ಪಂಚಮಸಾಲಿ ಮೀಸಲಿಗೆ ಬಿಎಸ್‌ವೈ ಅಡ್ಡಿ
Team Udayavani, Sep 21, 2022, 2:00 PM IST
ಹುಬ್ಬಳ್ಳಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನಸ್ಸಿದೆ. ಆದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಡ್ಡಗಾಲು ಹಾಕುತ್ತಿದ್ದಾರೆ. ನಮ್ಮ ಸಮಾಜದ ಮೇಲೆ ಯಡಿಯೂರಪ್ಪ ಅವರಿಗೆ ಯಾಕೆ ಸಿಟ್ಟು ಎಂಬುದು ಗೊತ್ತಾಗುತ್ತಿಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸಮಾಜಕ್ಕೆ ಮೀಸಲಾತಿ ನೀಡುವುದಾಗಿ ಭರವಸೆ ನೀಡಿದ್ದ ಯಡಿಯೂರಪ್ಪನವರು ಏಕಾಏಕಿ ಇದೀಗ ಸಮಾಜದ ವಿರುದ್ಧ ತಿರುಗಿಬಿದ್ದಿರುವುದು ಅರ್ಥವಾಗುತ್ತಿಲ್ಲ. ಅವರು ಈ ಮನಸ್ಥಿತಿಯಿಂದ ಹೊರಬರುವುದು ಸೂಕ್ತ. ಒಂದು ವೇಳೆ ಇದು ಮುಂದುವರಿದರೆ ರಾಜ್ಯದ ಯಾವ ಮೂಲೆಗೆ ಹೋದರೂ ಸಮಾಜದಿಂದ ಕಪ್ಪುಪಟ್ಟಿ ಪ್ರದರ್ಶಿಸುವ ಮೂಲಕ ಹಕ್ಕೊತ್ತಾಯ ಮಾಡಲಾಗುವುದು. ನಮ್ಮ ಸಮಾಜದೊಂದಿಗೆ ಕುರುಬರಿಗೆ ಎಸ್‌ಟಿ ಹಾಗೂ ಪರಿಶಿಷ್ಟ ವರ್ಗದವರಿಗೆ ಮೀಸಲಾತಿ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಗೃಹ ಸಚಿವರಾಗಿದ್ದ ಸಂದರ್ಭ ಬಸವರಾಜ ಬೊಮ್ಮಾಯಿ ಅವರು ಸಮಾಜದ ಹೋರಾಟಕ್ಕೆ ಸಾಕಷ್ಟು ಬೆಂಬಲ ಹಾಗೂ ಕಾಳಜಿ ತೋರಿದ್ದರು. ಆದರೆ ಮುಖ್ಯಮಂತ್ರಿಯಾದ ನಂತರ ಆ ಕಾಳಜಿ ಮರೆತಿದ್ದಾರೆ. ಇಲ್ಲಿಯವರೆಗೆ ನಾಲ್ಕು ಬಾರಿ ನೀಡಿದ ಮಾತನ್ನು ಮುರಿದಿದ್ದಾರೆ. ಇದರ ಹಿಂದೆ ಯಡಿಯೂರಪ್ಪ ಅವರ ವಿರೋಧ ಇರುವುದಾಗಿ ಸಮಾಜದ ಮುಖಂಡರಾದ ಬಸವನಗೌಡ ಪಾಟೀಲ ಯತ್ನಾಳ ತಿಳಿಸಿದ ನಂತರ ಗೊತ್ತಾಗಿದೆ. ಏನೇ ವಿರೋಧಗಳಿದ್ದರೂ ಮುಖ್ಯಮಂತ್ರಿಗಳು ಸಮಾಜದ ಬೇಡಿಕೆ ಈಡೇರಿಸಬೇಕು. ಸಮಾಜದ ಋಣ ನಿಮ್ಮ ಮೇಲಿದೆ ಎಂಬುದನ್ನು ಮರೆಯಬಾರದು ಎಂದರು.
ಸರಕಾರಕ್ಕೆ ಅಂತಿಮ ಗಡುವು: ಪ್ರಸಕ್ತ ಅಧಿವೇಶನದೊಳಗೆ ಮೀಸಲಾತಿ ಘೋಷಿಸಬೇಕು. ಒಂದು ವೇಳೆ ಸಮಾಜದ ವಿರುದ್ಧ ಸರಕಾರ ನಡೆದುಕೊಂಡರೆ ಮುಂದಿನ ಎರಡು ತಿಂಗಳಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಮ್ಮಿಕೊಳ್ಳಲಾಗುವುದು. ಇದಕ್ಕಾಗಿ ರಾಜ್ಯದ 224 ವಿಧಾನಸಭಾ ಕ್ಷೇತ್ರಾದ್ಯಂತ ರಥಯಾತ್ರೆ ಮೂಲಕ ಸಮಾಜ ಒಗ್ಗೂಡಿಸುವ ಕೆಲಸ ಮಾಡುತ್ತೇನೆ. ಸಮಾಜದ 25 ಲಕ್ಷ ಜನರೊಂದಿಗೆ ಮುತ್ತಿಗೆ ಹಾಕಲಾಗುವುದು. ಮೀಸಲಾತಿ ನೀಡುವುದಾಗಿ ಸಮಾಜದ ಸಚಿವರು ಹಾಗೂ ಶಾಸಕರ ಕೈಹಿಡಿದು ಪ್ರಮಾಣ ಮಾಡಿರುವುದನ್ನು ಮುಖ್ಯಮಂತ್ರಿಗಳು ಮರೆಯಬಾರದು ಎಂದರು.
