ಹೊಸ ಬಸ್‌ ನಿಲ್ದಾಣದಲ್ಲಿ ಕಲಾಕೃತಿಗಳ ಸೊಬಗು

Team Udayavani, Mar 7, 2021, 5:12 PM IST

Elegance at the new bus stop

ಹುಬ್ಬಳ್ಳಿ: ಪ್ರಯಾಣಿಕರು ಮೂಗು ಮುರಿಯುವಂತಿದ್ದ ಗೋಕುಲ ರಸ್ತೆಯ ಹೊಸ ಬಸ್‌ ನಿಲ್ದಾಣ ಇದೀಗ ಮದುವಣಗಿತ್ತಿಯಂತೆ ಶೃಂಗಾರಗೊಳ್ಳುತ್ತಿದೆ. ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕ ಮನಸ್ಸಿಗೆ ಮುದ ನೀಡುವಂತಹ ದೇಶಿ ಸಂಸ್ಕೃತಿ, ಪರಿಸರ, ಕೃಷಿ, ಸ್ವತ್ಛತೆ ವಿವಿಧ ಜಾಗೃತಿ ಮೂಡಿಸುವಂತಹ ಬಣ್ಣ ಬಣ್ಣದ ಕಲಾಕೃತಿಗಳು ಕಣ್ಮನ ಸೆಳೆಯುತ್ತಿವೆ.

ಬಸ್‌ ನಿಲ್ದಾಣದ ಗೋಡೆಗಳಿಗೆ ಅಂದವಾದ ಕಲಾತ್ಮಕ ಚಿತ್ರಗಳನ್ನು ಬಿಡಿಸುವ ಕಾರ್ಯ ನಡೆಯುತ್ತಿದೆ. ಮನ ಸೆಳೆಯುವ ಬಣ್ಣ ಬಣ್ಣದ ಚಿತ್ರಗಳಿಂದ ನಿಲ್ದಾಣದ ಚಿತ್ರಣ ಬದಲಾಗುತ್ತಿದ್ದು, ರೆವಲ್ಯೂಶನ್‌ Êಮೈಂಡ್‌ ಎನ್ನುವ ವಿದ್ಯಾರ್ಥಿಗಳ ಸಮೂಹ ಈ ಕಾರ್ಯಕ್ಕೆ ಕೈ ಜೋಡಿಸಿದ್ದು, ಇವರ ಸೇವೆಗೆ ಸಂಸ್ಥೆ ಪೂರಕ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದೆ. ಪರಿಣಾಮ ಹೊಸ ಬಸ್‌ ನಿಲ್ದಾಣ ಸ್ವರೂಪ ಬದಲಾಗುತ್ತಿದೆ.

ಕಣ್ಮನ ಸೆಳೆಯುವ ಚಿತ್ತಾರ: ನಿಲ್ದಾಣದ ಪ್ರವೇಶ ದ್ವಾರದಲ್ಲಿ ನಮ್ಮ ಹುಬ್ಬಳ್ಳಿ ಎನ್ನುವ ಘೋಷಣೆ ಇಲ್ಲಿನ ಸೊಗಡನ್ನು ಬಿಂಬಿಸುತ್ತಿದೆ. ಇನ್ನು ಯಕ್ಷಗಾನ, ಭರತನಾಟ್ಯದಂತಹ ಚಿತ್ರಗಳನ್ನು ಚಿತ್ರಿಸಲಾಗಿದೆ. ಗೋಡೆಯುದ್ದಕ್ಕೂ ಬಿಡಿಸಿರುವ ಕಲಾತ್ಮಕ ಚಿತ್ರಗಳು ಮನಮೋಹಕವಾಗಿದೆ. ಈ ಮೂಲಕ ಈ ಭಾಗದ ಗ್ರಾಮೀಣ ಬದುಕನ್ನು ತೋರಿಸುವ ಚಿತ್ರಗಳಿವೆ.

