ಹುಬ್ಬಳ್ಳಿ ರೈಲ್ವೆ ವಿಭಾಗಕ್ಕೆ2633 ಕೋಟಿ ಆದಾಯ
ಪ್ರಸಕ್ತ ಆರ್ಥಿಕ ವರ್ಷದ ಡಿಸೆಂಬರ್ 2021ರವರೆಗೆ ಶೇ.97.85 ಸಮಯ ಪಾಲನೆ ಸಾಧಿಸಿದೆ.
Team Udayavani, Jan 27, 2022, 5:25 PM IST
ಹುಬ್ಬಳ್ಳಿ: ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವು ಪ್ರಸಕ್ತ ಆರ್ಥಿಕ ವರ್ಷದ ಡಿಸೆಂಬರ್ 2021ರವರೆಗೆ 24.134 ಮಿಲಿಯನ್ ಟನ್ ಸರಕು ಸಾಗಣೆ ಮಾಡುವ ಮೂಲಕ 2397 ಕೋಟಿ ರೂ.ಗಳ ಆದಾಯ ಗಳಿಸಿದೆ. ಈ ಅವಧಿಯಲ್ಲಿ ಹುಬ್ಬಳ್ಳಿ ವಿಭಾಗದ ಒಟ್ಟು ಆದಾಯವು 2633 ಕೋಟಿ ರೂ. ಆಗಿದೆ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅರವಿಂದ ಮಾಲಖೇಡೆ ಹೇಳಿದರು.
ಇಲ್ಲಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಾರ್ಯಾಲಯದಲ್ಲಿ ಬುಧವಾರ 73ನೇ ಗಣರಾಜ್ಯೋತ್ಸವದ ಧjಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಜುಮನಾಳದಲ್ಲಿ ಆರಕ್ಷಣಾ ರಹಿತ ಟಿಕೆಟಿಂಗ್ ವ್ಯವಸ್ಥೆ ಅನುಷ್ಠಾನಗೊಳಿಸಲಾಗಿದೆ. ವಿಭಾಗದ ವಿವಿಧ ನಿಲ್ದಾಣಗಳಲ್ಲಿ 23 ಹೊಸ ಎಟಿವಿಎಂ ಯಂತ್ರ, 30 ನಿಲ್ದಾಣಗಳಲ್ಲಿ ಸಾರ್ವಜನಿಕ ಸಂಬೋಧನಾ ವ್ಯವಸ್ಥೆ (ಪಿಎಎಸ್) ಅಳವಡಿಸಲಾಗಿದೆ. ಇನ್ನು 32ನಿಲ್ದಾಣಗಳಲ್ಲಿ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ. ಕೊಪ್ಪಳ ನಿಲ್ದಾಣದಲ್ಲಿ 2 ಲಿಫ್ಟ್‌ಗಳನ್ನು ಒದಗಿಸಲಾಗಿದೆ.
ಭದ್ರತೆ ಹೆಚ್ಚಿಸಲು ವಿಜಯಪುರ-ಗದಗ ನಿಲ್ದಾಣಗಳಲ್ಲಿ ವಿಡಿಯೋ ಕಣ್ಗಾವಲು ವ್ಯವಸ್ಥೆ ಒದಗಿಸಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ 17 ಶಾಶ್ವತ ವೇಗ ನಿರ್ಬಂಧ ತೆರವುಗೊಳಿಸಲಾಗಿದೆ. ರಸ್ತೆ ಕೆಳಸೇತುವೆಗಳ ನಿರ್ಮಾಣದ ಮೂಲಕ 4 ಲೆವೆಲ್ ಕ್ರಾಸಿಂಗ್ ಗೇಟ್‌ಗಳನ್ನು ತೆಗೆದು ಹಾಕಲಾಗಿದೆ. ರೈಲುಗಳ ಸಮಯ ಪಾಲನೆಯಲ್ಲಿ ಉತ್ತಮ ಸಾಧನೆ ಮುಂದುವರಿಸಿರುವ ವಿಭಾಗವು, ಪ್ರಸಕ್ತ ಆರ್ಥಿಕ ವರ್ಷದ ಡಿಸೆಂಬರ್ 2021ರವರೆಗೆ ಶೇ.97.85 ಸಮಯ ಪಾಲನೆ ಸಾಧಿಸಿದೆ. ಆರ್‌ಪಿಎಫ್ ಸಿಬ್ಬಂದಿ ಪ್ರಯಾಣಿಕರು ಮರೆತು ಹೋದ ಬ್ಯಾಗ್‌ಗಳು, ಮೊಬೈಲ್, ಲ್ಯಾಪ್‌ಟಾಪ್, ನಗದು ಮತ್ತು ಚಿನ್ನಾಭರಣ ಸೇರಿದಂತೆ 20 ಲಕ್ಷ ರೂ. ಮೌಲ್ಯದ ಲಗೇಜ್ ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಮರಳಿಸಿದ್ದಾರೆ ಎಂದರು.
ರಾಜಸ್ಥಾನದಲ್ಲಿ ಇತ್ತೀಚೆಗೆ ನಡೆದ 73ನೇ ರಾಷ್ಟ್ರೀಯ ಟ್ರಾಫಿಕ್ ಸೈಕ್ಲಿಂಗ್ ಚಾಂಪಿಯನ್ ಷಿಪ್‌ನಲ್ಲಿ ಮಹಿಳೆಯರ ಎಲೈಟ್-500 ಮೀ ಟೈಮ್ ಟ್ರಯಲ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಹುಬ್ಬಳ್ಳಿ ವಿಭಾಗದ ಉದ್ಯೋಗಿ ಅಲೀನಾ ರೇಜಿ, ಮುಂಬೈಯಲ್ಲಿ ನಡೆದ ಅಖೀಲ ಭಾರತ ರೈಲ್ವೆ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ 120 ಕೆಜಿ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದ ಅಭಿಷೇಕ ಬಿ. ಹೊರಕೇರಿ ಅವರನ್ನು ಸನ್ಮಾನಿಸಿದರು. ಅತ್ಯುತ್ತಮ ಕರ್ತವ್ಯ ನಿರ್ವಹಣೆಗೆ 23 ರೈಲ್ವೆ ಸಿಬ್ಬಂದಿಗೆ ಬಹುಮಾನ ನೀಡಿದರು.
ವಿಭಾಗದ ಅಪರ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಜೋಗೇಂದ್ರ ಯಾದವೇಂದು, ವಿಶ್ವಾಸ ಕುಮಾರ, ವರಿಷ್ಠ ವಿಭಾಗೀಯ ಸಿಬ್ಬಂದಿ ಅಧಿಕಾರಿ ವಿಷ್ಣುಗೌಡ, ವಿಭಾಗೀಯ ಭದ್ರತಾ ಆಯುಕ್ತ ಜಿತೇಂದ್ರ ಕುಮಾರ ಶರ್ಮಾ, ಹುಬ್ಬಳ್ಳಿ ವಿಭಾಗದ ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಘಟನೆ ಅಧ್ಯಕ್ಷೆ ಮೀನಲ್ ಗಾಂಧೆ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.