ಹೊಸ ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ
ಇನ್ನಿತರೆ ಸುರಕ್ಷತಾ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು.
Team Udayavani, Dec 3, 2021, 2:22 PM IST
ಹುಬ್ಬಳ್ಳಿ: ಪ್ರಯಾಣಿಕರ ಸುರಕ್ಷತೆ ಹೆಚ್ಚಿಸಲು ಹಾಗೂ ಅಹಿತಕರ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಖಾಸಗಿ ಸಹಭಾಗಿತ್ವದಲ್ಲಿ ಇಲ್ಲಿನ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಲ್ಲಿ 16 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದ್ದು, ೊದಲ ಹಂತದಲ್ಲಿ 8 ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಗೋಕುಲ ರಸ್ತೆ ಪೋಲೀಸ್ ಠಾಣೆ ಹಾಗೂ ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಹಿರಿಯ ಅ ಧಿಕಾರಿಗಳು ನಿಲ್ದಾಣಕ್ಕೆ ಭೇಟಿ ನೀಡಿ ಸಿಸಿ ಕ್ಯಾಮರಾಗಳ ಕಾರ್ಯ ವಿಧಾನ ಪರಿವೀಕ್ಷಿಸಿದರು. ಇನ್ನಿತರೆ ಸುರಕ್ಷತಾ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಗೋಕುಲ ಠಾಣೆ ಇನ್‌ಸ್ಪೆಕ್ಟರ್ ಜಾಕಿರ ಪಾಷಾ ಕಾಲಿಮಿರ್ಚಿ ಮಾತನಾಡಿ, ಇತ್ತೀಚೆಗೆ ಪ್ರಯಾಣಿಕರ ಲ್ಯಾಪ್‌ಟಾಪ್ ಕಳ್ಳತನ, ಪಿಕ್ ಪಾಕೆಟ್, ಸಾರಿಗೆ ಸಿಬ್ಬಂದಿ ಟಿಕೆಟ್ ಟ್ರೇ ಕಳ್ಳತನ ಪ್ರಕರಣಗಳು ವರದಿಯಾಗಿದ್ದವು. ಇಂತಹ ಘಟನೆಗಳಿಂದ ನಿಲ್ದಾಣ ಸುರಕ್ಷಿತ ಸ್ಥಳವಲ್ಲ ಎನ್ನುವ ಭಾವನೆ ಪ್ರಯಾಣಿಕರಲ್ಲಿ ಬರಬಾರದು ಎನ್ನುವ ಕಾರಣಕ್ಕೆ ಸಂಭಾವ್ಯ ಅಹಿತಕರ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಖಾಸಗಿಯವರ ಪ್ರಾಯೋಜಕತ್ವದಲ್ಲಿ ನಿಲ್ದಾಣದಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗುತ್ತಿದೆ ಎಂದರು.
ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿ ಕಾರಿ ಎಚ್.ರಾಮನಗೌಡರ ಮಾತನಾಡಿ, ಸ್ಮಾರ್ಟ್‌ಸಿಟಿ ಯೋಜನೆ ಅಡಿಯಲ್ಲಿ ಹಳೆ ಬಸ್ ನಿಲ್ದಾಣದ ಪುನರ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಅಲ್ಲಿನ ಎಲ್ಲಾ ಬಸ್ ಗಳನ್ನು ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣ ಹಾಗೂ ಇಲ್ಲಿನ ನಿಲ್ದಾಣದಿಂದ ಕಾರ್ಯಾಚರಣೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬಸ್‌ಗಳು ಹಾಗೂ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಪ್ರಯಾಣಿಕರ, ಅದರಲ್ಲೂ ಮಹಿಳೆಯರ ಸುರಕ್ಷತಾ ದೃಷ್ಟಿಯಿಂದ ಪೊಲೀಸ್ ಇಲಾಖೆಯಿಂದ ಕೈಗೊಂಡಿರುವ ಈ ಕಾರ್ಯ ಶ್ಲಾಘನೀಯ ಎಂದರು.
ಪ್ರೊಬೇಷನರಿ ಪಿಎಸ್‌ಐ ವಿಶ್ವನಾಥ ಸಿಸಿ ಕ್ಯಾಮರಾಗಳನ್ನು ಅಳವಡಿಸಿರುವ ಸ್ಥಳಗಳು, ಅವುಗಳ ಕಾರ್ಯ ವಿಧಾನ, ದಾಖಲಾಗುವ ದೃಶ್ಯಾವಳಿಗಳ ದತ್ತಾಂಶ ಸಂಗ್ರಹಣೆ ನಿರ್ವಹಣೆ ಮತ್ತು ಸಂರಕ್ಷಣೆ ಕುರಿತು ಮಾಹಿತಿ ನೀಡಿದರು.ವಿಭಾಗೀಯ ಸಂಚಾರ ಅಧಿಕಾರಿ ಎಸ್.ಎಸ್. ಮುಜುಂದಾರ, ವಿಭಾಗೀಯ ತಾಂತ್ರಿಕ ಶಿಲ್ಪಿ ಪ್ರವೀಣ ಈಡೂರ, ಭದ್ರತಾ ಜಾಗೃತಾ ಧಿಕಾರಿ ಶ್ರೀಪತಿ ದೊಡ್ಡಲಿಂಗಣ್ಣವರ, ಘಟಕ ವ್ಯವಸ್ಥಾಪಕ ಬಸಪ್ಪ ಪೂಜಾರಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.