್ನು ತಂದು ಕೊಡುವ ಕಲಿಯುಗದ ಏಕೈಕ ಸಾಧನೆ. ಸಿದ್ಧಾರೂಢರ ಮಠ ಭಜನೆ, ಶಾಸ್ತ್ರ, ಪುರಾಣ, ಕೀರ್ತ ನೆಗಳಿಗೆ ಮೀಸಲಾಗಿಟ್ಟ ಪವಿತ್ರವಾದ ಕ್ಷೇತ್ರ. ಈ ಕ್ಷೇತ್ರದಲ್ಲಿ ವರ್ಷಕ್ಕೆ ಒಂದು ಬಾರಿಯಾದರೂ ಇಂತಹ ಭಜನಾ ಸ್ಪರ್ಧೆ ನಡೆಯಲೇಬೇಕು. ಭಜನೆ ಮಾಡುವುದರಿಂದ ತನು, ಮನ ಪರಿಶುದ್ಧವಾಗುತ್ತದೆ ಎಂದು ಹೇಳಿದರು.
ನಿಜಗುಣರ ಕೈವಲ್ಯ ಪದಗಳು ಉತ್ತರ ಕರ್ನಾಟಕದಲ್ಲಿ ಮಾತ್ರ ಪ್ರಚಲಿತವಾಗಿವೆ. ಆದ ಕಾರಣ ಇದನ್ನು ಇಡೀ ರಾಜ್ಯದ ತುಂಬೆಲ್ಲಾ ಪ್ರಚಾರ ಮಾಡುತ್ತಿರುವುದು ಅತ್ಯಂತ ಶ್ಲಾಘನೀಯವಾದ ವಿಷಯವೆಂದರು.
ಶ್ರೀಮಠದ ಚೇರ್ಮೇನ್ ಡಿ.ಡಿ. ಮಾಳಗಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಶಿವಬಸವ ಸ್ವಾಮೀಜಿ, ಹಿರಿಯ ದಿವಾಣಿ ನ್ಯಾಯಾಧೀಶ ರವಿ ಆರಿ, ವೈಸ್‌ಚೇರ್ಮೇನ್ ಡಾ| ಗೋವಿಂದ ಮಣ್ಣೂರ, ಗೌರವ ಕಾರ್ಯದರ್ಶಿ ಜಗದೀಶ ಮಗಜಿಕೊಂಡಿ, ಧರ್ಮದರ್ಶಿಗಳಾದ ಪ್ರಕಾಶ ಉಡಿಕೇರಿ, ಜಿ.ಎಸ್. ನಾಯಕ, ಮಹೇಶಪ್ಪ ಹನಗೋಡಿ, ಧರಣೇಂದ್ರ ಜವಳಿ, ಕೆ.ಕೆ. ತೆರಗುಂಟಿ, ಮಠದ ವ್ಯವಸ್ಥಾಪಕ ಈರಣ್ಣ ತುಪ್ಪದ ಮೊದಲಾದವರಿದ್ದರು.
ರಾಜ್ಯಮಟ್ಟದ ಭಜನಾ ಸ್ಪರ್ಧೆಯ ಅಧ್ಯಕ್ಷ ಶಾಮಾನಂದ ಪೂಜೇರಿ ಸ್ವಾಗತಿಸಿದರು. ಧರ್ಮದರ್ಶಿ ಎಸ್.ಐ. ಕೋಳಕೂರ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.