![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 9, 2024, 5:44 PM IST
ಉದಯವಾಣಿ ಸಮಾಚಾರ
ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣ ವಿಶ್ವದರ್ಜೆ ವಿಮಾನ ನಿಲ್ದಾಣವಾಗಿ ಮಾರ್ಪಾಟಾಗಲು ಹಸಿರು ನಿಶಾನೆ ದೊರೆತಿದೆ. ಮಾ.10ರಂದು ಹೊಸ ಟರ್ಮಿನಲ್ ಶಂಕುಸ್ಥಾಪನೆಯನ್ನು ಪ್ರಧಾನಿ ಮೋದಿಯವರು ವರ್ಚುವಲ್ ಮೂಲಕ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ಸಚಿವ ಜೋಶಿಯವರ ಆಶಯದಂತೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡ ನಿರ್ಮಾಣಕ್ಕೆ ಪ್ರಧಾನಿ
ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ದೇಶದಲ್ಲಿ ಒಟ್ಟು 9811 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ಸೇರಿದಂತೆ 14 ಇತರೆ ವಿಮಾನ ನಿಲ್ದಾಣ ಯೋಜನೆಗಳ ಉದ್ಘಾಟನೆ/ ಶಂಕುಸ್ಥಾಪನೆ ಕಾರ್ಯವನ್ನು ಅಂದು ಬೆಳಗ್ಗೆ 11 ಗಂಟೆಗೆ ಉತ್ತರ ಪ್ರದೇಶದ ಅಜಂಗಢದಿಂದ ವಚ್ಯುìವಲ್ ಮೂಲಕ ನೆರವೇರಿಸಲಿದ್ದಾರೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ವಿಮಾನ ನಿಲ್ದಾಣ ಅಭಿವೃದ್ಧಿ ಕಾರ್ಯ ಕೈಗೊಂಡಿದೆ. ವಿಶ್ವದರ್ಜೆಯ ವಿಮಾನ
ನಿಲ್ದಾಣವನ್ನಾಗಿ ರೂಪಿಸಲು ಈ ಮೂಲಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.
ಸಚಿವ ಜೋಶಿಯವರು ಹುಬ್ಬಳ್ಳಿ ವಿಮಾನ ನಿಲ್ದಾಣ ವಿಶ್ವದರ್ಜೆಗೇರಿಸುವಂತೆ ಕೇಂದ್ರ ನಾಗರಿಕ ವಿಮಾನಯಾನ
ಸಚಿವಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ಸತತ ಸಂಪರ್ಕದಲ್ಲಿದ್ದು, ಮಾತುಕತೆ ನಡೆಸಿದ್ದರ
ಫಲವಾಗಿ ಇಂದು ವಿಶ್ವಮಟ್ಟದಲ್ಲಿ ಹುಬ್ಬಳ್ಳಿ ಗುರುತಿಸುವಂತಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಂಡು ನಿಲ್ದಾಣದ ಅಭಿವೃದ್ಧಿಗೆ ಅಗತ್ಯ ಮಾರ್ಗದರ್ಶನ ನೀಡುವಂತೆ ವಿಮಾನ ನಿಲ್ದಾಣ ಪ್ರಾಧಿಕಾರವು ಸಚಿವ ಜೋಶಿ ಅವರನ್ನು ಆಹ್ವಾನಿಸಿದೆ.
ಏಕಕಾಲಕ್ಕೆ 2,400 ಪ್ರಯಾಣಿಕರ ನಿರ್ವಹಣೆ ಸಾಮರ್ಥ್ಯ ಹುಬ್ಬಳ್ಳಿ ಇಂದು ಉತ್ತರ ಕರ್ನಾಟಕದ ಹೆಬ್ಟಾಗಿಲು ಮಾತ್ರವಲ್ಲ, ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ. 15,950 ಚ.ಮೀ. ವಿಸ್ತೀರ್ಣದಲ್ಲಿ ಹೊಸ ನಿಲ್ದಾಣದಲ್ಲಿ 4 ಏರೋಬ್ರಿಜ್ ಸಹಿತ ಏಕಕಾಲಕ್ಕೆ 2400 ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಇತ್ಯಾದಿ ಸೌಲಭ್ಯಗಳೊಂದಿಗೆ ಸುಸಜ್ಜಿತ ನಿಲ್ದಾಣವಾಗಲಿದೆ. ಸಮಸ್ತ ಉತ್ತರ ಕರ್ನಾಟಕದ ಹೆಮ್ಮೆಯ ನಿಲ್ದಾಣವಾಗಿ ಹೊರಹೊಮ್ಮಲಿದೆ. ಹೊಸ ನಿಲ್ದಾಣವು ಪರಿಸರ ಸ್ನೇಹಿಯಾಗಿರಲಿದೆ ((Green Rating for Integrated Habitat Assessment (GRIHA) 5 Star Rating)
ಹು-ಧಾ ವಿಮಾನ ಸೇವೆ ವಿಸ್ತರಣೆಗೆ ಬುನಾದಿ ಹುಬ್ಬಳ್ಳಿ-ಧಾರವಾಡ ರಾಜ್ಯದ ಎರಡನೇ ಅತೀ ದೊಡ್ಡ ನಗರವಾಗಿದೆ. ಧಾರವಾಡದಲ್ಲಿ ಭಾರತೀಯ ತಾಂತ್ರಿಕ ಸಂಸ್ಥೆ (ಐಐಐಟಿ) ಹಾಗೂ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಂತಹ ಬೃಹತ್ ಸಂಸ್ಥೆಗಳ ಕಾರ್ಯಾರಂಭ ಮಾಡಿವೆ. ಹೆಚ್ಚುತ್ತಿರುವ ವಿಮಾನ ಪ್ರಯಾಣಿಕರ ಸಂಖ್ಯೆ ಹಿನ್ನೆಲೆಯಲ್ಲಿ ಈ ಒಂದು ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಈ ವಿಮಾನ ನಿಲ್ದಾಣ ಸಾಕಷ್ಟು ನವೀಕರಣ ಕಾಣಲಿದ್ದು, ದೇಶದ ಹಲವು ನಗರಗಳಿಗೆ ಹುಬ್ಬಳ್ಳಿಯಿಂದ ವಿಮಾನ ಸೇವೆ ಆರಂಭಿಸಲು ಸಹ ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.