ಉತ್ತಮ ಆಹಾರ ನಿಯಮ ಅವಶ್ಯ: ಡಾ| ಪಂಕಜಾ
ದೇವರ ನಾಮಸ್ಮರಣೆ ಮತ್ತು ಅಧ್ಯಾತ್ಮಿಕತೆ ರೂಢಿಸಿಕೊಳ್ಳಬೇಕು.
Team Udayavani, Oct 29, 2021, 4:17 PM IST
ಹುಬ್ಬಳ್ಳಿ: ಪ್ರತಿಯೊಬ್ಬರು ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯ ಉತ್ತಮವಾಗಿರಿಸಿಕೊಳ್ಳಬೇಕು. ನಿಯಮಿತ ಆಹಾರ ಸೇವನಾ ಕ್ರಮ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯ ಭಾಗ್ಯ ಹೊಂದಬೇಕೆಂದು ತಜ್ಞ ವೈದ್ಯೆ ಡಾ| ಪಂಕಜಾ ಬ್ಯಾಕೋಡಿ ಹೇಳಿದರು.
ನವನಗರದ ಚಿಕ್ಕೇನಕೊಪ್ಪ ಶ್ರೀ ಚನ್ನವೀರ ಶರಣರ ಅಂಧರ ಕಲ್ಯಾಣ ಆಶ್ರಮದಲ್ಲಿ ಧಾರವಾಡದ ವಿವೇಕ ಜಾಗೃತ ಬಳಗ ಮತ್ತು ಅಮರಗೋಳದ ಅಶ್ವಮೇಧ ಪಾರ್ಕ್ ಹಿರಿಯ ನಾಗರಿಕರ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಆಧ್ಯಾತ್ಮಿಕ ಚಿಂತನ ಶಿಬಿರದಲ್ಲಿ ಆರೋಗ್ಯ ಮತ್ತು ಆಧ್ಯಾತ್ಮ ಕುರಿತು ಅವರು ಉಪನ್ಯಾಸ ನೀಡಿದರು.
ಪ್ರತಿಯೊಬ್ಬರು ದೈಹಿಕ ಶ್ರಮದೊಂದಿಗೆ ಯೋಗ ಮತ್ತು ಪ್ರಾಣಾಯಾಮ ರೂಢಿಸಿಕೊಳ್ಳಬೇಕು. ದೈನಂದಿನ ಜೀವನದಲ್ಲಿ ಉದ್ವೇಗಗಳಿಂದ ಹಲವಾರು ಕಾಯಿಲೆಗಳು ಬರುತ್ತಿದ್ದು, ಅವುಗಳನ್ನು ಎದುರಿಸಲು ತಜ್ಞರ ಮಾರ್ಗದರ್ಶನದಲ್ಲಿ ಸೂಕ್ತ ಔಷಧಿಗಳನ್ನು ತೆಗೆದುಕೊಳ್ಳುವುದರೊಂದಿಗೆ ದೇವರ ನಾಮಸ್ಮರಣೆ ಮತ್ತು ಅಧ್ಯಾತ್ಮಿಕತೆ ರೂಢಿಸಿಕೊಳ್ಳಬೇಕು. ಒಳ್ಳೆಯ ಗ್ರಂಥಗಳನ್ನು ಓದುವುದರಿಂದ ಮಾನಸಿಕ ನೆಮ್ಮದಿ ದೊರೆಯುತ್ತದೆ ಎಂದರು.
ಲೆಫ್ಟಿನೆಂಟ್ ಕರ್ನಲ್ ಪುಂಡಲಿಕಪ್ಪ ಮೇದಾರ ಮತ್ತು ಪ್ರಾಧ್ಯಾಪಕ ಪ್ರೊ| ಎಸ್.ಎಸ್. ಮೊಟೆಬೆನ್ನೂರ ಅವರು ವಿವೇಕ ಜಾಗೃತ ಬಳಗದ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು. ನಿವೃತ್ತ ಗ್ರಂಥಪಾಲಕ ಬಿ.ಎಸ್. ಮಾಳವಾಡ ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಂದೇಶಗಳ ಕುರಿತು ಮಾತನಾಡಿದರು.
ಎಸ್.ಎನ್. ಛಬ್ಬಿ ಅಧ್ಯಕ್ಷತೆ ವಹಿಸಿದ್ದರು. ಮಹಾನಗರ ಪಾಲಿಕೆ 29ನೇ ವಾರ್ಡ್‌ನ ನೂತನ ಸದಸ್ಯ ಮಂಜುನಾಥ ಬುರ್ಲಿ ಮತ್ತು ವಿದ್ಯಾರ್ಥಿನಿ ಅಂಕಿತಾ ಎಂ. ಹುಂಡೇಕರ ಅವರನ್ನು ಗೌರವಿಸಲಾಯಿತು. ಸ್ವಾಮಿ ವಿವೇಕಾನಂದರ ಕುರಿತಾದ ಗ್ರಂಥಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಛಾಯಾ ಶಿಂಧೆ ಸ್ವಾಗತಿಸಿದರು. ಎಂ.ವೈ. ಜಯಪ್ಪನವರ ಪರಿಚಯಿಸಿದರು. ಶಿಲ್ಪಾ ಎಂ. ಸೋಮವಾರ ನಿರೂಪಿಸಿದರು. ಕಲ್ಲಪ್ಪ ಮರದಣ್ಣವರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.