ಬದಲಾಗುತ್ತಿರುವ ತಂತ್ರಜ್ಞಾನ ಕೌಶಲ ರೂಢಿಸಿಕೊಳ್ಳಿ: ಡಾ| ಎ.ಎಸ್. ಬಾಲಸುಬ್ರಹ್ಮಣ್ಯ
ಇಂಟರ್ನೆಟ್ ಕ್ರಾಂತಿಯಿಂದ ಮಾಧ್ಯಮ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ; ಅವಕಾಶ ಸದ್ಬಳಕೆ ಮಾಡಿಕೊಳ್ಳುವ ಚಾಕಚಕ್ಯತೆ ಅತ್ಯವಶ್ಯ
Team Udayavani, Jun 13, 2022, 10:14 AM IST
ಹುಬ್ಬಳ್ಳಿ: ಇಂಟರ್‌ನೆಟ್ ಕ್ರಾಂತಿಯಿಂದ ಮಾಧ್ಯಮ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಯಾಗಿದೆ. ಇದರೊಂದಿಗೆ ಹಲವು ಅವಕಾಶಗಳನ್ನು ಕೂಡ ಸೃಷ್ಟಿಸಿದೆ. ಪತ್ರಿಕೋದ್ಯಮ ವಿದ್ಯಾರ್ಥಿಗಳು ಹಾಗೂ ಯುವ ಪತ್ರಕರ್ತರು ಈ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ಚಾಕಚಕ್ಯತೆ ಬೆಳೆಸಿಕೊಳ್ಳಬೇಕು ಎಂದು ಕವಿವಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಮುಖ್ಯಸ್ಥರಾದ ಡಾ| ಎ.ಎಸ್. ಬಾಲಸುಬ್ರಹ್ಮಣ್ಯ ಹೇಳಿದರು.
ರವಿವಾರ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ಮಾಧ್ಯಮ ವೃತ್ತಿ ಕೌಶಲಾಭಿವೃದ್ಧಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ತಂತ್ರಜ್ಞಾನದಲ್ಲಾದ ಬದಲಾವಣೆಯಿಂದ ಮಾಧ್ಯಮ ಕ್ಷೇತ್ರದ ಬೆಳವಣಿಗೆ ಊಹೆಗೂ ನಿಲುಕುವುದಿಲ್ಲ. ಕಳೆದ ಮೂರು ದಶಕಗಳಲ್ಲಿ ಗಣನೀಯ ಬದಲಾವಣೆ ಕಂಡಿದೆ. ಇತ್ತೀಚಿನ ಹೊಸ ಆವಿಷ್ಕಾರ ಒಟಿಟಿ, ವೆಬ್ ಸಿರೀಸ್ ಅವಕಾಶಗಳ ಗುಚ್ಛವನ್ನೇ ನೀಡಿದೆ. ಇವುಗಳಿಗೆ ಪೂರಕವಾಗಿ ಪತ್ರಕರ್ತರು ಹೊಸತನ್ನು ರೂಢಿಸಿಕೊಳ್ಳುವ ಅವಶ್ಯಕತೆ ತಂದೊಡ್ಡಿವೆ. ಕಲಿಕೆಯನ್ನು ಕೇವಲ ಪತ್ರಿಕೆ, ನ್ಯೂಸ್ ಚಾನೆಲ್‌ಗೆ ಸೀಮಿತಗೊಳಿಸದೆ ವಿಸ್ತರಿಸಿಕೊಳ್ಳಬೇಕು. ಮಾಧ್ಯಮಗಳು ಸಮಾಜದಲ್ಲಿ ವಿಚಾರ, ವಿಮರ್ಶೆಯನ್ನು ಹುಟ್ಟುಹಾಕಬೇಕು. ನಿರ್ದಿಷ್ಟ ವಿಷಯವನ್ನು ಜನರಿಗೆ ನೇರವಾಗಿ ಮುಟ್ಟಿಸುವ ಕೆಲಸ ಆಗಬೇಕು. ವಿಷಯಗಳಲ್ಲಿ ಪತ್ರಕರ್ತನ ಅಭಿಪ್ರಾಯಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡಬಾರದು ಎಂದರು.