ಇನ್ನೂ ನಿಲ್ದಾಣದ ಗೋಡೆಗಳಲ್ಲಿ ಪರಿಸರ, ಕಾಡು, ನಿಲ್ದಾಣ ಸ್ವತ್ಛತೆ, ನೀರು ಮಿತ ಬಳಿಕೆ, ಪ್ಲಾಸ್ಟಿಕ್‌ ಮುಕ್ತ, ಪ್ರಾಣಿ-ಪಕ್ಷಿ ಸಂರಕ್ಷಣೆ ಕುರಿತಾದ ಜಾಗೃತಿ ಕಲಾಕೃತಿಗಳು ಮೂಡಿ ಬಂದಿವೆ. ನಗರ ಹಾಗೂ ಸ್ಥಳೀಯ ಗ್ರಾಮೀಣ ಬದುಕನ್ನು ಕಟ್ಟಿಕೊಡುವ ಚಿತ್ರಗಳಿವೆ. ಕೋವಿಡ್ ಸೋಂಕಿನಿಂದ ದೂರವಿರಲು ಕೈಗೊಳ್ಳಬಹುದಾದ ಜಾಗೃತಿ, ಕೋವಿಡ್‌-19 ವಿರುದ್ಧ ಹೋರಾಡುತ್ತಿರುವ ಸೇನಾನಿಗಳಿಗೆ ಗೌರವ ಸಲ್ಲಿಸುವ ಚಿತ್ರವಿದೆ. ಇನ್ನೂ ಹತ್ತು ಹಲವು ವಿಷಯಗಳ ಮೇಲೆ ಚಿತ್ರಗಳು ಕಣ್ಮನ ಸೆಳೆಯುತ್ತಿವೆ.

ಕೈ ಜೋಡಿಸಿದ ವಿದ್ಯಾರ್ಥಿಗಳ ತಂಡ: ಸಮಾಜಕ್ಕೆ ತಮ್ಮದಾದ ಸೇವೆ ನೀಡಲು ಕಟ್ಟಿಕೊಂಡಿರುವ ರೆವಲ್ಯೂಶನ್‌ ಮೈಂಡ್‌ ಎನ್ನುವ ವಿದ್ಯಾರ್ಥಿಗಳ ತಂಡ ಈ ಕಾರ್ಯಕ್ಕೆ ಜೋಡಿಸಿದೆ. ನಿತ್ಯ ಸಾವಿರಾರು ಜನರು ಬಂದು ಹೋಗುವ ಸ್ಥಳಕ್ಕೆ ಮೆರಗು ತರಬೇಕೆನ್ನುವ ಕಾರಣದಿಂದ ಈ ತಂಡದ ಪ್ರಮುಖರು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ ಅವರನ್ನು ಭೇಟಿಯಾಗಿ ತಮ್ಮ ಉದ್ದೇಶ ತಿಳಿಸಿದಾಗ, ಯುವ ಸಮೂಹದ ಕಾರ್ಯಕ್ಕೆ ಸಕರಾತ್ಮಕ ಸ್ಪಂದನೆ ನೀಡಿದ್ದಾರೆ.

ಒಂದು ದಿನ ಬಸ್‌ ನಿಲ್ದಾಣ ತಡಕಾಡಿ ತಮ್ಮಿಂದ ಇದು ಸಾಧ್ಯ ಎಂದು ಭರವಸೆ ನೀಡಿದ ನಂತರವಷ್ಟೇ ಒಂದೊಳ್ಳೆ ಕಾರ್ಯ ಆರಂಭವಾಗಿದ್ದು, ಶನಿವಾರ ಹಾಗೂ ರವಿವಾರ ವಿದ್ಯಾರ್ಥಿಗಳು ಬಂದು ಈ ಕಾಯಕದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದಾರೆ. ಒಟ್ಟಾರೆ ಸಂಘಟನಾತ್ಮಕ ಕಾರ್ಯದಿಂದಹೊಸ ಬಸ್‌ ನಿಲ್ದಾಣದ ಚಿತ್ರಣ ಸಂಪೂರ್ಣ ಬದಲಾಗುತ್ತಿದೆ. ಇಷ್ಟೊಂದು ಸುಂದರವಾಗಿ ಬಿಡಿಸಿರುವ ಚಿತ್ರಗಳು, ನಿಲ್ದಾಣದ ಸ್ವತ್ಛತೆಯಲ್ಲಿ ಪ್ರಯಾಣಿಕರ ಪಾತ್ರ ದೊಡ್ಡದಿದ್ದು, ಇದನ್ನು ಉಳಿಸಿಕೊಂಡು ಹೋಗುವ ಕೆಲಸ ಆಗಬೇಕೆನ್ನುವುದು ಸಂಸ್ಥೆಯ ಅಧಿಕಾರಿಗಳ ಹಾಗೂ ರೆವಲ್ಯೂಶನ್‌ ಮೈಂಡ್‌ ತಂಡದ ಸದಸ್ಯರ ಅಭಿಪ್ರಾಯವಾಗಿದೆ.

ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.