ಕಾಂಗ್ರೆಸ್‌ ನಾಯಕರಿಂದಲೇ ಗಲಭೆ ಸೃಷ್ಟಿ

ಡಿಕೆಶಿ ಕುಗ್ಗಿಸಲು ಪೈಪೋಟಿ ರೂಪದಲ್ಲಿ ಸಿದ್ದರಾಮಯ್ಯ ಹೇಳಿಕೆ

Team Udayavani, Jun 7, 2022, 1:17 PM IST

13

ಹುಬ್ಬಳ್ಳಿ: ಕೇಂದ್ರ-ರಾಜ್ಯದಲ್ಲಿ ಬಿಜೆಪಿ ನೀಡುತ್ತಿರುವ ಉತ್ತಮ ಆಡಳಿತದಿಂದ ಮುಂದೆಯೂ ಅಧಿಕಾರ ದೊರೆಯದೆ ನಿರುದ್ಯೋಗಿಗಳಾಗಿರಬೇಕಾಗುತ್ತದೆ ಎಂಬ ಆತಂಕದಿಂದ ಕಾಂಗ್ರೆಸ್‌ ನಾಯಕರು ಗಲಭೆ ಸೃಷ್ಟಿಗೆ ಮುಂದಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ನಡೆದ ಗಲಭೆಗಳು ಸಹ ಅಂದಿನ ಕಾಂಗ್ರೆಸ್‌ ಸರ್ಕಾರ ಎಬ್ಬಿಸಿದ ಗೊಂದಲಗಳೇ ಆಗಿದ್ದವು. ಟಿಪ್ಪು ಜಯಂತಿ ಆಚರಣೆ, ಗೋಹತ್ಯೆ ನಿಷೇಧಕ್ಕೆ ವಿರೋಧ, ಡಿ.ಜೆ. ಹಳ್ಳಿ ಗಲಭೆ ಇನ್ನಿತರ ಘಟನೆಗಳೇ ಇದಕ್ಕೆ ಉದಾಹರಣೆ ಎಂದರು.

ರಾಷ್ಟ್ರ-ರಾಜ್ಯದಲ್ಲಿ ಕೈಗೊಂಡ ಒಳ್ಳೆಯ ವಿಚಾರಗಳಿಗೆ, ಕೆಲಸಗಳಿಗೆ ಸಿದ್ದರಾಮಯ್ಯ ವಿರೋಧ ಮಾಡುತ್ತಲೇ ಬಂದಿದ್ದಾರೆ. ಈಗಲೂ ಅದನ್ನೇ ಮಾಡುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟದಲ್ಲಿ ಮೇಲುಗೈ ಸಾಧಿಸಲು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರನ್ನು ಕುಗ್ಗಿಸಲು ಪೈಪೋಟಿ ರೂಪದಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಡಿಕೆಶಿ ಮತ್ತು ಸಿದ್ದರಾಮಯ್ಯ ಆಂತರಿಕ ಕಚ್ಚಾಟದಿಂದ ಬೇಸತ್ತ ಬಿ.ಎಲ್‌. ಶಂಕರ, ವಿ.ಆರ್‌. ಸುದರ್ಶನ ಸೇರಿದಂತೆ ಅನೇಕರು ಕಾಂಗ್ರೆಸ್‌ನಿಂದ ಹೊರಬರುವ ಚಿಂತನೆಯಲ್ಲಿದ್ದಾರೆ ಎಂದರು.

ಹಿಂದುತ್ವಕ್ಕೆ ಬಿಜೆಪಿ ಬದ್ಧ: ಹಿಂದುತ್ವ ವಿಚಾರದಲ್ಲಿ ಬಿಜೆಪಿ ಇಂದಿಗೂ ಬದ್ಧವಾಗಿದೆ. ಯಾವುದೋ ಸಂಘಟನೆ ಹೇಳಿದಂತೆ ಸರ್ಕಾರ ಆಡಳಿತ ನಡೆಸಲು ಸಾಧ್ಯವಾಗುವುದಿಲ್ಲ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ, ಕಾಶಿ ಅಭಿವೃದ್ಧಿ, ಗಂಗಾರತಿ, ಕಾಶ್ಮೀರದಲ್ಲಿ 370ನೇ ಕಲಂ ರದ್ಧತಿ ಹೀಗೆ ನೀಡಿದ ವಾಗ್ಧಾನ ಈಡೇರಿಸಿದ್ದೇವೆ. ಹಿಂದುತ್ವ ವಿಚಾರದಲ್ಲಿ ಹಿಂದೆ ಸರಿಯುವ ಮಾತೇ ಇಲ್ಲ. ಪಠ್ಯಪುಸ್ತಕದಲ್ಲಿರುವ ಗೊಂದಲಗಳನ್ನು ನಿವಾರಿಸಲು ಸರ್ಕಾರ ಸಿದ್ಧವಿದೆ. ನಾರಾಯಣ ಗುರುಗಳು, ಭಗತ್‌ಸಿಂಗ್‌ ವಿಷಯವನ್ನು ಕೈಬಿಟ್ಟಿಲ್ಲ. ಪಠ್ಯಪುಸ್ತಕಗಳಲ್ಲಿನ ತಪ್ಪುಗಳ ಬಗ್ಗೆ ಸಲಹೆ ನೀಡುವುದನ್ನು ಬಿಟ್ಟು ರಾಜಕೀಯಗೊಳಿಸುವುದು ಸರಿಯಲ್ಲ ಎಂದರು.