ಸಿಎಂಗೆ ಹಕ್ಕೊತ್ತಾಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಮೇಲಿರುವ ಸಮಾಜದ ಋಣ ನೆನಪಿಸಿಕೊಳ್ಳಬೇಕು. ತಮ್ಮ ಹಾಗೂ ತಮ್ಮ ತಂದೆಯವರ ರಾಜಕೀಯ ಜೀವನಕ್ಕೆ ಸಮಾಜದ ಕೊಡುಗೆ ಮರೆಯದೆ ಮೀಸಲಾತಿ ಘೋಷಣೆ ಮಾಡಬೇಕು. ಸಮಾಜದ ಮೇಲೆ ನಿಮಗೆ ಕಾಳಜಿಯಿದ್ದರೆ ಕೂಡಲೇ ದಿನಾಂಕ ನಿಗದಿ ಮಾಡಬೇಕು. ಒಂದು ವೇಳೆ ನಿಮಗೆ ಘೋಷಣೆ ಮಾಡಲು ಆಗದಿದ್ದರೆ ಬಹಿರಂಗವಾಗಿ ಸಾಧ್ಯವಿಲ್ಲ ಎಂದು ಘೋಷಿಸಲಿ. ಸಮಾಜದ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ. ಮೀಸಲಾತಿ ನೀಡಿದರೆ ಯಾರಿಗೂ ನೀಡದ ಸನ್ಮಾನ ಗೌರವ ನಿಮಗೆ ನೀಡುತ್ತೇವೆ. ನಿಮ್ಮ ಋಣವನ್ನು ಸಮಾಜ ಯಾವುದೇ ಕಾರಣಕ್ಕೂ ಮರೆಯುವುದಿಲ್ಲ. ಪೀಠದಲ್ಲಿ ನಿಮ್ಮ ಭಾವಚಿತ್ರವನ್ನು ನಿರಂತರವಾಗಿ ಹಾಕಲಾಗುವುದು ಎಂದು ಹಕ್ಕೊತ್ತಾಯ ಮಾಡಿದರು.
ಶೇ.2 ಲಿಂಗಾಯತರಿಂದ ಅನ್ಯಾಯ: ಎಲ್ಲರೂ ಲಿಂಗಾಯತರು ಎಂದು ನಂಬಿಸಿ ಪಂಚಮಸಾಲಿ ಸಮಾಜದಿಂದ ಎಲ್ಲ ಲಾಭ ಪಡೆದುಕೊಂಡರು. ಆದರೆ ಶೇ.2 ರಷ್ಟಿರುವ ಲಿಂಗಾಯತರು ಇಲ್ಲಿಯವರೆಗೂ ಪಂಚಮಸಾಲಿಗಳನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಂಡರು. ಆದರೆ ಸಮಾಜಕ್ಕೆ ಬೇಕಾದ ಯಾವುದೇ ಸವಲತ್ತುಗಳನ್ನು ನೀಡಲಿಲ್ಲ. ರಾಜ್ಯ ಹಾಗೂ ಕೇಂದ್ರದಲ್ಲೂ ತಮ್ಮ ಸ್ಥಾನಗಳನ್ನು ಭದ್ರಪಡಿಸಿಕೊಂಡರು. ಶಿಕಾರಿಪುರದಲ್ಲಿ ದೊಡ್ಡ ಸಂಖ್ಯೆಯಲ್ಲಿದ್ದರೂ ಸಮಾಜಕ್ಕೆ ಒಂದು ನಿವೇಶನ ಇಲ್ಲ. ಈ ಹೋರಾಟ ಸಮಾಜದ ಮಕ್ಕಳ ಶಿಕ್ಷಣ ಹಾಗೂ ಉದ್ಯೋಗಕ್ಕಾಗಿ ಎಂಬುದನ್ನು ಮರೆಯಬಾರದು. ಸಮಾಜದ ತಾಳ್ಮೆಯನ್ನು ಇಷ್ಟೊಂದು ಪರೀಕ್ಷೆ ಮಾಡುವುದು ಯಾರಿಗೂ ಒಳ್ಳೆಯದಲ್ಲ ಎಂದು ಎಚ್ಚರಿಸಿದರು.
ಮಾಜಿ ಸಚಿವರಾದ ವಿನಯ ಕುಲಕರ್ಣಿ, ಎ.ಬಿ. ಪಾಟೀಲ, ಪಿ.ಸಿ. ಸಿದ್ದನಗೌಡರ, ಮುಖಂಡರಾದ ವಿಜಯಾನಂದ ಕಾಶಪ್ಪನವರ, ಸೋಮಣ್ಣ ಬೇವಿನಮರದ, ಎಚ್.ಎಸ್. ಶಿವಶಂಕರ, ಅಮ್ಮನಪುರ ಮಲ್ಲೇಶ, ಪ್ರೇಮಾ ಪಾಟೀಲ, ಬಸವರಾಜ ಹಾಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Pro Kabaddi League: ಯುಪಿ ಯೋಧಾಸ್,ಪಾಟ್ನಾ ಪೈರೇಟ್ಸ್ ಸೆಮಿಫೈನಲಿಗೆ
IND Vs AUS ಬಾಕ್ಸಿಂಗ್ ಡೇ ಟೆಸ್ಟ್: ಆಸ್ಟ್ರೇಲಿಯ ರನ್ ಓಟಕ್ಕೆ ಬುಮ್ರಾ ಬ್ರೇಕ್
Padubidri: ಕಾರು ಢಿಕ್ಕಿ; ಪಾದಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.