ಅಪ್ಪು ಅಭಿಮಾನಿಯಿಂದ ನೇತ್ರ ಶಸ್ತ್ರ ಚಿಕಿತ್ಸೆ

ಅಭಿಮಾನಿಗಳಿಗಾಗಿ ಜೇಮ್ಸ್‌ ಚಿತ್ರ ವೀಕ್ಷಿಸಲು 200 ಟಿಕೆಟ್‌ ಖರೀದಿ

Team Udayavani, Mar 17, 2022, 12:12 PM IST

7

ಹುಬ್ಬಳ್ಳಿ: ಪುನೀತ ರಾಜಕುಮಾರ ಅವರ ಕಟ್ಟಾ ಅಭಿಮಾನಿ ರಾಘವೇಂದ್ರ ವದ್ದಿ ಪುನೀತ ರಾಜಕುಮಾರ ಅವರ ಜನ್ಮದಿನ ಹಾಗೂ ಕೊನೆ ಚಿತ್ರ ಜೇಮ್ಸ್‌ ಚಿತ್ರದ ಪ್ರಯುಕ್ತ ನೂರು ಜನರನ್ನು ಗುರುತಿಸಿ ಅವರ ಕಣ್ಣಿನ ದೃಷ್ಟಿ ಸರಿಪಡಿಸಲು ಶಸ್ತ್ರ ಚಿಕಿತ್ಸೆ ಮಾಡಿಸಿ ಅಪ್ಪು ಅವರ ಮೇಲಿನ ಅಭಿಮಾನ ವ್ಯಕ್ತಪಡಿಸಿದ್ದಾನೆ.

ದೃಷ್ಟಿ ಸರಿಯಾದ ನಂತರ ತನ್ನ ಅಪ್ಪುವಿನ ಚಿತ್ರ ನೋಡಬೇಕು ಎನ್ನುವ ಕಾರಣಕ್ಕೆ ಈ ನೂರು ಜನರಿಗಾಗಿ ಟಿಕೆಟ್‌ ಪಡೆದಿದ್ದಾರೆ. ಚಿತ್ರ ವೀಕ್ಷಿಸಿದ ನಂತರ ಅಪ್ಪು ಹೆಸರಲ್ಲಿ ಒಂದು ಸಸಿ ನೀಡಿ ಮನೆಯ ಮುಂದೆ ಬೆಳೆಸಬೇಕೆನ್ನುವ ಪರಿಸರ ಪ್ರಜ್ಞೆ ಮೂಡಿಸುವ ಕಾರ್ಯ ಹಮ್ಮಿಕೊಂಡಿದ್ದಾರೆ.

ಅಪ್ಪು ಅವರ ಭಾವಚಿತ್ರ ಮನೆಯಲ್ಲಿಟ್ಟು ಅವರ ಮಾರ್ಗದಲ್ಲಿ ನಡೆಯುವಂತೆ ತಿಳಿಸುವ ಕೆಲಸ ಮಾಡಲಿದ್ದಾರೆ. 200 ಟಿಕೆಟ್‌ಗಳನ್ನು ಅವರ ಅಭಿಮಾನಿಗಳಿಗೆ ಉಚಿತವಾಗಿ ಹಂಚಲಿದ್ದಾರೆ. ಅಪ್ಸರಾ ಚಿತ್ರ ಮಂದಿರಕ್ಕೆ ಜೇಮ್ಸ್‌ ವೀಕ್ಷಿಸಲು ಬರುವ ಪ್ರತಿಯೊಬ್ಬರಿಗೆ ಉಪ್ಪಿಟ್ಟು-ಸಿರಾ ವಿತರಿಸಲಿದ್ದಾರೆ. ಅಪ್ಪು ಅವರಿಗೆ ಚಿಕನ್‌ ಬಿರಿಯಾನಿ ಇಷ್ಟ ಎನ್ನುವ ಕಾರಣಕ್ಕೆ ಮಧ್ಯಾಹ್ನ ಚಿಕನ್‌ ಬಿರಿಯಾನಿ ಹಂಚಲಿದ್ದಾರೆ. ಈಗಾಗಲೇ ಸ್ವಂತ ಖರ್ಚಿನಿಂದ ಚಿತ್ರ ಮಂದಿರವನ್ನು ಅಪ್ಪು ಅವರ ಚಿತ್ರ ಇರುವ ಪರಪರಿಗಳಿಂದ ಶೃಂಗರಿಸಿದ್ದಾರೆ. ಇಲ್ಲಿನ ಅಂಚಟಗೇರಿ ನಿವಾಸಿಯಾಗಿರುವ ರಾಘು ಜೀವನಕ್ಕೆ ಸಣ್ಣದೊಂದು ಬಟ್ಟೆ ಅಂಗಡಿ ಇಟ್ಟುಕೊಂಡಿದ್ದಾರೆ. ಬರುವ ಆದಾಯದಲ್ಲಿ ಒಂದಿಷ್ಟು ದೇವರಿಗೆ ತೆಗೆದಿಡುವ ರೀತಿಯಲ್ಲಿ ಅಪ್ಪು ಅವರ ಚಿತ್ರದ ಬಿಡುಗಡೆ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕ್ಕೆ ಬಳಸುವುದನ್ನು ರೂಢಿಸಿಕೊಂಡಿದ್ದಾರೆ. ಇದೀಗ ಸ್ನೇಹಿತರಿಂದ ಸಾಲ ಮಾಡಿ ಕಡಿಮೆ ಅವಧಿಯಲ್ಲಿ 100 ಜನರಿಗೆ ಕಣ್ಣಿನ ಪೊರೆ ಚಿಕಿತ್ಸೆ ಕಾರ್ಯ ಪೂರ್ಣಗೊಳಿಸಿದ್ದಾರೆ.