ರಾಜ್ಯ ಸಚಿವ ಸಂಪುಟದ ವಿಸ್ತರಣೆ ವಿಚಾರದಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಸಂಪುಟ ವಿಸ್ತರಣೆ ಮುಖ್ಯಮಂತ್ರಿಯವರಿಗೆ ಬಿಟ್ಟ ವಿಚಾರ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಷಯವಾಗಿ ವಿಪಕ್ಷ ನಾಯಕರು ಇಲ್ಲಸಲ್ಲದ ಹೇಳಿಕೆ ನೀಡಿದ್ದಾರೆ. ಪಕ್ಷದ ಶಿಸ್ತು ಉಲ್ಲಂಘಿಸಿದವರು ಯಾರೇ ಇದ್ದರೂ ಅವರಿಗೆ ನೋಟಿಸ್‌ ನೀಡಿದ್ದೇವೆ. ಕಾನ್ಪುರದಲ್ಲಿ ಆಕ್ಷೇಪಾರ್ಹ ಹೇಳಿಕೆ ಕುರಿತಾಗಿ ಇಬ್ಬರು ನಾಯಕರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ತು ಸದಸ್ಯ ಪ್ರದೀಪ ಶೆಟ್ಟರ, ಮಹಾಪೌರ ಈರೇಶ ಅಂಚಟಗೇರಿ, ಉಪ ಮಹಾಪೌರ ಉಮಾ ಮುಕುಂದ, ಮುಖಂಡರಾದ ಅಶೋಕ ಕಾಟವೆ, ಬಸವರಾಜ ಕುಂದಗೋಳಮಠ, ಚಂದ್ರಶೇಖರ ಗೋಕಾಕ, ಸಂಜಯ ಕಪಟಕರ, ನಾಗೇಶ ಕಲಬುರ್ಗಿ, ದತ್ತಮೂರ್ತಿ ಕುಲಕರ್ಣಿ, ಸಂತೋಷ ಚವ್ಹಾಣ, ರವಿ ನಾಯಕ ಇನ್ನಿತರರಿದ್ದರು.

4 ಪರಿಷತ್‌, 3 ರಾಜ್ಯಸಭಾ ಸ್ಥಾನ ಬಿಜೆಪಿಗೆ: ವಿಧಾನ ಪರಿಷತ್ತು ನಾಲ್ಕು ಕ್ಷೇತ್ರಗಳು ಹಾಗೂ ರಾಜ್ಯಸಭೆಯ ಮೂರು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ರಾಜ್ಯಸಭೆಯ ಮೂರು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಕಾಂಗ್ರೆಸ್‌-ಜೆಡಿಎಸ್‌ ಗೊಂದಲಕ್ಕೆ ಬಿದ್ದಿವೆ. ಆದರೆ, ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದು, ಅಡ್ಡಮತ-ಕಳ್ಳಮತಗಳ ಅವಶ್ಯಕತೆ ಇಲ್ಲ. ಹೇಗೆ ಗೆಲ್ಲುತ್ತೇವೆ ಕಾಯ್ದು ನೋಡಿ. ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳಲ್ಲಿಯೂ ಪಕ್ಷ ಗೆಲುವು ಸಾಧಿಸಲಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರ ಗೆಲುವು ನಿಶ್ಚಿತ. ಪರಿಷತ್ತಿನಲ್ಲಿ ಅವರ ಅನುಭವ ಬಳಸಿಕೊಳ್ಳಲು ಮುಂದಾಗಿದ್ದೇವೆ. ಅಧಿಕಾರ ಇದ್ದಾಗ ಶಿಕ್ಷಕರು, ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಯತ್ನಿಸಿದ್ದರು. ಅಧಿಕಾರ ಇಲ್ಲದಾಗ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸಿದ ಹೊರಟ್ಟಿವರು ಈ ಬಾರಿಯೂ ಗೆಲುವು ಸಾಧಿಸುವುದು ಖಚಿತವಾಗಿದೆ. ಕ್ಷೇತ್ರದ ಮೂರು ಕಡೆ ಪ್ರಚಾರ ಮಾಡಿದ್ದೇನೆ ಎಂದು ಕಟೀಲ್‌ ಹೇಳಿದರು.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.