ಇಂಟರ್‌ನೆಟ್ ಬಳಕೆ ವಿಸ್ತಾರಗೊಳ್ಳುತ್ತಿದ್ದಂತೆ ಸಾಮಾಜಿಕ ಮಾಧ್ಯಮಗಳೂ ಸುದ್ದಿಮೂಲಗಳಾಗಿ ಬದಲಾಗಿವೆ. ಜನಪ್ರತಿನಿಧಿಗಳು, ಪ್ರಮುಖರು ಮಾಡುವ ಟ್ವೀಟ್‌ಗಳು ಇಂದು ಸಹಜವಾಗಿಯೇ ಎಲ್ಲ ಪತ್ರಿಕೆಗಳಲ್ಲಿ ಸುದ್ದಿಗಳಾಗುತ್ತಿವೆ. ಇದು ತಂತ್ರಜ್ಞಾನದಿಂದ ಆಗಿರುವ ಬದಲಾವಣೆ. ಸಾಮಾಜಿಕ ಜಾಲತಾಣಗಳಿಂದ ಇಂದು ಸುದ್ದಿಗಳು ಹೆಚ್ಚು ವೇಗವಾಗಿ ಜನರನ್ನು ತಲುಪುತ್ತಿವೆ. ಈ ಸವಾಲುಗಳನ್ನು ಮೆಟ್ಟಿ ನಿತ್ಯವೂ ಪತ್ರಿಕೆಗಳನ್ನು ಕೊಂಡುಕೊಳ್ಳುವಂತೆ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಕೇಶವ ಪ್ರೊಡಕ್ಷನ್ ಪ್ರೈವೇಟ್ ಲಿಮಿಟೆಡ್ ಸಿಇಒ ರಿಚಾ ಖಂಡೇಲವಾಲ್ ಭಟ್ ಮಾತನಾಡಿ, ಇಂಟರ್ ನೆಟ್ ಕ್ರಾಂತಿಯಿಂದಾಗಿ ಸಣ್ಣ ನಗರದಲ್ಲಿದ್ದರೂ ವಿಪುಲ ಅವಕಾಶಗಳನ್ನು ಪಡೆಯಬಹುದಾಗಿದೆ. ಬದಲಾಗುತ್ತಿರುವ ತಂತ್ರಜ್ಞಾನದ ಕೌಶಲವನ್ನು ಮೈಗೂಡಿಸಿಕೊಳ್ಳುವ ಕೆಲಸ ಆಗಬೇಕು. ಇದರಿಂದ ಪತ್ರಿಕೆಗಳಲ್ಲಿ ಅಷ್ಟೇ ಅಲ್ಲದೇ ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡು ಹಲವು ಉದ್ಯೋಗ ಸೃಷ್ಟಿಸಿಕೊಳ್ಳಬಹುದು. ಯುಟ್ಯೂಬ್ ನಲ್ಲಿ ವಿಡಿಯೊ ಅಪ್‌ಲೋಡ್ ಮಾಡುವುದು, ವಿಡಿಯೊ ಎಡಿಟಿಂಗ್, ವೆಬ್ ಸಿರೀಸ್‌ಗಳಿಗೆ ಹಿನ್ನೆಲೆ ಧ್ವನಿ ಹಾಗೂ ಸಂಭಾಷಣೆ ಬರೆಯುವುದು ಸೇರಿದಂತೆ ಪತ್ರಿಕೋದ್ಯಮ ಮುಗಿಸಿದವರಿಗೆ ಹಲವು ಅವಕಾಶಗಳು ಲಭ್ಯವಿದೆ ಎಂದರು.
ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ವಿನಯ ಜವಳಿ ಮಾತನಾಡಿ, ಎಲ್ಲಾ ಬದಲಾವಣೆಗೆ ತಂತ್ರಜ್ಞಾನ ಕಾರಣವಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿ ಆಗುತ್ತಿರುವ ಪ್ರಗತಿ ಹಾಗೂ ಬದಲಾವಣೆಯಂತೆ ಪತ್ರಿಕೋದ್ಯಮದಲ್ಲೂ ನಡೆಯುತ್ತಿದೆ. ಸಾಮಾಜಿಕ ಜಾಲತಾಣ ಎಷ್ಟೇ ಬೆಳೆದರೂ ಜನರಲ್ಲಿ ನಿಖರತೆಯ ಪ್ರಶ್ನೆ ಎದುರಾಗುತ್ತದೆ. ಆಗ ಪತ್ರಿಕೆ, ಸುದ್ದಿವಾಹಿನಿಗಳು ಅಂತಿಮ ಎನ್ನುವ ಭಾವನೆ ಜನರಲ್ಲಿ ಮೂಡಿದೆ. ಇದನ್ನು ಉಳಿಸಿಕೊಳ್ಳುವ ಕೆಲಸ ಆಗಬೇಕು ಎಂದು ಹೇಳಿದರು.
ಪತ್ರಕರ್ತರ ಸಂಘದ ಅಧ್ಯಕ್ಷ ಲೋಚನೇಶ ಹೂಗಾರ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಸುಶೀಲೇಂದ್ರ ಕುಂದರಗಿ, ಖಜಾಂಚಿ ಬಸವರಾಜ ಹೂಗಾರ ಸೇರಿದಂತೆ ಮಂಡಳಿ ಪದಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.