ಅಪ್ಪು ಅವರ ಅಭಿಮಾನಕ್ಕಾಗಿ ಜೈ ರಾಜವಂಶ ಎನ್ನುವ ಸಂಸ್ಥೆ ಆರಂಭಿಸಿ ವಿವಿಧ ಸಾಮಾಜಿಕ ಕಾರ್ಯ ಮಾಡುತ್ತಿದ್ದಾರೆ. ಎದೆ ಮೇಲೆ ಅಪ್ಪು ಅವರ ಭಾವಚಿತ್ರ ಟ್ಯಾಟೋ ಹಾಕಿಸಿಕೊಂಡಿದ್ದಾರೆ. ಯುವರತ್ನ ಚಿತ್ರ ಬಿಡುಗಡೆ ಸಂದರ್ಭದಲ್ಲಿ 50 ವಿಕಲಚೇತನರಿಗೆ ಕೃತಕ ಕಾಲು ನೀಡಿದ್ದರು. ರಾಜಕುಮಾರ ಚಿತ್ರ ಬಿಡುಗಡೆ ಸಂದರ್ಭದಲ್ಲಿ ಪುನೀತ ರಾಜಕುಮಾರ ಅವರ ಕಟೌಟ್‌ಗೆ 100 ಲೀಟರ್‌ ಹಾಲು ಸುರಿದು ಅಭಿಮಾನ ವ್ಯಕ್ತಪಡಿಸಿದ್ದರು. ಇಂತಹ ಕಾರ್ಯಕ್ಕೆ ಪುನೀತ ಅಸಮಾಧಾನ ವ್ಯಕ್ತಪಡಿಸಿ ಹಾಲು ಸುರಿಯುವ ಬದಲು ಯಾರಿಗಾದರೂ ದಾನ ಮಾಡಿ ಎಂದು ಮನವಿ ಮಾಡಿದ್ದರು. ಹುಬ್ಬಳ್ಳಿಗೆ ಬಂದ ಸಂದರ್ಭದಲ್ಲಿ ಅವರ ನಿವಾಸಕ್ಕೆ ಹೋಗಿ ಮನೆಯವರೆಲ್ಲರನ್ನು ಭೇಟಿಯಾಗಿದ್ದರು. ಇಂತಹ ಸರಳತೆಯಿಂದ ಪುನೀತ ಪ್ರತಿಯೊಬ್ಬರ ಮನೆ ಮಗನಾಗಿದ್ದಾರೆ ಎನ್ನುತ್ತಾರೆ ರಾಘು ವದ್ದಿ.

ಅಪ್ಪು ಹಾಗೂ ಅವರ ಕುಟುಂಬದವರು ನೇತ್ರದಾನಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ಇಹಲೋಕ ತ್ಯಜಿಸಿದ ನಂತರ ನಾಲ್ವರ ಬದುಕಿಗೆ ಬೆಳಕಾಗಿದ್ದಾರೆ. ಅವರು ತೋರಿಸಿರುವ ಸಾಮಾಜಿಕ ಕಾಳಜಿಯ ಮಾರ್ಗದಲ್ಲಿ ನಡೆಯಬೇಕು ಎನ್ನುವ ಕಾರಣಕ್ಕೆ ದುಡಿಯುವ ಹಣದಲ್ಲಿ ಒಂದಿಷ್ಟನ್ನು ಅವರ ಹೆಸರಲ್ಲಿ ತೆಗೆದಿಟ್ಟು ಈ ಕೆಲಸ ಮಾಡುತ್ತಿದ್ದೇನೆ.

ರಾಘು ವದ್ದಿ, ಅಪ್ಪು ಅಭಿಮಾನಿ

ಟಾಪ್ ನ್ಯೂಸ್

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.