24*7 ಕಾಮಗಾರಿ 2 ವರ್ಷದಲ್ಲಿ ಪೂರ್ಣಗೊಳಿಸಿ
ನವದೆಹಲಿಯಲ್ಲಿ ಎಲ್ ಆ್ಯಂಡ್ ಟಿ ಅಧಿಕಾರಿಗಳಿಗೆ ಕೇಂದ್ರ ಸಚಿವ ಜೋಶಿ ಖಡಕ್ ಸೂಚನೆ
Team Udayavani, Jun 23, 2022, 11:38 AM IST
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರಕ್ಕೆ 24/7 ಕುಡಿಯುವ ನೀರಿನ ಸರಬರಾಜು ಯೋಜನೆಯನ್ನು ಮುಂದಿನ ಎರಡು ವರ್ಷಗಳ ಅವಧಿಯೊಳಗೆ ಸಂಪೂರ್ಣ ಕಾರ್ಯರೂಪಕ್ಕೆ ತರಬೇಕೆಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಹು-ಧಾಗೆ 24/7 ಕುಡಿಯುವ ನೀರಿನ ಸರಬರಾಜು ಕುರಿತು ಬುಧವಾರ ನವದೆಹಲಿಯಲ್ಲಿ ಎಲ್ ಆ್ಯಂಡ್ ಟಿ ಅಧಿಕಾರಿಗಳೊಂದಿಗೆ ಸವಿಸ್ತಾರವಾಗಿ ಚರ್ಚಿಸಿದ ಸಚಿವರು, ಸುಮಾರು 1,200 ಕೋಟಿ ರೂ. ವೆಚ್ಚದ ಯೋಜನೆ ಆಗಿದ್ದು, ವಿಶ್ವ ಬ್ಯಾಂಕ್‌ನಿಂದ ಶೇ. 67, ಮಹಾನಗರ ಪಾಲಿಕೆಯಿಂದ ಶೇ. 26, ರಾಜ್ಯ ಸರಕಾರದಿಂದ ಶೇ.7 ಹಣ ಹೂಡಿಕೆಯಾಗಲಿದೆ. ಎಲ್ ಆ್ಯಂಡ್ ಟಿ ಕಂಪನಿಯೊಂದಿಗೆ ಒಪ್ಪಂದವಾಗಿರುವ ಈ ಯೋಜನೆಯನ್ನು ಆದಷ್ಟು ಬೇಗ ಕಾರ್ಯರೂಪಕ್ಕೆ ತರಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಹು-ಧಾ ಮಹಾನಗರ ಪಾಲಿಕೆಯ ಕುಡಿಯುವ ನೀರು ಸರಬರಾಜು ಯೋಜನೆ ನಿರ್ವಹಣೆ ಮತ್ತು ಸುಧಾರಣೆ ಯೋಜನೆ ಕೈಗೆತ್ತಿಕೊಂಡಿರುವ ಎಲ್ ಆ್ಯಂಡ್ ಟಿ ಕಂಪನಿ ಮೇಲೆ ನಮಗೆ ವಿಶ್ವಾಸವಿಲ್ಲ. ಈ ಕಂಪನಿಯ ಅಧಿಕಾರಿಗಳು ವಾರ್ಡ್ ಜನರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ಸರಿಯಾಗಿ ನೀರು ಪೂರೈಸುತ್ತಿಲ್ಲವೆಂದು ಕಳೆದ ವಾರ ಪಾಲಿಕೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಸಚಿವ ಜೋಶಿಯವರು ತಕ್ಷಣ ಸ್ಪಂದಿಸಿ ನವದೆಹಲಿಯ ತಮ್ಮ ಕಚೇರಿಯಲ್ಲಿ ಸಭೆ ಕರೆದು, ವಿಶ್ವ ಬ್ಯಾಂಕ್ ನೆರವಿನ ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆಯಡಿ ಮಹಾನಗರದಲ್ಲಿ 24/7 ನಿರಂತರ ನೀರು ಸರಬರಾಜು ಕಾಮಗಾರಿ ಅನುಷ್ಠಾನದ ಕುರಿತು ನಿರ್ವಾಹಕರಾದ ಮೆ. ಲಾರ್ಸನ್ ಆ್ಯಂಡ್ ಟಬ್ರೂ (ಎಲ್ ಆ್ಯಂಡ್ ಟಿ) ಕಂಪನಿ ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡು ತಕ್ಷಣ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಅವಳಿ ನಗರದ ಜನತೆಗೆ ನೀರು ಸರಬರಾಜು ಮಾಡಬೇಕೆಂದು ಸೂಚಿಸಿದರು.
ಹುಬ್ಬಳ್ಳಿ-ಧಾರವಾಡದಲ್ಲಿ ದೊಡ್ಡ ಪ್ರಮಾಣದಲ್ಲಿ ಕೇಂದ್ರ ಸರಕಾರದ ಯೋಜನೆಗಳು ಜಾರಿಯಾಗುತ್ತಿವೆ. ಸ್ಮಾಟ್ ìಸಿಟಿ, ವಿಮಾನ ನಿಲ್ದಾಣ ಅಭಿವೃದ್ಧಿ, ಕೇಂದ್ರ ರಸ್ತೆ ನಿಧಿ ಅಡಿ ರಸ್ತೆ ನಿರ್ಮಾಣ, ತ್ವರಿತ ಬಸ್ ಸಾರಿಗೆ ಸೇವೆ ಯೋಜನೆಗಳು ಕಾರ್ಯರೂಪಕ್ಕೆ ಬಂದಿವೆ. ದೊಡ್ಡ ಕೈಗಾರಿಕೆಗಳೂ ಆಗಮಿಸುತ್ತಿವೆ. ಕೈಗಾರಿಕೆಗಳ ನೀರಿನ ಅವಶ್ಯಕತೆ ಸಮರ್ಪಕವಾಗಿ ಪೂರೈಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಕಾಮಗಾರಿ ವೇಳೆ ರಸ್ತೆ ಅಗೆದು ಪೈಪ್ ಲೈನ್ ಅಳವಡಿಸಿದ ಮೇಲೆ ಬೇಗ ರಸ್ತೆ ಮರು ನಿರ್ಮಿಸಬೇಕು. ಹಂತ ಹಂತವಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ವಾರ್ಡ್‌ವೊಂದರ ಕಾಮಗಾರಿ ಪೂರ್ಣಗೊಳಿಸಿದ ಮೇಲೆ ಇನ್ನೊಂದು ಕಡೆ ಕಾಮಗಾರಿ ಆರಂಭಿಸಬೇಕು. ಕಾಮಗಾರಿ ವೇಳೆ ಸಾರ್ವಜನಿಕರಿಗೆ ತೊಂದರೆಯಾಗಿ ದೂರುವಂತಾಗಬಾರದು ಎಂದು ಸೂಚನೆ ನೀಡಿದರು.
ಕರ್ನಾಟಕದ ಕೈಮಗ್ಗ ಮತ್ತು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕ ಅಮೃತ ದೇಸಾಯಿ, ಹು-ಧಾ ಮಹಾನಗರ ಪಾಲಿಕೆಯ ಮಹಾಪೌರ ಈರೇಶ ಅಂಚಟಗೇರಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪಾಲಿಕೆ ಆಯುಕ್ತ ಡಾ|ಗೋಪಾಲಕೃಷ್ಣ ಬಿ., ಎಲ್ ಆ್ಯಂಡ್ ಟಿಯ ಹಿರಿಯ ಅಧಿಕಾರಿಗಳು ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.